ಪಹಲ್ಗಾಮ್ ದಾಳಿಯ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಭಾರತ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಪುಣೆಯ ಭವಾನಿ ಪೇಟ್ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಕುಟುಂಬವನ್ನು ಮುಸಲ್ಮಾನರು ಥಳಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.
A Hindu family was attacked in Pune—simply for speaking out against Pakistan.
Imagine that. In your own country, you can’t voice your opinion about a hostile nation. Because if you do, you offend the delicate sensibilities of those whose loyalties lie elsewhere—those born here,… pic.twitter.com/GRambrRJq2
— Oxomiya Jiyori 🇮🇳 (@SouleFacts) May 2, 2025
ವೈರಲ್ ವಿಡಿಯೋದಲ್ಲಿ ಕೂಡ ಎರಡು ಗುಂಪುಗಳ ನಡುವೆ ತೀವ್ರ ಸ್ವರೂಪದ ಘರ್ಷಣೆ ನಡೆದಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಹೀಗಾಗಿ ಇದನ್ನು ನಿಜವೆಂದು ಭಾವಿಸಿ, ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ, ಹಲವರು ವೈರಲ್ ಪೋಸ್ಟ್ ಅನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ
"In Bhavani Peth's Gurunanak Nagar, Pune — a Hindu family was attacked for speaking out against Pakistan. And yet, not a single Hindu stood by them. pic.twitter.com/ApMgsN8xX1
— ᴅᴇʙᴀᴊɪᴛ ꜱᴀʀᴋᴀʀ🇮🇳 (@debajits3110) May 2, 2025
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಪ್ಗಳನ್ನು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟ ನಡೆಸಿದೆವು. ಈ ವೇಳೆ ನಮಗೆ 2 ಮೇ 2025ರ ಫ್ರೀ ಪ್ರೆಸ್ ಜರ್ನಲ್ನಲ್ಲಿ ಪ್ರಕಟವಾದ ವರದಿಯೊಂದು ಕಂಡುಬಂದಿದೆ. ಇದರಲ್ಲಿ ರಸ್ತೆಯಲ್ಲಿ ಹಾರ್ನ್ ಮಾಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.

ಇನ್ನು ಇದೇ ರೀತಿಯ ವರದಿಯನ್ನು ಪುಣೆ ಪ್ಲಸ್ ಎಂಬ ಸುದ್ದಿ ತಾಣವು ಪ್ರಕಟಿಸಿದ್ದು, ಇದರಲ್ಲಿ ಎರಡು ಗುಂಪುಗಳ ನಡುವೆ ಹಾರ್ನ್ ಮಾಡುವ ವಿಚಾರಕ್ಕೆ ಜಗಳ ಆರಂಭವಾಗಿದ್ದು, ಈ ಪ್ರಕರಣದಲ್ಲಿ 21 ವರ್ಷದ ಆಟೋ ರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ ಈ ಘಟನೆ ಭಾನುವಾರ ಸಂಜೆ 4:00 ಸುಮಾರಿಗೆ ನಡೆದಿದ್ದು, ಆರೋಪಿಯನ್ನು ಕಾಶೀವಾಡಿಯ ನಿವಾಸಿ ಶೋಯಬ್ ಉಮರ್ ಸೈಯದ್ ಎಂದು ಗುರುತಿಸಲಾಗಿದೆ.

ಪುಣೆ ಟೈಮ್ಸ್ ಮಿರರ್ ಕೂಡ ಇದನ್ನೇ ಉಲ್ಲೇಖಿಸಿದ್ದು, ಇದರಲ್ಲಿ ಕರಣ್ ಮೆಹ್ತ ಎಂಬ ವ್ಯಕ್ತಿ ಬೈಕ್ನಲ್ಲಿ ಬರುತ್ತಿದ್ದಾಗ, ರಸ್ತೆಗೆ ಅಡ್ಡಲಾಗಿ ಸೈಯದ್ ಅವರ ಆಟೋರಿಕ್ಷಾ ನಿಲ್ಲಿಸಿ, ತನ್ನ ಸರಕುಗಳನ್ನು ಇಳಿಸುವಾಗ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಇದು ತದ ನಂತರದಲ್ಲಿ ತೀವ್ರ ಸ್ವರೂಪದ ಜಗಳಕ್ಕೆ ಮತ್ತು ಹಲ್ಲೆ ನಡೆಸುವಷ್ಟರ ಮಟ್ಟಿಗೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿರುವುದು ಕಂಡು ಬಂದಿದೆ. ಈ ವರದಿಗಳ ಪ್ರಕಾರ ನೋಡುವುದಾದರೆ ಪಾಕಿಸ್ತಾನದ ಪರ ಪೋಸ್ಟ್ ಮಾಡಿದ್ದಕ್ಕಾಗಿ ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುದು ಸುಳ್ಳು ಮಾಹಿತಿಯಾಗಿದೆ ಎಂಬುದು ನಮಗೆ ಖಚಿತವಾಗಿದೆ


ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ್ದಕ್ಕಾಗಿ, ಹಿಂದೂ ಕುಟುಂಬದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಗುಂಪು ಹಲ್ಲೆ ನಡೆಸಿದೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ವಿಡಿಯೋ ವಾಹನ ತೆರವು ಮತ್ತು ಹಾರ್ನ್ ವಿಚಾರಕ್ಕೆ ಸಂಬಂಧಿಸಿದಾಗಿದೆ. ಹೀಗಾಗಿ ಈ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಪ್ರಧಾನಿ ಮೋದಿ ಕಚ್ನಲ್ಲಿ ಸೈನಿಕರನ್ನು ಭೇಟಿಯಾದ ಹಳೆಯ ವೀಡಿಯೊವನ್ನು ಇತ್ತೀಚಿನದ್ದು ಎಂದು ಹಂಚಿಕೊಳ್ಳಲಾಗುತ್ತಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

