
Fact Check | ಇಸ್ರೇಲಿ ಪೊಲೀಸರು ಪ್ಯಾಲೆಸ್ಟೈನ್ ಮಗುವನ್ನು ಕೊಂದಿದ್ದಾರೆ ಎಂದು ಸ್ವೀಡೆನ್‌ನ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ
ಇತ್ತೀಚಿನ ದಿನಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಿದ ಪರಿಣಾಮ ಸಾಕಷ್ಟು ಮಂದಿ ಅಮಾಯಕ ನಾಗರಿಕರು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಂಬಂಧಪಟ್ಟ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗುತ್ತಿವೆ. ಇದೀಗ ಇಸ್ರೇಲಿನ ಪೊಲೀಸರು ಪಾಲೆಸ್ಟೈನ್‌ನ 9 ವರ್ಷದ ಬಾಲಕನನ್ನು ಥಳಿಸಿ ಕೊಂದಿದ್ದಾರೆ ಎಂದು ಬರೆದುಕೊಂಡು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಪೊಲೀಸರ ಗುಂಪೊಂದು ಬಾಲಕನೊಬ್ಬನ ಮೇಲೆ ಆಕ್ರಮಣಕಾರಿಯಾಗಿ ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ವೈರಲ್ ಪೋಸ್ಟ್ ಅನ್ನು ನಿಜವೆಂದು ಭಾವಿಸಿ ಸಾಕಷ್ಟು…