Fact Check | 76ನೇ ಗಣರಾಜ್ಯೋತ್ಸವದಲ್ಲಿ ಟಿಪ್ಪು ಸುಲ್ತಾನ್‌ನ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು
2025ರ ಜನವರಿ 26ರಂದು ಭಾರತದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೆರವೇರಿಸಿದರು. ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು ಮತ್ತು ಶೌರ್ಯ ಪ್ರಶಸ್ತಿ ವಿಜೇತರನ್ನು ಗೌರವಿಸಲಾಯಿತು. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಕರ್ನಾಟಕ, ಪಂಜಾಬ್, ಗುಜರಾತ್, ತ್ರಿಪುರ, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರಾಖಂಡ ಮತ್ತು ಇತರ ರಾಜ್ಯಗಳ ಸ್ತಬ್ದ ಚಿತ್ರಗಳು ಭಾಗವಹಿಸಿದ್ದವು. ಸಶಸ್ತ್ರ ಪಡೆಗಳು ಮತ್ತು ಹಲವಾರು ಕೇಂದ್ರ…
