ಮಹಿಳಾ ಮೋರ್ಚಾದ ಅಧ್ಯಕ್ಷೆ ಸಿ.ಮಂಜುಳಾ ನೇತೃತ್ವದ ನಿಯೋಗವು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ಕಿಶೋರ್ ರಾಹತ್ಕರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಅದರಲ್ಲಿ ರಾಜ್ಯದಲ್ಲಿ ಶಕ್ತಿ ಯೋಜನೆ ವಿಫಲ, ಕಡಿಮೆ ಸಂಖ್ಯೆಯ ಬಸ್‌ಗಳಿವೆ ಎಂದು ಆರೋಪಿಸಿದೆ. ಈ ಕುರಿತು ಪ್ರಜಾವಾಣಿ ವರದಿ ಮಾಡಿದ್ದು, “ರಾಜ್ಯ ಸರ್ಕಾರವು ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ‘ಶಕ್ತಿ’ ಯೋಜನೆಯನ್ನು ಘೋಷಿಸಿದೆ. ಆದರೆ ಓಡಾಟಕ್ಕೆ ತುಕ್ಕುಹಿಡಿದ, ಸುಸ್ಥಿತಿಯಲ್ಲಿ ಇರದ ಬಸ್‌ಗಳನ್ನು ನೀಡಿದೆ. ಹೀಗಾಗಿ ಈ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಬಿಜೆಪಿ ಮಹಿಳಾ ಮೋರ್ಚಾವು ಮನವಿಯಲ್ಲಿ ಟೀಕಿಸಿದೆ. ‘ಮೊದಲು ಸಂಚರಿಸುತ್ತಿದ್ದ ಬಸ್‌ಗಳಿಗಿಂತ ಕಡಿಮೆ ಸಂಖ್ಯೆಯ ಬಸ್‌ಗಳನ್ನು ಕಾರ್ಯಾಚರಣೆಗೆ ಬಿಡಲಾಗಿದೆ. ಕೆಟ್ಟ ಸ್ಥಿತಿಯಲ್ಲಿರುವ ಬಸ್‌ಗಳ ಕಾರಣಕ್ಕೆ ಅಪಘಾತವಾಗಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ’ ಎಂದು ಆರೋಪಿಸಿದೆ” ಎಂದು ವರದಿಯಲ್ಲಿ ಹೇಳಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ರಾಜ್ಯ ಸರ್ಕಾರವು ಶಕ್ತಿ ಯೋಜನೆ ಘೋಷಿಸಿದ ನಂತರ ಹೊಸದಾಗಿ 5800 ಬಸ್‌ಗಳ ಖರೀದಿಗೆ ಅನುಮೋದನೆ ನೀಡಿದೆ ಎಂದು…
Author: admin
ಇತ್ತೀಚಿನ ದಿನಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ ಪರಿಣಾಮ ಸಾಕಷ್ಟು ಮಂದಿ ಅಮಾಯಕ ನಾಗರಿಕರು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗುತ್ತಿವೆ. ಇದೀಗ ಇಸ್ರೇಲಿನ ಪೊಲೀಸರು ಪಾಲೆಸ್ಟೈನ್‌ನ 9 ವರ್ಷದ ಬಾಲಕನನ್ನು ಥಳಿಸಿ ಕೊಂದಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಪೊಲೀಸರ ಗುಂಪೊಂದು ಬಾಲಕನೊಬ್ಬನ ಮೇಲೆ ಆಕ್ರಮಣಕಾರಿಯಾಗಿ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ವೈರಲ್ ಪೋಸ್ಟ್ ಅನ್ನು ನಿಜವೆಂದು ಭಾವಿಸಿ ಸಾಕಷ್ಟು ಮಂದಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಜೊತೆಗೆ ಇಸ್ರೇಲ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋಗೆ…
ಮೃಗಾಲಯದ ಆವರಣದಲ್ಲಿ ಆನೆಯೊಂದು ಮಗುವನ್ನು ಗುಂಡಿಯಿಂದ ನಿಧಾನವಾಗಿ ಎತ್ತಿ ಸುರಕ್ಷಿತವಾಗಿ ಅದರ ಹೆತ್ತವರಿಗೆ ಹಿಂತಿರುಗಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದು ನಿಜವಾದ ಘಟನೆಯನ್ನು ತೋರಿಸುತ್ತದೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ಹಂಚಿಕೊಂಡು ಮನುಷ್ಯ ಮತ್ತು ಪ್ರಾಣಿಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಕೂಡ ಬರೆದುಕೊಳ್ಳುತ್ತಿದ್ದಾರೆ. ಈ ವೈರಲ್ ವಿಡಿಯೋ ಸಾರ್ವಜನಿಕರ ನಡುವರ ವಿಭಿನ್ನ ಅಭಿಪ್ರಾಯಗಳಿಗೆ ದಾರಿ ಮಾಡಿಕೊಟ್ಟಿದೆ. ಸಾಕಷ್ಟು ಮಂದಿ ಈ ವಿಡಿಯೋಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಸೃಷ್ಟಿಸಿ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋ ಕೂಡ ಸಾರ್ವಜನಿಕ ವಲಯದಲ್ಲಿ ವಿವಿಧ ರೀತಿಯಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಈ ವೇಳೆ ನಮಗೆ ವೈರಲ್ ಪೋಸ್ಟ್‌ಗೆ ಸಂಬಂಧಿಸಿದಂತೆ ಜುಲೈ 24,…
ಆಪರೇಷನ್ ಅಖಲ್ ಎಂಬುದು ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಮಹತ್ವದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ದಟ್ಟವಾದ ಅಖಲ್ ಕಾಡುಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಗಸ್ಟ್ 4, 2025 ರ ಹೊತ್ತಿಗೆ ಅದು ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಕಾರ್ಯಾಚರಣೆಯ ಮಧ್ಯೆ ಅಂತರ್ಜಾಲದಲ್ಲಿ ಒಂದು ಹೇಳಿಕೆ ವೈರಲ್ ಆಗುತ್ತಿದೆ. X ನಲ್ಲಿ ಪಾಕಿಸ್ತಾನ ಮೂಲದ ಖಾತೆ ‘ಟ್ಯಾಕ್ಟಿಕಲ್ ಟ್ರಿಬನ್’, “4 ದಿನಗಳ ಕುಲ್ಗಮ್ ಎನ್‌ಕೌಂಟರ್ ನಡೆಯುತ್ತಿದೆ, 3 ಭಾರತೀಯ ಸೈನಿಕರು ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆಯು ಗನ್ಶಿಪ್ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ” ಎಂದು ಹೇಳಿಕೊಂಡಿದೆ. ಇದೇ ರೀತಿಯಲ್ಲಿ “ಕುಲ್ಗಾಮ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರ ಸ್ವಾತಂತ್ರ್ಯ ಹೋರಾಟಗಾರರೊಂದಿಗಿನ ಎನ್‌ಕೌಂಟರ್‌ನಲ್ಲಿ 3 ಭಾರತೀಯ ಸೇನಾ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ” ಎಂದು X ‘Himat75’ ಎಂಬ ಮತ್ತೊಂದು ಪಾಕಿಸ್ತಾನಿ ಖಾತೆ ಪೋಸ್ಟ್ ಮಾಡಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ…
ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ, ಅದರಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕವಾಗಿ ಒಬ್ಬ ಹುಡುಗಿಗೆ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡುಬರುತ್ತದೆ. ವೀಡಿಯೊದಲ್ಲಿ, ಆ ಹುಡುಗಿ ಹಿಂದೂ ಎಂದು ಹೇಳಲಾಗಿದ್ದು, ಅವಳೊಂದಿಗೆ ಒರಟಾಗಿ ವರ್ತಿಸುತ್ತಿರುವ ವ್ಯಕ್ತಿ ತನ್ನನ್ನು ಆಕೆಯ ಮುಸ್ಲಿಂ ಗೆಳೆಯ ಎಂದು ಹೇಳಿಕೊಳ್ಳುವುದು ಕಂಡು ಬಂದಿದೆ. ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, “ಆಕೆಯ ಜಿಹಾದಿ ಗೆಳೆಯ ಆಕೆಯನ್ನು ನಾಯಿಯಂತೆ ಹೊಡೆಯುತ್ತಿದ್ದಾನೆ. ಆಕೆಯ ಕುಟುಂಬದವರು ಆಕೆಯನ್ನು ಗದರಿಸಿದಾಗ, ಆಕೆ ಅವರಿಗೆ ಬೆದರಿಕೆ ಹಾಕುತ್ತಿದ್ದಳು” ಎಂದು ಬರೆದಿದ್ದಾರೆ. ಇದನ್ನು ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ಮುಸ್ಲಿಂ ಸಮುದಾಯದ ವಿರುದ್ಧ ಕೂಡ ಕಿಡಿ ಕಾರುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ…
ಭಾರತವು ರಷ್ಯಾದಿಂದ ತೈಲ ಆಮದು ನಿಲ್ಲಿಸಬೇಕು, ಇಲ್ಲದಿದ್ದರೆ ಭಾರತದ ಮೇಲೆ ಮತ್ತಷ್ಟು ಶುಂಕ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿರುವುದರ ನಡುವೆ, “ನಮ್ಮ ದೇಶದ ಆರ್ಥಿಕತೆಯು ವೈಟ್ ಹೌಸ್ ನಿಂದ ನಡೆಯುವುದಿಲ್ಲ. ಹಾಗಾಗಿ ಅಮೆರಿಕಕ್ಕೆ ಹೆದರಿ ರಷ್ಯಾದಿಂದ ತೈಲ ಆಮದು ನಿಲ್ಲುವುದಿಲ್ಲ” ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ ಎಂದು Middle Eastern Affairs ಎಂಬ ಎಕ್ಸ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಲಾಗಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. https://twitter.com/Middle_Eastern0/status/1951684981744337273 ಆ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಈ ಕೆಳಗೆ ನೋಡಬಹುದು. ಆ ಟ್ವೀಟ್ ಅನ್ನು ಸುಮಾರು 27 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದು ನಿಜವೆಂದು ಭಾವಿಸಿರುವ ಸಾಧ್ಯತೆ ಇದೆ. ಹಿನ್ನಲೆ ಭಾರತವು ರಷ್ಯಾದಿಂದ ತೈಲ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿರುವುದಕ್ಕೆ ಟ್ರಂಪ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿ, ಭಾರತದಿಂದ ಆಮದಾಗುವ ಸರಕುಗಳ ಮೇಲೆ 25% ತೆರಿಗೆ (ಟಾರಿಫ್) ವಿಧಿಸುವುದಾಗಿ ಜುಲೈ 30, 2025 ರಂದು ಘೋಷಿಸಿದ್ದಾರೆ,…
ಬಿಹಾರದ ಮುಜಫರ್‌ಪುರದ ಅವನೀಶ್ ಕುಮಾರ್ ಎಂಬ ಯುವಕ ಕೇವಲ 7,000 ರೂಪಾಯಿ ವೆಚ್ಚದಲ್ಲಿ ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿ ವಿಮಾನವೊಂದನ್ನು ರಚಿಸಿದ್ದಾನೆ ಎಂಬ ವೀಡಿಯೊ ಆನ್‌ಲೈನ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ ಒಂದು ಸಣ್ಣ ವಿಮಾನವು ಭೂಮಿಯಿಂದ ಮೇಲಕ್ಕೆ ಏರುವ ದೃಶ್ಯವನ್ನು ನೋಡಬಹುದು. ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, “ಬಿಹಾರದ ಮುಜಫರ್‌ಪುರದ ನಿವಾಸಿ ಅವನೀಶ್ ಕುಮಾರ್ ಎಂಬ ಯುವಕ ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿ ಕೇವಲ 7,000 ರೂಪಾಯಿ ವೆಚ್ಚದಲ್ಲಿ ವಿಮಾನವೊಂದನ್ನು ನಿರ್ಮಿಸಿದ್ದಾನೆ. ಈ ವಿಮಾನವು 300 ಅಡಿ ಎತ್ತರಕ್ಕೆ ಪರೀಕ್ಷಾ ಹಾರಾಟ ನಡೆಸಿ ಯಶಸ್ವಿಯಾಗಿ ಭೂಸ್ಪರ್ಶ ಮಾಡಿದೆ. ಯಾವುದೇ ತಾಂತ್ರಿಕ ಜ್ಞಾನವಿಲ್ಲದ ಈ ಬಾಲಕನ ಸಾಧನೆ ವಿಜ್ಞಾನಿಗಳ ಗಮನವನ್ನು ಸೆಳೆದಿದೆ” ಎಂದು ತಿಳಿಸಿದ್ದಾರೆ. ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ವಿಡಿಯೋವಿನ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್…
ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳು ಮತ್ತು ಮಠಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಒಂದು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್‌ನಲ್ಲಿ, “ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳು, ಮಠಗಳು ಮತ್ತು ಮಹಿಳೆಯರ ಮೇಲೆ ದಾಳಿಗಳನ್ನು ‘ಶಾಂತಿ ದೂತರು’ ನಡೆಸುತ್ತಿದ್ದಾರೆ. ಇವರ ಜನಸಂಖ್ಯೆ ಎಲ್ಲಿ ಹೆಚ್ಚಾಗುತ್ತದೆಯೋ, ಅಲ್ಲಿ ಹಿಂದೂಗಳ ಸ್ಥಿತಿ ಇಂತಹದ್ದೇ ಆಗುತ್ತದೆ” ಎಂದು ಉಲ್ಲೇಖಿಸಲಾಗಿದೆ. ವೈರಲ್ ವಿಡಿಯೋವನ್ನು ನೋಡಿದ ಸಾಕಷ್ಟು ಮಂದಿ ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇನ್ನೂ ಹಲವರು ವೈರಲ್ ವಿಡಿಯೋವನ್ನು ಬಳಸಿಕೊಂಡು ಭಾರತದ ಅಲ್ಪಸಂಖ್ಯಾತರ ವಿರುದ್ಧ ತಪ್ಪು ಅರ್ಥ ಬರುವಂತೆ ಕೂಡ ಬರಹಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು…
ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ. ಅದರಲ್ಲಿ ನೀಲಿ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಮನೆಯಿಂದ ಓಡಿಹೋಗಲು ಯತ್ನಿಸುತ್ತಾನೆ. ಆದರೆ, ಪೊಲೀಸರು ಆತನ ಕಾಲರ್ ಹಿಡಿದು ಸೋಫಾದ ಮೇಲೆ ಕೂರಿಸುತ್ತಾರೆ. ವೀಡಿಯೊದಲ್ಲಿ ಪೊಲೀಸರ ಜೊತೆಗೆ ಬಿಳಿ ಶರ್ಟ್ ಧರಿಸಿದ ವ್ಯಕ್ತಿ ಮತ್ತು ನೀಲಿ ಕುರ್ತಾ ಧರಿಸಿದ ಮಹಿಳೆಯೂ ಕಾಣಿಸುತ್ತಾರೆ. ಹಲವು ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ಹಿಂದೂ ಹೆಸರು ಹೇಳಿಕೊಂಡು ಹಿಂದೂ ಹುಡುಗಿಯನ್ನು ಪ್ರೀತಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ಬಗ್ಗೆ ಹಲವರು ವಿವಿಧ ರೀತಿಯಲ್ಲಿ ಬರೆದುಕೊಂಡು ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದು, ಫೇಸ್‌ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಹಿಂದೂ-ಮುಸ್ಲಿಂ ಜೋಡಿ. ತನ್ನ ಹೆಸರು “ಗೌರವ್” ಎಂದು ಹೇಳಿ, ಹಿಂದೂ ಯುವತಿಯೊಡನೆ ಪ್ರೇಮ ವ್ಯವಹಾರ ಮಾಡುತ್ತಿದ್ದ ಸಲೀಂ ಎಂಬ ಮುಸ್ಲಿಂ ಯುವಕ ಪೊಲೀಸರ ಎದುರು ಸತ್ಯ ಗೊತ್ತಾದಾಗ, ಓಡಲು ಯತ್ನಿಸಿದ. ಮೋಸ ತಿಳಿದ ಹಿಂದೂ ಯುವತಿಗೆ…
ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಜುಲೈ 21, 2025 ರಂದು ಅನಿರೀಕ್ಷಿತವಾಗಿ ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು . ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ , ತಮ್ಮ ವೈದ್ಯಕೀಯ ಆರೈಕೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಲು ತಾವು ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ. ಅವರ ಅವಧಿ ಪೂರ್ಣಗೊಳ್ಳುವ ಸುಮಾರು ಎರಡು ವರ್ಷಗಳ ಮೊದಲು ಅವರ ನಿರ್ಧಾರ ಬಂದಿದ್ದು, ವ್ಯಾಪಕ ಊಹಾಪೋಹ ಮತ್ತು ರಾಜಕೀಯ ಚರ್ಚೆಗೆ ಕಾರಣವಾಯಿತು.ಈಗ ಅಂತಹದ್ದೇ ಊಹಾಪೋಹದೊಂದಿಗೆ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧನಕರ್ ಅವರು ಸರ್ಕಾರಕ್ಕೆ ಹೆದರುತ್ತಿದ್ದಾರೆ ಎಂದು ಹೇಳುತ್ತಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಧನಖರ್, “ ಖರ್ಗೆ ಅವರ ಈ ಹೇಳಿಕೆಯ ಭಾಗವನ್ನು ಅಳಿಸಲಾಗುತ್ತದೆ. ಏಕೆ? ಏಕೆಂದರೆ ಭಾರತದ ರೈತರು ಮತ್ತು ಅವರ ಮಕ್ಕಳು ಯಾರಿಗೂ ಹೆದರುವುದಿಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಹೆದರುವುದಿಲ್ಲ.” ಎಂದು ಹೇಳುವುದು ಕಂಡು ಬಂದಿದೆ. ಇದೀಗ ಈ…
