Fact Check | ಭಾರತ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವನ್ನು ಡೊನಾಲ್ಡ್ ಟ್ರಂಪ್ ಅಣಕಿಸಿದ್ದಾರೆ ಎಂಬುದು ಸುಳ್ಳು
ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕ್ರಮಕ್ಕಾಗಿ ಭಾರತ ಈಗ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಈ ನಡುವೆ ಪಾಕಿಸ್ತಾನದ ವಿರುದ್ಧ ಪ್ರಮುಖ ಕ್ರಮಗಳನ್ನು ಕೈಗೊಂಡಿರುವ ಭಾರತ, 1960ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ಕೂಡ ರದ್ದುಗೊಳಿಸಿದೆ. ಈಗ ಇದಕ್ಕೆ ಸಂಬಂಧಪಟ್ಟಂತೆ ಡೊನಾಲ್ಡ್ ಟ್ರಂಪ್ ಪಾಕಿಸ್ತಾನವನ್ನು ಅಪಹಸ್ಯ ಮಾಡಿದ್ದಾರೆ ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀರಿನ ಬಾಟಲಿಯನ್ನು ಹಿಡಿದು “ನನಗೆ ನೀರು ಬೇಕು, ನನಗೆ…
