ಮಹಾರಾಷ್ಟ್ರದ ರಾಜಧಾನಿ ಮುಂಬೈನ ಅರಬ್ಬಿ ಸಮುದ್ರದಲ್ಲಿ ನೌಕಾಪಡೆಯ ಸ್ಪೀಡ್ ಬೋಟ್ಗೆ ಪ್ರಯಾಣಿಕರು ತುಂಬಿದ್ದ ದೋಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಪ್ರಯಾಣಿಕರಿಂದ ತುಂಬಿದ್ದ ದೋಣಿ ಸಮುದ್ರದಲ್ಲಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಮೂವರು ನೌಕಾಪಡೆ ಸಿಬ್ಬಂದಿ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಏತನ್ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್ ಆಗುತ್ತಿದೆ, ಅದರಲ್ಲಿ ದೋಣಿ ಮುಳುಗುತ್ತಿರುವುದನ್ನು ಕಾಣಬಹುದು. ಈ ವೀಡಿಯೋ ಮುಂಬೈನದ್ದು ಎಂದು ಪೋಸ್ಟ್ನಲ್ಲಿ ಹೇಳಿಕೊಳ್ಳಲಾಗುತ್ತಿದ್ದು, ದೋಣಿ ಮುಳುಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.
https://www.youtube.com/watch?v=sGUGOwBNh8Q
ಇನ್ನು ಮುಂಬೈ ಪ್ರಕರಣದ ಕುರಿತು ಹಲವು ಮಾಧ್ಯಮಗಳಲ್ಲಿ ವರದಿಗಳು ಕಂಡು ಬಂದ ಕಾರಣ ಹಲವರು ವೈರಲ್ ವಿಡಿಯೋ ಮುಂಬೈನದ್ದು ಎಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾದ ವಿಡಿಯೋವನ್ನು ಹಲವರು ಗಮನಿಸಿ ಇದು ನಿಜವಾದ ವಿಡಿಯೋ ಅಲ್ಲ, ಇದಕ್ಕೂ ಮುಂಬೈನ ದೋಣಿ ಅಪಘಾತ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹಲವರು ಬರೆದುಕೊಂಡಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಕ್ಟೋಬರ್ 4, 2024 ರಂದು ಸುದ್ದಿ ಸಂಸ್ಥೆ ಅಸೋಸಿಯೇಟ್ ಪ್ರೆಸ್ನ YouTube ಚಾನಲ್ನಲ್ಲಿ ಅಪ್ಲೋಡ್ ಮಾಡಿರುವುದನ್ನು ನಾವು ಕಂಡುಕೊಂಡಿದ್ದೇವೆ. ಇದರಲ್ಲಿ ” ಪ್ರತ್ಯಕ್ಷದರ್ಶಿಯೊಬ್ಬರು ಚಿತ್ರೀಕರಿಸಿದ ದೃಶ್ಯಾವಳಿಗಳು : ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿವು ಸರೋವರದಲ್ಲಿ ಜನರು ತುಂಬಿದ ದೋಣಿಯೊಂದು ಮುಳುಗಿ ಕನಿಷ್ಠ 78 ಜನರ ಸಾ*ವು ಎಂದು ಉಲ್ಲೇಖಿಸಿರುವುದು ಕಂಡು ಬಂದಿದ
ಇದರ ಬಗ್ಗೆ ಇನ್ನಷ್ಟು ಖಚಿತ ಪಡಿಸಿಕೊಳ್ಳಲು ನಾವು ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಚೀನಾ ಗ್ಲೋಬಲ್ ಟೆಲಿವಿಷನ್ ನೆಟ್ವರ್ಕ್ ಆಫ್ರಿಕಾದ YouTube ಚಾನಲ್ ವೈರಲ್ ವೀಡಿಯೊವನ್ನು ಅಪ್ಲೋಡ್ ಮಾಡಿರುವುದನ್ನು ಕಂಡುಕೊಂಡಿದ್ದೇವೆ . ಇಲ್ಲಿಯೂ ಕೂ ವೈರಲ್ ವಿಡಿಯೋದಲ್ಲಿನ ಘಟನೆ ಕಾಂಗೋದಲ್ಲಿ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಇದಾದ ನಂತರ ನಾವು ಮುಂಬೈ ದೋಣಿ ಅಪಘಾತದ ವೀಡಿಯೊಗಳನ್ನು ಕಂಡುಕೊಂಡಿದ್ದೇವೆ. ವೈರಲ್ ವೀಡಿಯೋಗಿಂತ ಸಂಪೂರ್ಣವಾಗಿ ಭಿನ್ನವಾಗಿರುವ ಈ ಅಪಘಾತದ ಹಲವು ವೀಡಿಯೊಗಳನ್ನು ನಾವು ಕಂಡುಕೊಂಡಿದ್ದೇವೆ.
ಕಾಂಗೋ ಗಣರಾಜ್ಯದಲ್ಲಿ ನಡೆದ ಬೋಟ್ ಅಪಘಾತದ ವಿಡಿಯೋ
ಮುಂಬೈನ ಬೋಟ್ ಅಪಘಾತದ ವಿಡಿಯೋ
ಒಟ್ಟಾರೆಯಾಗಿ ಹೇಳುವುದಾದರೆ ಕಾಂಗೋ ಗಣರಾಜ್ಯದಲ್ಲಿ ನಡೆದ ದೋಣಿ ಅಪಘಾತದ ವಿಡಿಯೋವನ್ನು ಮುಂಬೈನ ಅರಬ್ಬಿ ಸಮುದ್ರದಲ್ಲಿ ನಡೆದಿದೆ ಎಂದು ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹರಡುತ್ತಿರುವುದು ಸ್ಪಷ್ಟವಾಗಿದೆ. ಹೀಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಗಳನ್ನು ಶೇರ್ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check : ಕತ್ರಿನಾ ಕೈಫ್ ಗರ್ಭಿಣಿಯಾಗಿದ್ದಾಳೆ ಎಂದು ಎಡಿಟೆಡ್ ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

