ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಆಸ್ಪತ್ರೆಯ ಹಾಸಿಗೆಯ ಮೇಲೆ ಇರುವ ಕೆಲವು ಚಿತ್ರಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಸಲ್ಮಾನ್ ಖಾನ್ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿಕೊಂಡಿರುವುದನ್ನು ಕಾಣಬಹುದಾಗಿದೆ. ಇದನ್ನು ಹಂಚಿಕೊಂಡಿರುವ ಹಲವರು ಸಲ್ಮಾನ್ ಖಾನ್ ತೀವ್ರವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಕೆಲವರು ಸಲ್ಮಾನ್ ಖಾನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ತೀವ್ರ ಸ್ವರೂಪದ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದು, ಅವರನ್ನು ಉಳಿಸಿಕೊಳ್ಳುವುದು ಕಷ್ಟ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ಇದು ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಹಲವರು ಇದನ್ನು ಸುಳ್ಳು ಎಂದು ಕೂಡ ಪ್ರತಿಪಾದಿಸುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೊವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
Whispers, panic, and unanswered calls. Salman Khan’s sudden ICU admission has triggered chaos across the industry. With no official word yet, speculation is spinning out of control. Is the superstar in critical danger—or is the truth being hidden for a reason?
See more in comme pic.twitter.com/wN4UQk6VeR
— Bittu Baghel (@BittuBaghel18) June 18, 2025
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋಗಳ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಪರಿಶೀಲನೆ ನಡೆಸಿತು. ಇದಕ್ಕಾಗಿ ನಾವು ವೈರಲ್ ಫೋಟೋಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ cafef.vn ಎಂಬ ವೆಬ್ಸೈಟ್ನಲ್ಲಿ ಮೊದಲ ಫೋಟೋ ಕಂಡು ಬಂದಿದೆ. ಇದು ಮಾದಕ ವ್ಯಸನದಿಂದ ಆಗುವ ಪರಿಣಾಮಗಳ ಕುರಿತು ಈ ವರದಿಯಲ್ಲಿ ಬರೆಯಲಾಗಿದ್ದು, ಇದರಲ್ಲಿ ಇರುವ ವ್ಯಕ್ತಿ ಸಲ್ಮಾನ್ ಖಾನ್ ಅಲ್ಲ ಎಂಬುದು ಸ್ಪಷ್ಟವಾಗಿದೆ. ಈ ವರದಿಯನ್ನು 3 ಜನವರಿ 2024 ರಂದು ಪ್ರಕಟಿಸಲಾಗಿತ್ತು.

ಇನ್ನು ಎರಡನೇ ಫೋಟೋದ ಕುರಿತು ಪರಿಶೀಲನೆ ನಡೆಸಲು ಮುಂದಾಗಿ ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದಾಗ, ಪಂಜಾಬಿ ಜಾಗರಣ ವೆಬ್ಸೈಟ್ನಲ್ಲಿ ವೈರಲ್ ಚಿತ್ರಕ್ಕೆ ಸಂಬಂಧಿಸಿದ ಸುದ್ದಿ ಲಭ್ಯವಾಗಿದೆ. ಇದನ್ನು 2 ಅಕ್ಟೋಬರ್ 2022 ರಂದು ಪ್ರಕಟಿಸಲಾಗಿದೆ ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಪಂಜಾಬಿ ಗಾಯಕ ಅಲ್ಪಾಜ್ ಕಾರಿನಲ್ಲಿ ಪೆಟ್ರೋಲ್ ತುಂಬಲು ನಿಂತಾಗ ಆ ಸಮಯದಲ್ಲಿ ಅಪರಿಚಿತ ಟೆಂಪೋ ಚಾಲಕನೊಬ್ಬ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವೈರಲ್ ಚಿತ್ರವು ಅವರನ್ನು ಆಸ್ಪತ್ರೆಗೆ ಸೇರಿಸಿದ ಸಮಯದಾಗಿದೆ ಎಂದು ಬರೆಯಲಾಗಿದೆ. ಹೀಗಾಗಿ ಈ ಎರಡು ವೈರಲ್ ಫೋಟೋಗಳು ಸಲ್ಮಾನ್ ಖಾನ್ ಅವರದ್ದು ಅಲ್ಲ ಎಂಬುದು ಸ್ಪಷ್ಟವಾಗಿದೆ.

ಇನ್ನು ಸಲ್ಮಾನ್ ಖಾನ್ ಅವರ ಕುರಿತು ಹುಡುಕಾಟವನ್ನು ನಡೆಸಿದಾಗ 19 ಜೂನ್ 2025 ರಂದು ಮುಂಬೈನಲ್ಲಿ ಅಮೀರ್ ಖಾನ್ ಅವರು ನಟಿಸಿ, ನಿರ್ಮಿಸಿರುವ ಸಿತಾರೆ ಜಮೀನ್ ಪರ್ ಚಿತ್ರದ ಪ್ರೀಮಿಯರ್ ಶೋನಲ್ಲಿ ಭಾಗವಹಿಸಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ನಟರಾದ ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಜೊತೆಯಲ್ಲಿ ನಿಂತಿರುವುದು ಕೂಡ ಕಂಡು ಬಂದಿದೆ. ಹೀಗಾಗಿ ಸಲ್ಮಾನ್ ಖಾನ್ ಅವರ ಕುರಿತು ಹಂಚಿಕೊಳ್ಳಲಾದ ಸುದ್ದಿ ಸಂಪೂರ್ಣವಾಗಿ ಸುಳ್ಳು ಎಂಬುದು ಈ ಮೂಲಕ ಸಾಬೀತಾಗಿದೆ. ಇನ್ನು ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಆರೋಗ್ಯ ಸಂಬಂಧಿಸಿದಂತೆ ಯಾವುದೇ ವರದಿಗಳು ಕೂಡ ಕಂಡುಬಂದಿಲ್ಲ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ನಟ ಸಲ್ಮಾನ್ ಖಾನ್ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಐಸಿಯುನಲ್ಲಿ ದಾಖಲಿಸಲಾಗಿದೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ಫೋಟೋ ಬೇರೆ ಬೇರೆ ಫೋಟೋಗಳನ್ನು ಬಳಸಿಕೊಂಡು ಸುಳ್ಳು ನಿರೂಪಣೆಯೊಂದಿಗೆ ಶೇರ್ ಮಾಡಲಾಗುತ್ತಿದೆ. ಹಾಗಾಗಿ ಈ ಸುಳ್ಳು ಸುದ್ದಿಯನ್ನು ನಂಬಬೇಡಿ ಮತ್ತು ಹಂಚಿಕೊಳ್ಳಬೇಡಿ ಸುಳ್ಳು ಸುದ್ದಿ ಶೇರ್ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | 21 ವರ್ಷದ ಮುಸ್ಲಿಂ ಯುವಕ ತನ್ನ ಅಜ್ಜಿಯನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

