ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು 2024ರ ಡಿಸೆಂಬರ್ 26 ರಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಲ್ಲಿ ನಿಧನರಾದರು. ಡಿಸೆಂಬರ್ 28ರಂದು ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಇದೀಗ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಡಾ. ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವ ಮೂಲಕ “ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್” ಎಂದು ಟಾರ್ಗೆಟ್ ಮಾಡಲಾಗುತ್ತಿದೆ.
ದೇವಶಿಶ್ ಅಜಿತ್ಕುಮಾರ್ ಭಟ್ಟಾಚಾರ್ಯ ಎಂಬ ಫೇಸ್ಬುಕ್ ಬಳಕೆದಾರರು ಡಿಸೆಂಬರ್ 31 ರಂದು ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ” ಇದು “ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾದ ದೃಶ್ಯವಲ್ಲ … ಇದು ನಿಜವಾಗಿ ಸಂಭವಿಸಿದೆ. ಮೊದಲ ಸಿಖ್ ಪ್ರಧಾನಿಗೆ ಅವಮಾನ” ಎಂದು ಬರೆದುಕೊಂಡಿದ್ದಾರೆ. ವಿಡಿಯೋದದ ಮೇಲಿನ ಇಂಗ್ಲಿಷ್ ಪಠ್ಯವು “ಮನಮೋಹನ್ ಸಿಂಗ್ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದರು ಎಂದು ನಂಬುವವರು ಈ 30 ಸೆಕೆಂಡುಗಳ ವಿಡಿಯೋವನ್ನು ನಾಲ್ಕು ಬಾರಿ ನೋಡಬೇಕು” ಎಂದು ಬರೆಯಲಾಗಿದೆ.

ಫ್ಯಾಕ್ಟ್ಚೆಕ್
ವೈರಲ್ ಪೋಸ್ಟ್ ಕುರಿತು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡವು ತನಿಖೆ ನಡೆಸಿದೆ. 2017ರ ವಿಡಿಯೋವನ್ನು ತಪ್ಪಾದ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊವನ್ನು 2017 ಏಪ್ರಿಲ್ 26ರಂದು NNIS-News ಹೆಸರಿನ YouTube ಚಾನಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಆಗ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿರಲಿಲ್ಲ ಎಂಬುದು ಗಮನಾರ್ಹ. ಈ ವೇಳೆ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು.
ಗೂಗಲ್ ಓಪನ್ ಸರ್ಚ್ ಟೂಲ್ನ ಸಹಾಯವನ್ನು ತೆಗೆದುಕೊಂಡು ಹುಡುಕಿದಾಗ ಸುದ್ದಿ ಸಂಸ್ಥೆ ANIಯ ಅಧಿಕೃತ ಹ್ಯಾಂಡಲ್ನಲ್ಲಿ ಇದಕ್ಕೆ ಸಂಬಂಧಿಸಿದ ಪೋಸ್ಟ್ ಲಭ್ಯವಾಗಿದೆ. ಇದನ್ನು 2017ರ ಏಪ್ರಿಲ್ 26ರಂದು ಪೋಸ್ಟ್ ಮಾಡಲಾಗಿದೆ. ರನಿಲ್ ವಿಕ್ರಮಸಿಂಘೆ, ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ ನಡುವೆ ಸಭೆ ನಡೆದಿದೆ ಎಂದು ಹೇಳಲಾಗಿದೆ. ಪೋಸ್ಟ್ನಲ್ಲಿರುವ ಚಿತ್ರಗಳು ವೈರಲ್ ವಿಡಿಯೋವನ್ನು ಹೋಲುತ್ತವೆ.
Sri Lankan Prime Minister Ranil Wickremesinghe met former PM Manmohan Singh and Sonia Gandhi in Delhi pic.twitter.com/N5x7OzEeku
— ANI (@ANI) April 26, 2017
ಒಟ್ಟಾರೆಯಾಗಿ ಹೇಳುವುದಾದರೆ, ವೈರಲ್ ಪೋಸ್ಟ್ ತಪ್ಪುದಾರಿಗೆಳೆಯುವ ಸಂದೇಶವನ್ನು ಹೊಂದಿದೆ ಎಂಬುದು ಸ್ಪಷ್ಟವಾಗುತ್ತದೆ. 2017ರಲ್ಲಿ ಆಗಿನ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆಯವರು ಭಾರತಕ್ಕೆ ಭೇಟಿ ನೀಡಿದ ಸಂದರ್ಬದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಚಿತ್ರಿಸಿದ ವಿಡಿಯೋವನ್ನು ಕತ್ತರಿಸಿ ಹಂಚಿಕೊಳ್ಳಲಾಗುತ್ತಿದೆ.
ಇದನ್ನು ಓದಿ: ಕೀನ್ಯಾದಲ್ಲಿ ಭಾರತದ ಬಾಹ್ಯಾಕಾಶ ತ್ಯಾಜ್ಯ ಬಿದ್ದಿದೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

