ಶಕ್ತಿ ಯೋಜನೆ ವಿಫಲ, ಕಡಿಮೆ ಸಂಖ್ಯೆಯ ಬಸ್‌ಗಳಿವೆ ಎಂಬ ಬಿಜೆಪಿ ಮಹಿಳಾ ಮೋರ್ಚಾದ ಆರೋಪ ಸಂಪೂರ್ಣ ಸುಳ್ಳು
ಮಹಿಳಾ ಮೋರ್ಚಾದ ಅಧ್ಯಕ್ಷೆ ಸಿ.ಮಂಜುಳಾ ನೇತೃತ್ವದ ನಿಯೋಗವು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ಕಿಶೋರ್ ರಾಹತ್ಕರ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಅದರಲ್ಲಿ ರಾಜ್ಯದಲ್ಲಿ ಶಕ್ತಿ ಯೋಜನೆ ವಿಫಲ, ಕಡಿಮೆ ಸಂಖ್ಯೆಯ ಬಸ್‌ಗಳಿವೆ ಎಂದು ಆರೋಪಿಸಿದೆ. ಈ ಕುರಿತು ಪ್ರಜಾವಾಣಿ ವರದಿ ಮಾಡಿದ್ದು, “ರಾಜ್ಯ ಸರ್ಕಾರವು ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ‘ಶಕ್ತಿ’ ಯೋಜನೆಯನ್ನು ಘೋಷಿಸಿದೆ. ಆದರೆ ಓಡಾಟಕ್ಕೆ ತುಕ್ಕುಹಿಡಿದ, ಸುಸ್ಥಿತಿಯಲ್ಲಿ ಇರದ ಬಸ್‌ಗಳನ್ನು ನೀಡಿದೆ. ಹೀಗಾಗಿ ಈ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ’…
