ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಈ ವಿಡಿಯೋದೊಂದಿಗೆ ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯ ಮೇಲೆ ದಾಳಿ ಮಾಡಿ ಥಳಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಇಬ್ಬರು ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ತಮ್ಮ ಪೋಸ್ಟ್ಗಳಲ್ಲಿ ಬರೆದುಕೊಂಡಿದ್ದಾರೆ.
ये बांग्लादेश के नही है भारत का ही है बांग्लादेश में तो सनातनी की हालत तो दो कौड़ी की रह गयी है मुस्लिम बहुल क्षेत्रो में यही सब देखने को मिलेगा pic.twitter.com/rgJ1qgpcWf
— एक भारतीय हिन्दू (@rashtrawadi_ak) November 29, 2024
ವೈರಲ್ ಪೋಸ್ಟ್ನಲ್ಲಿ ಕೂಡ ಇಬ್ಬರು ಪುರುಷರು ಮಹಿಳೆಯೊಬ್ಬಳ ಮೇಲೆ ಭೀಕರವಾಗಿ ದಾಳಿ ನಡೆಸಿ, ಆಕೆಯ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಹೀಗಾಗಿ ಹಲವರು ವೈರಲ್ ವಿಡಿಯೋವನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ಕೋಮು ಆಯಾಮದಿಂದ ಹಂಚಿಕೊಳ್ಳಲಾಗುತ್ತಿರುವುದರಿಂದ, ಸಾಕಷ್ಟು ಮಂದಿ ಮುಸ್ಲಿಂ ಸಮುದಾಯದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ಹಿನ್ನೆಲೆ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ.
ये बांग्लादेश के नही है भारत (अज्ञात स्थान) का ही है बांग्लादेश में तो सनातनी की हालत तो दो कौड़ी की रह गयी है मुस्लिम बहुल क्षेत्रो में यही सब देखने को मिलेगा।😡😡 pic.twitter.com/bND63oVeJ8
— सनातनी दीपक 🚩 (@Biharwale04) November 29, 2024
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಯಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ 17 ಜನವರಿ 2022 ರಲ್ಲಿ ಮಿರ್ಜಾಪುರ್ ಆಫಿಶಿಯಲ್ ಎಂಬ ಫೇಸ್ಬುಕ್ ಖಾತೆಯಿಂದ ಹಂಚಿಕೊಳ್ಳಲಾದ ಪೋಸ್ಟ್ವೊಂದು ಕಂಡು ಬಂದಿದೆ. ಇದರಲ್ಲಿ ಕೊತ್ವಾಲಿ ಕತ್ರಾ ಪ್ರದೇಶದಲ್ಲಿ ಕಸದ ಸಣ್ಣ ವಿವಾದದ ನಂತರ ಕೆಲವು ಯುವಕರು ಮಹಿಳೆಯರ ಮೇಲೆ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಇದರಲ್ಲಿ ಸಂತ್ರಸ್ತ ಮಹಿಳೆ ಹಿಂದೂ ಕುಟುಂಬಕ್ಕೆ ಸೇರಿದವರು ಎಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ.

ಇದರ ಆಧಾರದ ಮೇಲೆ ಕೆಲವೊಂದು ಕೀ ವರ್ಡ್ಗಳನ್ನು ಬಳಸಿಕೊಂಡು ಗೂಗಲ್ನಲ್ಲಿ ನಾವು ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 6 ಏಪ್ರಿಲ್ 2022 ರಂದು ಮಿರ್ಜಾಪುರ್ ಪೊಲೀಸರ ಅಧಿಕೃತ ಎಕ್ಸ್ ಖಾತೆಯಿಂದ ಹಂಚಿಕೊಳ್ಳಲಾದ ಪೋಸ್ಟ್ವೊಂದು ಕಂಡು ಬಂದಿದೆ. ಇದರಲ್ಲಿ ಅವರು ಘಟನೆಯು 16 ಜನವರಿ 2022 ರಂದು ನಡೆದಿದೆ ಎಂದು ದೃಢಪಡಿಸಿದರು. ಈ ಘಟನೆಯ ಆರೋಪಿಗಳು ಮತ್ತು ಸಂತ್ರಸ್ಥರು ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಮಾಧ್ಯಮವೊಂದಕ್ಕೆ ಪೊಲೀಸರು ಮಾಹಿತಿಯನ್ನು ಕೂಡ ನೀಡಿದ್ದಾರೆ.
#थाना_को0कटरा की पुलिस चौकी लालडिग्गी अन्तर्गत मोहल्ला बालकुंजल गिरी में दिनांकः 16.01.2022 को एक ही समुदाय के दो पक्षो के मध्य हुई मारपीट की घटना के वॉयरल हो रहे वीडियों के सम्बन्ध में #Addl_SP_City की बाइट।#UPPolice #Mzp pic.twitter.com/nUUcNSN4Fd
— Mirzapur Police (@mirzapurpolice) April 6, 2022
ಇನ್ನು, UPCOP ಮೊಬೈಲ್ ಅಪ್ಲಿಕೇಶನ್ನಲ್ಲಿ ಈ ಘಟನೆಯ ಎಫ್ಐಆರ್ ಪ್ರತಿಗಳಲ್ಲಿ ಒಂದನ್ನು ನಾವು ಕಂಡುಕೊಂಡಿದ್ದೇವೆ. ಎಫ್ಐಆರ್ನಲ್ಲಿ , ದೂರುದಾರರ ಹೆಸರನ್ನು ನಸ್ರೀನ್ ಬೇಗಂ ಎಂದು ನಮೂದಿಸಲಾಗಿದೆ ಮತ್ತು ಆರೋಪಿಗಳ ಹೆಸರುಗಳನ್ನು ಸಲ್ಮಾನ್, ಅಂಜುಮ್, ತಹ್ವರ್ ಪೈಟಾರ್, ಬಿಟ್ಟಿ ತಮನ್ನಾ ಮತ್ತು ಉರ್ಫ್ ಆಯೇಶಾ ಎಂದು ನಮೂದಿಸಲಾಗಿದೆ. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್ನಲ್ಲಿ ಹಂಚಿಕೊಂಡ ವೀಡಿಯೊವು ಎರಡು ಮುಸ್ಲಿಂ ಕುಟುಂಬಗಳ ನಡುವಿನ ವಿವಾದ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ರೀತಿಯಲ್ಲಿ ಮುಸ್ಲಿಂ ಯುವಕರು ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ಮಿರ್ಜಾಪುರದಲ್ಲಿ ಎರಡು ಮುಸ್ಲಿಂ ಕುಟುಂಬಗಳ ನಡುವಿನ ವಿವಾದದ ಹಳೆಯ ವೀಡಿಯೊವನ್ನು ಈಗ ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ.
ಇದನ್ನೂ ಓದಿ : Fact Check | ಬೆಂಜಮಿನ್ ನೆತನ್ಯಾಹು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಡಿಟೆಡ್ ಫೋಟೋ ಹಂಚಿಕೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

