ಬಾರ್ಡರ್-ಗವಾಸ್ಕರ್ ಟ್ರೋಫಿ 5 ನೇ ಟೆಸ್ಟ್ ಸಿಡ್ನಿಯಲ್ಲಿ ನಡೆಯುತ್ತಿದೆ. 21ರ ಹರೆಯದ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ಭಾರತಕ್ಕೆ ಅದ್ವಿತೀಯ ಆಟಗಾರನಾಗಿ ಹೊರಹೊಮ್ಮಿದ್ದಾರೆ.
ಎಂಟು ಸಿಕ್ಸರ್ಗಳ ಸಹಾಯದಿಂದ ಅವರ ಮೊದಲ ಶತಕವು ಈ ಸರಣಿಯ ಪ್ರಮುಖ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ, ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಪೋಟೋದಲ್ಲಿ ನಿತೀಶ್ ಅವರು ತಮ್ಮ ಕುಟುಂಬದೊಂದಿಗೆ ಕಾರು ಖರೀದಿಸಿರುವುದನ್ನು ಕಾಣಬಹುದು. ʼನಿತಿಶ್ ಕುಮಾರ್ ರೆಡ್ಡಿ ಹೊಸ ಕಾರನ್ನು ಖರೀದಿಸಿದ್ದಾರೆʼ ಎಂಬ ಶೀರ್ಷಿಕೆಯೊಂದಿಗೆ ಪೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಕನ್ನಡ ಫ್ಯಾಕ್ಟ್ ಚೆಕ್ನಲ್ಲಿ ಪರಿಶೀಲನೆ ನಡೆಸೋಣ.

ಫ್ಯಾಕ್ಟ್ ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿರುವ ಪೋಟೋದ ಕುರಿತು ನಿಜವನ್ನು ತಿಳಿದುಕೊಳ್ಳಲು ಕನ್ನಡ ಫ್ಯಾಕ್ಟ್ ಚೆಕ್ ತಂಡವು ಮುಂದಾಯ್ತು. ಇದಕ್ಕಾಗಿ ವೈರಲ್ ಪೋಟೋಗೆ ಸಂಬಂಧಿಸಿದ ಕೆಲವು ಕೀವರ್ಡ್ಗಳನ್ನು ಬಳಸಿ ಹುಡುಕಾಟ ನಡೆಸಿದಾಗ, 2025ರ ಜನವರಿ 2ರಂದು AME ಇಂಗ್ಲೀಷ್ ಚಾನಲ್ನಲ್ಲಿ ಹಂಚಿಕೊಳ್ಳಲಾದ YouTube ವಿಡಿಯೋ ಲಭ್ಯವಾಗಿದೆ.
“ನಿತೀಶ್ ಕುಮಾರ್ ರೆಡ್ಡಿ ಅವರ ಕ್ರಿಕೆಟ್ ಮತ್ತು ಕಾರುಗಳ ಉತ್ಸಾಹ” ನಿತೀಶ್ ಕುಮಾರ್ ರೆಡ್ಡಿ ಅವರ ಕ್ರಿಕೆಟ್ ವೃತ್ತಿಜೀವನ ಮತ್ತು ಅವರ ವಾಹನ ಸಂಗ್ರಹದ ವಿವರಗಳನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ನಿತೀಶ್ ಸೆಪ್ಟೆಂಬರ್ 2023ರಲ್ಲಿ ಟೊಯೋಟಾ ಹೈ ರೈಡರ್ ಅನ್ನು ಖರೀದಿಸಿದ್ದಾರೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ವೈರಲ್ ಪೋಟೋದ ಕುರಿತು ಮತ್ತಷ್ಟು ತಿಳಿದುಕೊಳ್ಳಲು ನಿತೀಶ್ ಕುಮಾರ್ ರೆಡ್ಡಿ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯ ಕುರಿತು ಹುಡುಕಾಟ ನಡೆಸಿದಾಗ, 2023ರ ಸೆಪ್ಟೆಂಬರ್ 17ರಂದು ಅದೇ ವೈರಲ್ ಚಿತ್ರವನ್ನು ಪೋಸ್ಟ್ ಮಾಡಿ, ಅದರಲ್ಲಿ ಅವರು ” ಟೊಯೋಟಾಗೆ ಸ್ವಾಗತ” ಎಂದು ಬರೆದುಕೊಂಡಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಇತ್ತೀಚೆಗೆ ನಿತೀಶ್ ಕುಮಾರ್ ರೆಡ್ಡಿ ಕಾರು ಖರೀದಿಸಿರುವ ಚಿತ್ರವು ಸೆಪ್ಟೆಂಬರ್ 2023ರದ್ದಾಗಿದೆ. ಹಾಗಾಗಿ ಇಂತಹ ಪೋಸ್ಟ್ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳುವುದು ಉತ್ತಮ.
ಇದನ್ನು ಓದಿ :
Fact Check | RBI 5000 ರೂಪಾಯಿ ನೋಟನ್ನು ಬಿಡುಗಡೆ ಮಾಡಿದೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

