ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಎಕ್ಸ್‌ನಲ್ಲಿ, ಒಂದು ವಿಡಿಯೋ ವೈರಲ್ ಆಗಿದ್ದು, ಅದನ್ನು “ಗುಜರಾತ್ ಮಾಡಲ್” ಎಂದು ಕರೆದು, ಗುಜರಾತ್‌ನಲ್ಲಿ ತೇಲುವ ಸೋಲಾರ್ ಪ್ಲಾಂಟ್‌ನಿಂದ ಬೃಹತ್ ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹಲವು ಬಲಪಂಥೀಯ ಖಾತೆಗಳು ಈ ವಿಡಿಯೋವನ್ನು ಹಂಚಿಕೊಂಡು, “ಅಭಿವೃದ್ಧಿ ಎಂದರೆ ಇದು, ಉಚಿತ ಕರೆಂಟ್ ಕೊಟ್ಟು ಬೆಲೆ ಏರಿಸುವುದು ಅಭಿವೃದ್ಧಿ ಅಲ್ಲ” ಎಂದು ಬರೆದಿದ್ದಾರೆ. https://twitter.com/VVR_Krish/status/1947878375705743499 ವಿಡಿಯೋ ನೋಡಿದ ಹಲವು ಸಾರ್ವಜನಿಕರು ಇದನ್ನು ನಿಜವೆಂದು ಭಾವಿಸಿ, ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ಕೆಲವರು ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆ ನಡೆಯುತ್ತಿರುವುದರಿಂದ ಈಗಲೇ ಬಿಜೆಪಿ ಗುಜರಾತ್ ಮಾಡಲ್ ಎಂದು ಸುಳ್ಳು ಹೇಳಲು ಆರಂಭಿಸಿದೆ ಎಂದು ಬರೆದುಕೊಂಡಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಗುಜರಾತ್ ಮಾಡಲ್‌ನ ತೇಲುವ ಸೋಲಾರ್ ಪ್ಲಾಂಟ್ ಎನ್ನುವ ವಿಡಿಯೋ ಕುರಿತು ಪರಿಶೀಲನೆ ನಡೆಸಲು…
Author: admin
ಭಾರತ ಸರ್ಕಾರವು ಇತ್ತೀಚೆಗೆ ‘ಸ್ವಚ್ಛ ಸರ್ವೇಕ್ಷಣ್ 2024-25’ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಇಂದೋರ್ ನಗರವು ಮತ್ತೆ ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಗೌರವಕ್ಕೆ ಭಾಜನವಾಗಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ರಸ್ತೆಯ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ವ್ಯಕ್ತಿಯ ಮೇಲೆ ಟ್ಯಾಂಕರ್‌ನಿಂದ ನೀರು ಸಿಂಪಡಿಸುವ ದೃಶ್ಯ ಕಾಣಿಸುತ್ತದೆ. ಈ ಘಟನೆ ಇಂದೋರ್‌ನಲ್ಲಿ ನಡೆದಿದೆ ಎಂಬ ಆರೋಪದೊಂದಿಗೆ ಹಲವರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಹಲವರು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡು ಭಾರತದ ಎಲ್ಲೆಡೆ ಈ ಕಾನೂನು ಜಾರಿ ಮಾಡಬೇಕು. ಎಲ್ಲೆಲ್ಲಿ ಈ ರೀತಿ ಮೂತ್ರ ವಿಸರ್ಜನೆ ಮಾಡುತ್ತಾರೋ ಅವರಿಗೆ ಇದೊಂದು ಪಾಠವಾಗಬೇಕು ಎಂದು ಬರೆದುಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ…
ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ ಆಜಾದ್‌ಗೆ ಸಂಬಂಧಿಸಿದ ಒಂದು ಹೇಳಿಕೆ ವೈರಲ್ ಆಗುತ್ತಿದೆ. ಈ ಹೇಳಿಕೆಯ ಪ್ರಕಾರ, “ಚಂದ್ರಶೇಖರ ಆಜಾದ್ ವಿಚಾರಣೆ ಎದುರಿಸುತ್ತಿದ್ದಾಗ, ಕಾನೂನು ಸಹಾಯಕ್ಕಾಗಿ ಮೋತಿಲಾಲ್ ನೆಹರು ಅವರನ್ನು ಸಂಪರ್ಕಿಸಿದರು, ಆದರೆ ನೆಹರು ಸಹಾಯ ನೀಡಲು ನಿರಾಕರಿಸಿದರು. ಇದಲ್ಲದೆ, ಮಹಾತ್ಮ ಗಾಂಧಿಯವರು ಆಜಾದ್ ಮತ್ತು ಅವರ ಕ್ರಾಂತಿಕಾರಿಗಳ ಹೋರಾಟವನ್ನು ‘ಹಿಂಸಾತ್ಮಕ’ ಎಂದು ಖಂಡಿಸಿದ್ದರು. ಆಲ್ಫ್ರೆಡ್ ಪಾರ್ಕ್‌ನಲ್ಲಿ ಬ್ರಿಟಿಷ್ ಪೊಲೀಸರಿಂದ ಸುತ್ತುವರೆಯಲ್ಪಟ್ಟಾಗ ಕಾಂಗ್ರೆಸ್‌ನಿಂದ ಯಾವುದೇ ಬೆಂಬಲ ಇಲ್ಲದೆ ಆಜಾದ್ ಹುತಾತ್ಮರಾದರು” ಎಂದು ಆರೋಪಿಸಲಾಗಿದೆ. ಈ ಪೋಸ್ಟ್‌ಗಳು ಆಜಾದ್‌ರನ್ನು ಕಾಂಗ್ರೆಸ್ ಕೈಬಿಟ್ಟಿತು ಎಂಬ ತಪ್ಪು ಗ್ರಹಿಕೆಯನ್ನು ಮೂಡಿಸುತ್ತಿವೆ. ಇದನ್ನು ನಿಜವೆಂದು ನಂಬಿ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಗಾಂಧಿ ಮತ್ತು ನೆಹರು ಅವರನ್ನು ಕಟುವಾದ ಶಬ್ದಗಳಿಂದ ಟೀಕಿಸುತ್ತಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ವಿರುದ್ಧ ಹಲವು ನಕಾರಾತ್ಮಕ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್…
ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಒಂದು ಹೇಳಿಕೆ ವೈರಲ್ ಆಗುತ್ತಿದೆ. ಈ ಹೇಳಿಕೆಯ ಪ್ರಕಾರ, “ಆಪರೇಷನ್ ಸಿಂಧೂರ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಿದೆ. ಭಾರತಕ್ಕೆ ಜಾಗತಿಕ ಮುಜುಗರ ಮತ್ತು ದೇಶದಲ್ಲಿ ರಾಜಕೀಯ ಕಂಪನಕ್ಕೆ ಕೂಡ ಇದು ಕಾರಣವಾಗಿದೆ, ಇದರಿಂದಾಗಿ ಜಗದೀಪ್ ಧನಕರ್ ಸ್ವಪಕ್ಷದ ವಿರುದ್ಧ ಅಸಮಾಧಾನವನ್ನು ಹೊಂದಿದ್ದರು, ಹೀಗಾಗಿ ವಿಪಕ್ಷಗಳಿಗೆ ಈ ಕುರಿತು ಸಂಸತ್ತಿನಲ್ಲಿ ಹೆಚ್ಚು ಅವಧಿಗಳ ಕಾಲ ಚರ್ಚಿಸಲು ಅವಕಾಶ ನೀಡಿದ್ದರು, ಇದರಿಂದ ಅವರ ಪಕ್ಷವೇ ಧನಕರ್ ಅವರ ರಾಜೀನಾಮೆಗೆ ಒತ್ತಾಯಿಸಿತು” ಎಂದು ಆರೋಪಿಸಲಾಗಿದೆ. ಕೆಲ ವಿಪಕ್ಷ ನಾಯಕರು ಕೂಡ ಅಪರೇಷನ್ ಸಿಂಧೂರ್ ಕುರಿತು ಕೊಂಚ ಹೆಚ್ಚು ಅವಧಿ ಚರ್ಚೆಗೆ ಧನಕರ್ ಅವರು ಅವಕಾಶ ನೀಡಿದ್ದರು, ಇದು ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟು ಮಾಡಿದೆ. ಈ ನಡುವೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜಿನಾಮೆ ನೀಡಿರುವುದು ಅನುಮಾನ ಮೂಡಿಸಿದೆ ಎಂದು ಬರೆದುಕೊಂಡಿದ್ದಾರೆ. ಇದೇ ಅನುಮಾನವನ್ನು ವ್ಯಕ್ತ ಪಡಿಸಿ ಕೆಲ ಮಾಧ್ಯಮಗಳು ಕೂಡ ವರದಿಯನ್ನು ಮಾಡಿವೆ. ಹೀಗಾಗಿ…
ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವ್ಯಾಪಕವಾಗಿ ಹಂಚಿಕೊಳ್ಳಲ್ಪಟ್ಟಿದೆ. ಈ ವಿಡಿಯೋದಲ್ಲಿ “ಉನ್ನಾವೋದಲ್ಲಿ ಹಲವಾರು ದಿನಗಳಿಂದ ಕಿರುಕುಳ ನೀಡುತ್ತಿದ್ದ ಅಲೀಮ್ ಶೇಖ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಸಾರ್ವಜನಿಕ ರಸ್ತೆಯಲ್ಲಿ ಹುಡುಗಿಯೊಬ್ಬಳು ಥಳಿಸುತ್ತಿರುವುದು” ಎಂದು ಕೋಮು ಆಯಾಮದೊಂದಿಗೆ ದಾಖಲಿಸಲಾಗಿದೆ. ಈ ವಿಡಿಯೋವನ್ನು ಹಲವರು ಮಾಹಿತಿಯೊಂದಿಗೆ ಹಂಚಿಕೊಂಡಿದ್ದಾರೆ, ಇದರಲ್ಲಿ ಆರೋಪಿಯನ್ನು ಮುಸ್ಲಿಂ ವ್ಯಕ್ತಿಯೆಂದು ಗುರುತಿಸಲಾಗಿದೆ. ವಿಡಿಯೋ ನೋಡಿದ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕಿಡಿ ಕಾರಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವರು ಲವ್ ಜಿಹಾದ್ ಹೀಗೆಯೇ ಆರಂಭಗೊಳ್ಳುವ ಮೊದಲು ಮೊಟಕುಗೊಳಿಸಬೇಕು ಎಂದು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋ ಹೀಗೆ ಹಲವು ಆಯಾಮಗಳಿಂದ ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಸರ್ಚ್ ಮೂಲಕ ಪರಿಶೀಲಿಸಿದೆವು.…
ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಇದರ ಪ್ರಕಾರ, ಅಮೆರಿಕದ ಸುಪ್ರೀಂಕೋರ್ಟ್, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸಂಬಂಧಿಸಿದಂತೆ ಆದೇಶವೊಂದನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆದೇಶದಲ್ಲಿ, “ಟ್ರಂಪ್ ಅವರ ಪೂರ್ವಜರು ಅಮೆರಿಕಕ್ಕೆ ಅನಧಿಕೃತವಾಗಿ ಪ್ರವೇಶಿಸಿದ್ದರಿಂದ, ಟ್ರಂಪ್ ಕುಟುಂಬವು ದೇಶವನ್ನು ತೊರೆಯಬೇಕು ಮತ್ತು ಡೊನಾಲ್ಡ್ ಟ್ರಂಪ್ ತಕ್ಷಣವೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ತಿಳಿಸಲಾಗಿದೆ ಎಂದು ಹಲವರು ಹಂಚಿಕೊಳ್ಳುತ್ತಿದ್ದಾರೆ. https://www.youtube.com/shorts/t5YCtk1-vMY ಈ ಪೋಸ್ಟ್‌ಗಳನ್ನು ಆಧಾರಿಸಿ ಹಲವರು ವೈರಲ್ ವಿಡಿಯೋ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಟ್ರಂಪ್ ಅವರ ವಿರುದ್ಧ ವ್ಯಾಪಕವಾಗಿ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಹಲವರು ವೈರಲ್ ಪೋಸ್ಟ್ ಅನ್ನು ನಿಜವೆಂದು ಭಾವಿಸಿ ಅಮೆರಿಕದಲ್ಲಿ ವಲಸಿಗರನ್ನು ಹೊರ ಹಾಕುವ ಪ್ರಕ್ರಿಯೆ ಸಂಪೂರ್ಣವಾಗಿ ನಿಂತಿದೆ ಎಂದು ಬರೆದುಕೊಂಡಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ಕುರಿತು ಸಂಪೂರ್ಣವಾಗಿ…
ಬಾಂಗ್ಲಾದೇಶದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಫೇಲ್ ಆದ ಬಳಿಕ ತಮ್ಮ ಶಿಕ್ಷಕನ ಮೇಲೆ ದಾಳಿ ಮಾಡುತ್ತಿರುವ ಘಟನೆಯನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಕೆಲವು ಮಹಿಳೆಯರು ಒಬ್ಬ ಪುರುಷನ ಮೇಲೆ ಹಲ್ಲೆಗೆ ಯತ್ನಿಸುತ್ತಿರುವುದು ಮತ್ತು ಅವನನ್ನು ಬಲವಂತವಾಗಿ ಹೊರಗೆ ಕರೆದೊಯ್ಯುವುದು ಕಂಡುಬಂದಿದೆ. ಫೇಸ್‌ಬುಕ್ ಬಳಕೆದಾರರು ಈ ವೀಡಿಯೊವನ್ನು ಶೇರ್ ಮಾಡಿ, “ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಕನ ಮೇಲೆ ದಾಳಿ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಒಬ್ಬ ಹಿಂದೂ ವಿದ್ಯಾರ್ಥಿ ಟಾಪರ್ ಆಗಿರುವುದರಿಂದ ಅವರು ಕೋಪಗೊಂಡಿದ್ದಾರೆ. ಇವರ ಮನಸ್ಥಿತಿ ಇದೇ ರೀತಿಯಾಗಿದೆ…!! ಈ ಸಮುದಾಯದವರೊಂದಿಗೆ ವ್ಯಾಪಾರ ಮಾಡುವ ಹಿಂದೂಗಳಿಗೆ ಏನು ಗತಿಯೋ” ಎಂದು ಕೆಲವರು ಬರೆದುಕೊಂಡು ವಿಡಿಯೋವನ್ನು ಹಂಚಿಕೊಂಡಿರುವುದು ಕಂಡು ಬಂದಿದೆ. ಈ ಫ್ಯಾಕ್ಟ್‌ಚೆಕ್‌ನಲ್ಲಿ ವೈರಲ್ ವಿಡಿಯೋದ ಬಗ್ಗೆ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ…
ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ಈಗಾಗಲೇ ಹಲವು ವರದಿಗಳು ಈ ಬಗ್ಗೆ ಬಂದಿವೆ. ಈ ಸಂದರ್ಭದಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿಮಾನ ನಿಲ್ದಾಣದಲ್ಲಿ ಪ್ರವಾಹದ ನೀರಿನಲ್ಲಿ ವಿಮಾನಗಳು ಸಿಲುಕಿರುವ ದೃಶ್ಯವನ್ನು ತೋರಿಸುವ ವೀಡಿಯೊ ವೈರಲ್ ಆಗುತ್ತಿದೆ, ಮತ್ತು ಇದು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಎಂದು ಹೇಳಿಕೊಳ್ಳಲಾಗುತ್ತಿದೆ. ಹಲವರು ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಲವರು ಇದನ್ನು ರಾಜಕೀಯವಾಗಿ ಬಳಸಿಕೊಂಡಿದ್ದು, ದೆಹಲಿ ಸರ್ಕಾರವನ್ನು ಮತ್ತು ಕೇಂದ್ರ ಸರ್ಕಾರವನ್ನು ಟೀಕೆ ಮಾಡಲಾಗುತ್ತಿದೆ. ಇನ್ನು ಕೆಲವರು ಈ ವಿಡಿಯೋವನ್ನು ಹಂಚಿಕೊಂಡು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದೆಹಲಿ ವಿಮಾನ ನಿಲ್ದಾಣ ಈ ರೀತಿಯ ಪ್ರವಾಹ ಸ್ಥಿತಿಯನ್ನು ಎದುರಿಸಿದೆ ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ…
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಒಂದು ವೀಡಿಯೊದಲ್ಲಿ, ಮಸೀದಿಯಂತೆ ಕಾಣುವ ಕಟ್ಟಡವೊಂದು ಬೆಂಕಿಯಲ್ಲಿ ಸುಡುತ್ತಿರುವ ದೃಶ್ಯ ಕಂಡುಬಂದಿದೆ. ಹಲವು ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು, ಸ್ಪೇನ್‌ನ ಜನರು ಮಸೀದಿಗೆ ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿರುವ ಬಳಕೆದಾರರು, “ಮುಸ್ಲಿಮರಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಸ್ಪೇನ್‌ನ ಜನರು, ಒಂದು ಪ್ರಮುಖ ಮಸೀದಿಗೆ ಬೆಂಕಿ ಹಚ್ಚಿ ಭಸ್ಮ ಮಾಡಿದ್ದಾರೆ. ಸ್ಪೇನ್‌ನ ಜನತೆ ಎಚ್ಚೆತ್ತಿದ್ದಾರೆ” ಎಂದು ಟಿಪ್ಪಣಿ ಬರೆದಿದ್ದಾರೆ. ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಇಂಡೋನೇಷಿಯಾದ ಸ್ಥಳೀಯ ಸುದ್ದಿ ಸಂಸ್ಥೆಯಾದ Radio Elshinta ತನ್ನ X ಖಾತೆಯಲ್ಲಿ ಅಕ್ಟೋಬರ್ 19, 2022 ರಂದು ಪ್ರಕಟಿಸಿದ ಪೋಸ್ಟ್ ಅನ್ನು ಕಂಡುಕೊಂಡಿದ್ದೇವೆ. ಈ…
ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ರಾಜನ ಮಗ ರಾಜನಾಗುವುದಿಲ್ಲ ಎಂದು ಕನ್ಹಯ್ಯಾ ಕುಮಾರ್ ಹೇಳುವುದನ್ನು ಕೇಳಬಹುದು. ಪ್ರಜಾಪ್ರಭುತ್ವದಲ್ಲಿ ಮತಗಳು ನಿರ್ಧರಿಸುತ್ತವೆ. ಬಿಹಾರ ಬಂದ್ ಸಮಯದಲ್ಲಿ ವೇದಿಕೆ ಏರಲು ಅವಕಾಶ ನೀಡದ ನಂತರ ರಾಹುಲ್ ಗಾಂಧಿ ವಿರುದ್ಧ ಕನ್ಹಯ್ಯಾ ಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಫೇಸ್‌ಬುಕ್ ಬಳಕೆದಾರ ‘ಬಿಹಾರ್ ವಾಲೆ’ ಜುಲೈ 15, 2025 ರಂದು ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು “ಕನ್ಹಯ್ಯಾ ಕುಮಾರ್ ರಾಹುಲ್ ಗಾಂಧಿಯನ್ನು ಏಕೆ ಶಪಿಸುತ್ತಿದ್ದಾರೆ?? ಅವರು ಪಕ್ಷ ಬದಲಾಯಿಸಲಿದ್ದಾರೆಯೇ?? ಈಗ ರಾಹುಲ್ ಗಾಂಧಿ ಅರ್ಥಮಾಡಿಕೊಂಡಿರಬೇಕು… ಕೆಂಪು ಬಾವುಟ ಹೊಂದಿರುವ ಎಲ್ಲರೂ ನಿಷ್ಠಾವಂತರಲ್ಲ!” ಎಂದು ಬರೆದುಕೊಂಡಿದ್ದಾರೆ. ಇದೇ ರೀತಿಯಾಗಿ ಹಲವರು ವಿವಿಧ ಆಯಾಮಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ…
