ಡೊನಾಲ್ಡ್ ಟ್ರಂಪ್ ಅವರು ಸೋಮವಾರ, ಜನವರಿ 20 ರಂದು 47 ನೇ ಅಮೆರಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಪ್ರಮಾಣ ವಚನ ಸಮಾರಂಭದ ನಂತರ ಮೂರು ವಿವಿಧ ಕಡೆ ಉದ್ಘಾಟನಾ ಕಾರ್ಯಕ್ರಮಗಳು ಸೇರಿದಂತೆ ಸಮಾರಂಭಗಳನ್ನು ನಡೆಸಲಾಯಿತು. ಟ್ರಂಪ್ ಮತ್ತು ಅವರ ತಂಡವು ಹೊರಾಂಗಣ ಕಾರ್ಯಕ್ರಮವನ್ನು ಆಯೋಜಿಸಲು ಯೋಜಿಸಿದ್ದರು ಎನ್ನಲಾಗಿದೆ. ಆದರೆ ತೀವ್ರವಾದ ಶೀತ ಪರಿಸ್ಥಿತಿಗಳ ಕಾರಣ ಒಳಾಂಗಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಟೆಕ್ ದೈತ್ಯರು, ಸೆಲೆಬ್ರಿಟಿಗಳು ಮತ್ತು ರಾಜಕೀಯ ನಾಯಕರು ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಟ್ರಂಪ್ ಅವರ ಎರಡನೇ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈಗ ಈ ಕುರಿತು ಸುದ್ದಿಯೊಂದು ವೈರಲ್ ಆಗಿದ್ದು, ಅದರಲ್ಲಿ ಪನ್ನು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾನೆ ಎನ್ನಲಾಗಿದೆ.
Khalistani terroristPannun was present at Trump's inauguration & proudly made 'Khalistan Zindabad' slogans
Has our Foreign Minister lodged a complaint with the new US govt? Lal aankh dhikao do Jaishankar. pic.twitter.com/ezAowDyT9D— ηᎥ†Ꭵղ (@nkk_123) January 21, 2025
ಇದರ ಮಧ್ಯೆ, ಯುಎಸ್ ಅಧ್ಯಕ್ಷ ಟ್ರಂಪ್ ಅವರು ಲಿಬರ್ಟಿ ಹಾಲ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾನೆ ಎಂದು ತೋರಿಸುವ ವೀಡಿಯೊ ಇತ್ತೀಚೆಗೆ ಸಾಮಾಜಿಕ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನೋಡಿದ ಕೆಲ ಭಾರತ ವಿರೋಧಿ ಖಾತೆಗಳಿಂದ ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡು ಟ್ರಂಪ್ ಈಗ ಭಾರತದ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಬರೆದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ನಲ್ಲಿ ಈ ವಿಡಿಯೋ ಕುರಿತು ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
🚨SHOCKING!
Khalistani terrorist Pannun, known for issuing death threats to Indian diplomats & leaders, was reportedly seen shouting "Khalistan Zindabad" at Donald Trump's presidential inauguration.
How can such an extremist gain access to a high-profile ceremony? pic.twitter.com/qRm7xJ2hIg
— Gurleen K Brar (@GurleenKBrar) January 22, 2025
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸತು. ಈ ವೇಳೆ ನಮಗೆ The Economic Times , Times Now & Livemin t ಪ್ರಕಟಿಸಿದ ಇತ್ತೀಚಿನ ವರದಿಗಳು ಕಂಡು ಬಂದಿವೆ. ಈ ವರದಿಗಳ ಪ್ರಕಾರ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಪನ್ನುನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ಟಾರ್-ಸ್ಟಡ್ಡ್ ಉದ್ಘಾಟನಾ ಸಮಾರಂಭದಲ್ಲಿ ಕಾಣಿಸಿಕೊಂಡರು ಮತ್ತು ಖಲಿಸ್ತಾನದ ಪರವಾಗಿ ಘೋಷಣೆಯನ್ನು ಕೂಗಿದರು ಎಂದು ಉಲ್ಲೇಖಿಸಲಾಗಿದೆ.

ಆದರೆ ಈ ವರದಿಗಳಲ್ಲಿ ಎಲ್ಲಿಯೂ ಅಮರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಲಿಸ್ತಾನಿ ಉಗ್ರ ಪನ್ನುನ್ ಅನ್ನು ಅಹ್ವಾನಿಸಿರುವ ಕುರಿತು ಉಲ್ಲೇಖವಾಗಿಲ್ಲ. ಇನ್ನು ಈ ಕಾರ್ಯಕ್ರಮಕ್ಕೂ ಮುನ್ನ ಪ್ರಕಟವಾದ ಕೆಲವೊಂದು ವರದಿಗಳನ್ನು ನಾವು ಪರಿಶೀಲನೆ ನಡೆಸಿದೆವು. ಈ ವರದಿಗಳಲ್ಲಿ ಯಾರೆಲ್ಲ ಗಣ್ಯರನ್ನು ಡೊನಾಲ್ಡ್ ಟ್ರಂಪ್ ಅವರ ಕಾರ್ಯಕ್ರಮಕ್ಕೆ ಉದ್ಘಾಟಿಸಲಾಗಿದೆ ಎಂಬುದನ್ನು ಹುಡುಕಾಟ ನಡೆಸಿದೆವು. ಈ ವೇಳೆ ನಮಗೆ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್, ಗೂಗಲ್ನ ಸುಂದರ್ ಪಿಚೈ, ಮೆಟಾದ ಮಾರ್ಕ್ ಜುಕರ್ಬರ್ಗ್, ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಟಿಕ್ಟಾಕ್ ಸಿಇಒ ಶೌ ಚೆವ್ ಸೇರಿದಂತೆ ಟೆಕ್ ದೈತ್ಯರನ್ನು ಆಹ್ವಾನಿಸಲಾಗಿತ್ತು, ಅಮೆರಿಕದ ಮಾಜಿ ಅಧ್ಯಕ್ಷರುಗಳು, ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್ ಮತ್ತು ಬರಾಕ್ ಒಬಾಮಾ. ಸೇರಿದಂತೆ ಇನ್ನೀತರ ಹಲವು ಗಣ್ಯರನ್ನು ಅಹ್ವಾನಿಸಲಾಗಿತ್ತು. ಆದರೆ ಈ ವರದಿಗಳಲ್ಲೂ ಪನ್ನುವನ್ನು ಅಹ್ವಾನಿಸಿರುವ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಅಲ್ಲಿಗೆ ಈ ಖಲಿಸ್ತಾನಿ ಉಗ್ರ ಅಹ್ವಾನವಿಲ್ಲದ ಕಾರ್ಯಕ್ರಮಕ್ಕೆ ಹೋಗಿದ್ದಾನೆ ಎಂಬುದು ಸ್ಪಷ್ಟವಾಗಿದೆ.



ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಲಿಸ್ತಾನಿ ಉಗ್ರನನ್ನು ತಮ್ಮ ಕಾರ್ಯಕ್ರಮಕ್ಕೆ ಅಹ್ವಾನಿಸಿದ್ದಾರೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ಈ ಕಾರ್ಯಕ್ರಮಕ್ಕೆ ಅಹ್ವಾನವಿಲ್ಲದಿದ್ದರು ತೆರಳಿರುವ ಪನ್ನು ಘೋಷಣೆಯನ್ನು ಕೂಗಿದ್ದಾನೆ. ಹಾಗಾಗಿ ವೈರಲ್ ವಿಡಿಯೋ ಸುಳ್ಳು ನಿರೂಪನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ಕಾರಣದಿಂದ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದಿದಯನ್ನು ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಗೋಮೂತ್ರದಿಂದ ಜ್ವರ – ಅಜೀರ್ಣ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಸುಳ್ಳು

