ಪಾಕಿಸ್ತಾನದ ಉಗ್ರರು ಭಾರತದ ಮೇಲೆ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆಸಿದ ನಂತರ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಇದರ ನಡುವೆ ಇದೀಗ ಭಾರತ ಉಗ್ರ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಯಚರಣೆ ನಡೆಸಿದ್ದು, ಅಲ್ಲಿನ 90 ಕ್ಕೂ ಅಧಿಕ ಉಗ್ರರನ್ನು ಮಟ್ಟ ಹಾಕಿದೆ. ಈ ಸಂದರ್ಭದಲ್ಲಿ ಇದೀಗ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದು ಭಾರತವು ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯ ವಿಡಿಯೋ ಎಂದು ಶೇರ್ ಮಾಡಲಾಗುತ್ತಿದೆ.

ವೈರಲ್ ವಿಡಿಯೋದಲ್ಲಿ ಅಲ್ ಜಜಿ಼ರ ಸುದ್ದಿ ವಾಹಿನಿಯ ಲಾಂಛನ ಇದ್ದು, ಇದರಲ್ಲಿ ಭೀಕರ ದಾಳಿಯಿಂದ ಭಯಬೀತರಾದ ಜನರು ಓಡುತ್ತಿರುವುದು ಕಂಡು ಬಂದಿದೆ. ಇದನ್ನು ನೋಡಿದ ಹಲವು ಮಂದಿ ಈ ವಿಡಿಯೋ ಅಪರೇಷನ್ ಸಿಂಧೂರ್ನದ್ದು ಎಂದುಭಾವಿಸಿ, ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡು, ವಿವಿಧ ರೀತಿಯ ಬರಹಗಳನ್ನು ಬರೆಯುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ
भारत ने पाकिस्तान से पहलगाम आतंकी हमले का बदला लिया है. ऑपरेशन सिंदूर के तहत भारतीय सेना ने पड़ोसी देश के आतंकी ठिकानों को राख कर दिया.
बहावलपुर, मुरीदके, मुजफ्फराबाद, कोटली, सियालकोट, गुलपुर, भिंबर और चक अमरू मे आतंकियों के मारे जाने की आशंका जताई जा रही है.👍 pic.twitter.com/94G17IjtEh— 😊 NiTu 😊 (@NituTiw81600052) May 7, 2025
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಹುಡುಕಾಟ ನಡೆಸಿದೆವು. ಈ ವೇಳೆ ನಮಗೆ 9 ನವೆಂಬರ್ 2023ರಂದು ಕುಡ್ಸ್ ನ್ಯೂಸ್ ನೆಟ್ವರ್ಕ್ ಎಂಬ ಎಕ್ಸ್ ಖಾತೆಯಿಂದ ಪೋಸ್ಟ್ ವೈರಲ್ ವಿಡಿಯೋವಿನ ಮೂಲಕ ಆವೃತ್ತಿಯನ್ನು ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ಇದರಲ್ಲಿ ಉತ್ತರ ಗಾಜಾ ಪಟ್ಟಿಯಲ್ಲಿರುವ ಇಂಡೋನೇಷ್ಯಾ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ.ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ, ಅವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.
Scenes documenting the violent bombing by the Israeli occupation that targeted the vicinity of the Indonesian Hospital in the northern #Gaza Strip. Several deaths and injuries have been reported, most of whom are children. pic.twitter.com/U0B7mWFLMX
— Quds News Network (@QudsNen) November 9, 2023
ಇದರಿಂದ ಮಾಹಿತಿ ಪಡೆದ ನಾವು ವಿವಿಧ ಕೀ ವರ್ಡ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವೊಂದು ವರದಿಗಳು ಕೂಡ ಕಂಡು ಬಂದಿದೆ. ಅದರಲ್ಲಿ ಅಲ್ ಜಜೀರಾದ ಯೂಟ್ಯೂಬ್ ಚಾನೆಲ್ನಲ್ಲಿ ಮೂಲ ವಿಡಿಯೋ ಪತ್ತೆಯಾಗಿದ್ದು, ಉತ್ತರ ಗಾಜಾ ಪಟ್ಟಿಯಲ್ಲಿರುವ ಇಂಡೋನೇಷ್ಯಾದ ಆಸ್ಪತ್ರೆಯ ಸುತ್ತ ಹಿಂಸಾತ್ಮಕ ವಾಯುದಾಳಿಗಳು ನಡೆದಿವೆ ಎಂದು ಈ ವಿಡಿಯೋಗೆ ಶೀರ್ಷಿಕೆಯನ್ನು ನೀಡಲಾಗಿತ್ತು. ಈ ಮೂಲಕ ವೈರಲ್ ವಿಡಿಯೋ ಇಸ್ರೇಲ್ ಮತ್ತು ಗಾಜಾಗೆ ಸಂಬಂಧಿಸಿದ್ದಾಗಿದೆ ಎಂಬುದು ನಮಗೆ ಖಚಿತವಾಯಿತು.
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಎಂದು ಇಸ್ರೇಲ್ ಮತ್ತು ಗಾಜಾದ ಸಂಘರ್ಷಕ್ಕೆ ಸಂಬಂಧಪಟ್ಟ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಒಮ್ಮೆ ಪರಿಶೀಲಿಸಿ, ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಬಿಹಾರ ಚುನಾವಣೆಗೂ ಮುನ್ನ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

