2022 ರಲ್ಲಿ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್ ಅವರ ಹತ್ಯೆಯನ್ನು ಆಧರಿಸಿದ ಉದಯಪುರ ಫೈಲ್ಸ್ ಎಂಬ ಹೆಸರಿನ ಚಲನಚಿತ್ರ ಬಿಡುಗಡೆಗೆ ನಿರ್ಧರಿಸಲಾಗಿತ್ತು ಆದರೆ ದೆಹಲಿ ಹೈಕೋರ್ಟ್ ಜುಲೈ 10, 2025 ರಂದು ಅದನ್ನು ತಡೆಹಿಡಿದಿದೆ. ಈ ಸಂದರ್ಭದಲ್ಲಿ, ಜನರ ಗುಂಪೊಂದು ಮನೆಗೆ ಬೆಂಕಿ ಹಚ್ಚುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಉದಯಪುರ ಫೈಲ್ಸ್ ಚಿತ್ರದಲ್ಲಿ ಭಾಗಿಯಾಗಿರುವ ಕಲಾವಿದನ ಮನೆಯನ್ನು ಮುಸ್ಲಿಮರು ಸುಟ್ಟುಹಾಕಿದ್ದಾರೆ ಎಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಇದನ್ನು ನಿಜವೆಂದು ಭಾವಿಸಿ ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿ ವಿವಿಧ ಬರಹಗಳನ್ನು ಬರೆದು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್…
Author: admin
ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊರ್ವನಿಗೆ ಒಬ್ಬ ಪೊಲೀಸ್ ಅಧಿಕಾರಿ ಬೆಲ್ಟ್ನಲ್ಲಿ ಮನಬಂದಂತೆ ಹೊಡೆಯುತ್ತಿರುವುದು ಕಾಣಬಹುದು. ಪೊಲೀಸ್ ಅಧಿಕಾರಿ ಹೊಡೆಯುವಾಗ ಇನ್ನೂ ಇಬ್ಬರು ವ್ಯಕ್ತಿಗಳು ಸಂತ್ರಸ್ತನನ್ನು ಹಿಡಿದುಕೊಂಡಿರುವುದು ಕಂಡು ಬಂದಿದೆ. ಇದು ಉತ್ತರ ಕನ್ನಡದಲ್ಲಿ ನಡೆದ ಘಟನೆ ಎಂದು ಬರೆದುಕೊಂಡು ಸಾಕಷ್ಟು ಮಂದಿ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಫೇಸ್ಬುಕ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡು ” ಇದು ರಾಜ್ಯ ಸರ್ಕಾರದ ಆದೇಶವೇ ? ರಾಜ್ಯದ ಗೃಹ ಸಚಿವರು ತಾವೇ ಉತ್ತರಿಸಬೇಕು ರಾಜ್ಯದ ಜನತೆ ತಿಳಿಯಬೇಕು ಇದಕ್ಕೆಲ್ಲ ಅವಕಾಶ ಇದೆಯಾ ನಮ್ಮ ಪೊಲೀಸ್ ಠಾಣೆಗಳಲ್ಲಿ ಅನ್ನುವುದು ” ಎಂದು ಬರೆದುಕೊಂಡಿದ್ದಾರೆ. ಈ ರೀತಿಯ ಇನ್ನೂ ಹಲವು ಪೋಸ್ಟ್‌ಗಳು ಇದೇ ರೀತಿಯ ನಿರೂಪಣೆಯೊಂದಿಗೆ ನಮಗೆ ಕಂಡು ಬಂದಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ನಾವು ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು…
ಭಾರತ ಇತ್ತೀಚೆಗೆ ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ್ ಕುರಿತು ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲೂ ಮುಖ್ಯವಾಗಿ X ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.. ‘TheDailyCPEC’ ಖಾತೆಯ ಬಳಕೆದಾರರೊಬ್ಬರು “ಬ್ರೇಕಿಂಗ್: ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಡ್ರೋನ್‌ಗಳು ಭಾರತೀಯ ಭೂಪ್ರದೇಶದೊಳಗೆ 700 ಕಿ.ಮೀ. ಹಾರಿದವು ಎಂದು ಕೆಲವು ವರದಿಗಳು ಹೇಳುತ್ತಿದ್ದಾವೆ” ಎಂದು ಬರೆದುಕೊಡಿದ್ದಾರೆ. ಇದೇ ರೀತಿಯ ಹಲವರು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದು, ಇದರಲ್ಲಿ ಕೆಲ ಪಾಕಿಸ್ತಾನಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ಭಾರತದ ವಿರುದ್ಧ ಉದ್ದೇಶಪೂರ್ವಕವಾಗಿ ಈ ರೀತಿಯ ಆಧಾರ ರಹಿತ ಹಲವು ಸುದ್ದಿಗಳನ್ನು ಹಂಚಿಕೊಂಡಿರುವುದು ಕಂಡು ಬಂದಿದೆ. ಇದನ್ನೇ ಬಳಸಿಕೊಂಡು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ವಿವಿಧ ರೀತಿಯ ನಕಾರಾತ್ಮಕ ಅಭಿಪ್ರಾಯವನ್ನು ಭಿತ್ತುವ ಕೆಲಸವನ್ನು ಪಾಕಿಸ್ತಾನ ಮಾಡಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ…
“ಜೂನ್ 12 ರ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಅಂತರರಾಷ್ಟ್ರೀಯ ಪ್ರಯಾಣಿಕರು ಭಾರತೀಯ ಪೈಲಟ್‌ಗಳು ಹಾರಿಸುವ ವಿಮಾನಗಳಲ್ಲಿ ಕುಳಿತುಕೊಳ್ಳಲು ನಿರಾಕರಿಸಲು ಪ್ರಾರಂಭಿಸಿದ್ದಾರೆ” ಎಂದು ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಭಾರತದ ವಿರೋಧಿ ರಾಷ್ಟ್ರಗಳ ಕೆಲ ಪ್ರಜೆಗಳು ಈ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅಪಪ್ರಚಾರ ಮಾಡಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ಈ ಪೋಸ್ಟ್‌ಗಳನ್ನು ಪರಿಶೀಲನೆ ಕೂಡ ನಡೆಸದೆ ಸಾಕಷ್ಟು ಮಂದಿ ನಿಜವೆಂದು ನಂಬಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವೈರಲ್ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ. ಇನ್ನೂ ಹಲವರು ಇದು ಸುಳ್ಳು ಎಂದು ಪ್ರತಿಪಾದಿಸಿದರು, ಬಹುಪಾಲು ಮಂದಿ ವೈರಲ್ ಪೋಸ್ಟ್ ಅನ್ನು ಮಾತ್ರ ಶೇರ್ ಮಾಡುತ್ತಲೇ ಇದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್…
ಬಾಲಿವುಡ್ ನಟ ಅಜಯ್ ದೇವ್‌ಗನ್ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡುತ್ತಿರುವ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಸಿಎಂ ರೇವಂತ್ ರೆಡ್ಡಿ ದೇವಗನ್ ಅವರಿಗೆ ಹಾರ ಮತ್ತು ಹೂಗುಚ್ಚ ನೀಡುತ್ತಿರುವ ಫೋಟೋಗಳನ್ನು ಹಂಚಿಕೊಂಡ ಹಲವರು, ನಟ ಅಜಯ್ ದೇವಗನ್ ಅಧಿಕೃತವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಬರೆದುಕೊಂಡಿದ್ದಾರೆ. ವೈರಲ್ ಫೋಟೋ ನೋಡಿದ ಹಲವು ಮಂದಿ ಅಜಯ್ ದೇವ್‌ಗನ್ ನಿಜವಾಗಿಯೂ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ನಂಬಿದ್ದಾರೆ. ಹೀಗಾಗಿ ಈ ಫೋಟೋ ಹಲವು ರಾಜಕೀಯ ಚರ್ಚೆಗೆ ಕೂಡ ಕಾರಣವಾಗಿದೆ. ಸಾಕಷ್ಟು ಮಂದಿ ತೆಲಂಗಾಣ ಕಾಂಗ್ರೆಸ್ ತನ್ನ ವರ್ಚಸ್ಸು ಕಳೆದುಕೊಳ್ಳುತ್ತಿರುವುದರಿಂದ ಈಗ ಸ್ಟಾರ್ ನಟ-ನಟಿಯರನ್ನು ತಮ್ಮ ಪಕ್ಷಕ್ಕೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳುತ್ತಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಕಲಾಗುತ್ತಿರುವ ವೈರಲ್ ಫೋಟೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋ ಕುರಿತು ಪರಿಶೀಲನೆ ನಡೆಸಲು…
ನಿಷೇಧಿತ ದಂಗೆಕೋರ ಗುಂಪು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ULFA-I) ತನ್ನ ಮೇಲೆ ಭಾರತೀಯ ಸೇನೆಯು ಮ್ಯಾನ್ಮಾರ್‌ನ ಸಾಗಿಂಗ್ ಪ್ರದೇಶದ ಶಿಬಿರಗಳ ಮೇಲೆ ಭಾನುವಾರ (ಜುಲೈ 13) ಬೆಳಗಿನ ಜಾವ 2 ಗಂಟೆಯಿಂದ 4 ಗಂಟೆಯ ನಡುವೆ ಡ್ರೋನ್ ದಾಳಿ ನಡೆಸಿದೆ, ತನ್ನ ಮೂವರು ಹಿರಿಯ ನಾಯಕರನ್ನು ಕೊಂದಿದೆ ಎಂದು ಹೇಳಿಕೊಂಡಿದೆ. ಈ ಸುದ್ದಿ ಬಹುದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಇದರ ನಡುವೆ ಮಗುವೊಂದು ತೀವ್ರ ಗಾಯಗಳೊಂದಿಗೆ ಹಾಸಿಗೆಯ ಮೇಲೆ ಮಲಗಿರುವುದು ಕಂಡು ಬಂದಿದ್ದು, ಇದು ಭಾರತೀಯ ಸೇನೆಯ ದಾಳಿಯಿಂದ ನಡೆದ್ದು ಎಂದು ಕೆಲವರು ಬರೆದುಕೊಂಡರೆ, ಇನ್ನೂ ಕೆಲವರು ಈ ಮಗು ಸತ್ತು ಹೋಗಿದೆ ಎಂದು ಬರೆದುಕೊಂಡಿದ್ದಾರೆ. ಆರೋಪಗಳು ವೈರಲ್ ಆದ ಸ್ವಲ್ಪ ಸಮಯದ ನಂತರ, ಮ್ಯಾನ್ಮಾರ್‌ನಲ್ಲಿ ಉಲ್ಫಾ-ಐ ಶಿಬಿರಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಗಾಯಗೊಂಡ ಮಗುವನ್ನು ತೋರಿಸುವ ಫೋಟೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದನ್ನು ನಿಜವೆಂದು ನಂಬಿರುವ ಹಲವರು ವೈರಲ್ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ…
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಪೂರಿ ಜಗನ್ನಾಥನ ರಥಯಾತ್ರೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ನಾಟಕ’ ಎಂದು ಕರೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆ ಮೂಲಕ ಸಂಸತ್ತಿನ ವಿಪಕ್ಷ ನಾಯಕನನ್ನು ಹಿಂದೂ ವಿರೋಧಿ ಎಂದು ಕರೆದಿರುವ ಹಲವರು, ರಾಹುಲ್ ಗಾಂಧಿ ವಿರುದ್ಧ ವ್ಯಾಪಕವಾಗಿ ಟೀಕೆ ಮಾಡುತ್ತಿದ್ದಾರೆ. ವೈರಲ್ ವಿಡಿಯೋವನ್ನು ಕೂಡ ಪರಿಶೀಲನೆ ನಡೆಸಿದಾಗ ಅದರಲ್ಲಿ ರಾಹುಲ್ ಗಾಂಧಿ ಅವರು “ ಊಹಿಸಿಕೊಳ್ಳಿ ಒಡಿಶಾದಲ್ಲಿ ಜಗನ್ನಾಥ ಯಾತ್ರೆ ನಡೆದಾಗ, ರಥ ಹೊರಬರುತ್ತದೆ, ಲಕ್ಷಾಂತರ ಜನರು ಅದನ್ನು ವೀಕ್ಷಿಸುತ್ತಾರೆ, ಅದರ ಹಿಂದೆ ಸಾಗುತ್ತಾರೆ. ಮತ್ತು ನಂತರ ಒಂದು ನಾಟಕ ನಡೆಯುತ್ತದೆ.” ಎಂದು ಹೇಳುವುದು ಕಂಡು ಬಂದಿದೆ. ಹೀಗಾಗಿ ವೈರಲ್ ವಿಡಿಯೋವನ್ನು ಸಾಕಷ್ಟು ಮಂದಿ ನಿಜವೆಂದು ಬಾವಿಸಿ ವಿಡಿಯೋವನ್ನು ಹಂಚಿಕೊಂಡು ರಾಹುಲ್ ಗಾಂಧಿ ಅವರು ವಿರುದ್ಧ ವ್ಯಾಪಕವಾಗಿ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪತ್ತೆ ಹಚ್ಚೋಣ https://twitter.com/RKSahu15/status/1944372368480108892 ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ…
ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸತ್ತಿನ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮಂಗಳವಾರ ಲಕ್ನೋದ ವಿಶೇಷ ಸಂಸದ-ಶಾಸಕ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಿದ್ದರು. ಈ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆಯಲು ಆದೇಶಿಸಿತು ಆದರೆ ಜಾಮೀನು ಅರ್ಜಿಯನ್ನು ಸ್ವೀಕರಿಸಿದ ನಂತರ ಅವರನ್ನು ಬಿಡುಗಡೆ ಮಾಡಿತು. ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಯವರ ಹಾಜರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರಲ್ಲಿ ನ್ಯಾಯಾಧೀಶರು ಸ್ವತಃ ರಾಹುಲ್ ಗಾಂಧಿಯವರ ಅಭಿಮಾನಿಯಾಗಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಲವರು ಇದನ್ನು ನಿಜವೆಂದು ನಂಬಿ ದೇಶದ ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯೇ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ವಿಚಿತ್ರ ಎಂದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಪಡೆಯದೆ ಬಿಜೆಪಿ IT ಸೆಲ್‌ನ ಸಂಚಾಲಕರಾದ ಅಮಿತ್ ಮಾಳವಿಯ ಅವರು ಕೂಡ ಇದೇ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಹಲವು ಸುಳ್ಳು ಮಾಹಿತಿಯನ್ನು ಹಂಚಿಕೊಂಡು ಟೀಕೆಗೆ ಗುರಿಯಾಗಿದ್ದ ಮಾಳವಿಯ ಅವರು ಈ ಬಾರಿಯೂ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಹೀಗೆ ಅಮಿತ್…
ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಓರ್ವ ವ್ಯಕ್ತಿ ರಕ್ತದ ಮಡುವಿನಲ್ಲಿ ರಸ್ತೆಯ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಕೆಲ ದುಷ್ಕರ್ಮಿಗಳು ಪಕ್ಕದಲ್ಲಿದ್ದ ದೊಡ್ಡ ಕಲ್ಲನ್ನು ಮೂರು-ನಾಲ್ಕು ಬಾರಿ ಆತನ ಮೇಲೆ ಹಾಕಿ ಸಾಯಿಸುತ್ತಿರುವುದು ಕಂಡು ಬಂದಿದೆ. ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಪರಿಸ್ಥಿತಿ ಹೀಗಿದೆ ಎಂದು ಈ ವಿಡಿಯೋದಲ್ಲಿ ಬರೆದುಕೊಂಡು ಹಂಚಿಕೊಳ್ಳಲಾಗುತ್ತಿದೆ. ಕೆಲ ಮಾಧ್ಯಮಗಳು ಕೂಡ ಇದನ್ನೇ ನಿಜವೆಂದು ವರದಿ ಕೂಡ ಮಾಡಿವೆ. ಫೇಸ್ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಬಾಂಗ್ಲಾದೇಶ ಹಿಂದೂಗಳ ಪರಿಸ್ಥಿತಿ. ಎಚ್ಚರ ಹಿಂದುಗಳೇ’’ ಎಂದು ಬರೆದುಕೊಂಡಿದ್ದಾರೆ ವಿಡಿಯೋ ನೋಡಿದ ಹಲವರು ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಂಡು ಮುಸಲ್ಮಾನರ ವಿರುದ್ಧವೂ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು…
ಮೊಹರಂ ಹಬ್ಬದ ಸಂದರ್ಭದಲ್ಲಿ, ಜುಲೈ 06, 2025 ರಂದು ದೇಶದ ವಿವಿಧ ಭಾಗಗಳಲ್ಲಿ ಮೆರವಣಿಗೆಗಳು ನಡೆದವು. ಈ ಸಂದರ್ಭದಲ್ಲಿ, ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ನಡೆದ ಮೊಹರಂ ಮೆರವಣಿಗೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದನ್ನು ನಿಜವೆಂದು ನಂಬಿರುವ ಹಲವರು ಕೋಮು ಬರಹಗಳನ್ನು ಬರೆದುಕೊಂಡು ಮುಸಲ್ಮಾನ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಲಾಗುತ್ತಿದೆ. ಇನ್ನೂ ಕೆಲವರು ಉತ್ತರಪ್ರದೇಶದ ಪೊಲೀಸ್ ಇಲಾಖೆ ಈ ಬಗ್ಗೆ ಯಾವುದೇ ರೀತಿಯಾದ ಕ್ರಮ ತೆಗೆದುಕೊಳ್ಳದಿರುವುದು ಅಚ್ಚರಿಯಾಗಿದೆ ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ https://twitter.com/SonOfBharat7/status/1942096708126593260 ಫ್ಯಾಕ್ಟ್‌ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಗೂಗಲ್…
