Fact Check: ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಅನರ್ಹಗೊಂಡ ಕ್ಷಣದ ವೀಡಿಯೋ ಎಂದು ಹಳೆಯ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ
ಮಹಿಳೆಯರ 50 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮುನ್ನ ಕುಸ್ತಿಪಟು ವಿನೇಶ್ ಫೋಗಟ್ ಅವರು ಅಧಿಕ ತೂಕ ಹೊಂದಿರುವುದು ಕಂಡುಬಂದ ನಂತರ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಳಿಸಲಾಗಿದೆ. ನಂತರ ಫೋಗಟ್ ತನ್ನ ಅನರ್ಹತೆಯ ವಿರುದ್ಧ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಈ ಬಗ್ಗೆ ತೀರ್ಪಿಗಾಗಿ ಕಾಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿನೇಶ್ ಫೋಗಟ್ ಭಾವುಕರಾಗಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊವನ್ನು ಹಂಚಿಕೊಳ್ಳುವವರು ಇದು ಫೋಗಟ್ ಅವರ ಅನರ್ಹತೆಯ ಕ್ಷಣವನ್ನು ತೋರಿಸುತ್ತದೆ ಎಂದು…