Fact Check | ಇಂದೋರ್‌ನಲ್ಲಿ ರಸ್ತೆಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ನೀರು ಸುರಿಯಲಾಗಿಲ್ಲ
ಭಾರತ ಸರ್ಕಾರವು ಇತ್ತೀಚೆಗೆ ‘ಸ್ವಚ್ಛ ಸರ್ವೇಕ್ಷಣ್ 2024-25’ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಇಂದೋರ್ ನಗರವು ಮತ್ತೆ ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಗೌರವಕ್ಕೆ ಭಾಜನವಾಗಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ರಸ್ತೆಯ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವ ವ್ಯಕ್ತಿಯ ಮೇಲೆ ಟ್ಯಾಂಕರ್‌ನಿಂದ ನೀರು ಸಿಂಪಡಿಸುವ ದೃಶ್ಯ ಕಾಣಿಸುತ್ತದೆ. ಈ ಘಟನೆ ಇಂದೋರ್‌ನಲ್ಲಿ ನಡೆದಿದೆ ಎಂಬ ಆರೋಪದೊಂದಿಗೆ ಹಲವರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಹಲವರು…
