ಸಾಮಾಜಿಕ ಮಾಧ್ಯಮ ಬಳಕೆದಾರರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಅಖಿಲೇಶ್ ಯಾದವ್ ಅವರ ಇಫ್ತಾರ್ ಕೂಟದ ಉಪಸ್ಥಿತಿಯನ್ನು ತೋರಿಸುವ ವೀಡಿಯೊ ತುಣುಕನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಕ್ಕೆ ಅಖಿಲೇಶ್ ಯಾದವ್ ಹೋಗಲಿಲ್ಲ, ಆದರೆ ರಂಜಾನ್ ಸಮಯದಲ್ಲಿ ಮುಸ್ಲಿಮರ ಇಫ್ತಾರ್ ಕೂಟದಲ್ಲಿ ಭಾಗವಹಿಸುವುದನ್ನು ತಪ್ಪಿಸಲಿಲ್ಲ ಎಂದು ಹಲವರು ಬರೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಕೆಲವರು ಅಖಿಲೇಶ್ ಯಾದವ್ ಮುಸಲ್ಮಾನರನ್ನು ಓಲೈಕೆ ಮಾಡಿದ ಕಾರಣ ಇವತ್ತು ಅವರು ಉತ್ತರ ಪ್ರದೇಶದಲ್ಲಿ ಅಧಿಕಾರದಿಂದ ವಂಚಿತರಾಗಿದ್ದಾರೆ ಎಂದು ಬರೆದುಕೊಳ್ಳುತ್ತಿದ್ದಾರೆ. ವೈರಲ್ ಪೋಸ್ಟ್ ಅನ್ನು ನೋಡಿದ ಹಲವು ಮಂದಿ ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಖಾತೆಗಳಲ್ಲಿ ಕೂಡ ಹಂಚಿಕೊಂಡು ಅಖಿಲೇಶ್ ಯಾದವ್ ಅವರ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವಿವಿಧ ಕೀ ವರ್ಡ್ಗಳನ್ನು ಬಳಸಿಕೊಂಡು ಅಂತರ್ಜಾಲದಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭದಲ್ಲಿ ಅಖಿಲೇಶ್ ಯಾದವ್ ಪವಿತ್ರ ಸ್ನಾನ ಮಾಡಿದ್ದನ್ನು ಉಲ್ಲೇಖಿಸುವ ಅನೇಕ ವರದಿಗಳು ನಮಗೆ ಸಿಕ್ಕವು. ಜನವರಿ 26, 2025 ರಂದು ಇಂಡಿಯಾ ಟುಡೇ ವರದಿ ಮಾಡಿದ ಪ್ರಕಾರ , “ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಪ್ರಯಾಗರಾಜ್ನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ಮೂಲಕ 2025 ರ ಮಹಾ ಕುಂಭ ಮೇಳದ ಆಧ್ಯಾತ್ಮಿಕ ಉತ್ಸವದಲ್ಲಿ ಭಾಗವಹಿಸಿದ್ದರು. ಇಂಡಿಯಾ ಟುಡೇ ಜೊತೆ ಮಾತನಾಡಿದ ಅವರು, ತಾವು ಸಂಗಮದಲ್ಲಿ 11 ಬಾರಿ ಸ್ನಾನ ಮಾಡಿರುವುದಾಗಿ ಹೇಳಿದರು.”

Jagran.com ವರದಿಯ ಪ್ರಕಾರ , “ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಯಾಗ್ರಾಜ್ ತಲುಪಿದ್ದರು. ಅವರು ಬಮ್ರೌಲಿ ವಿಮಾನ ನಿಲ್ದಾಣದಿಂದ ನೇರವಾಗಿ ಸಂಗಮ್ಗೆ ತೆರಳಿದರು. ಅವರ ಮಗ ಅರ್ಜುನ್ ಯಾದವ್ ಕೂಡ ಅವರೊಂದಿಗೆ ಇದ್ದರು. ಎಸ್ಪಿ ಮುಖ್ಯಸ್ಥರು ತಮ್ಮ ಮಗನೊಂದಿಗೆ ಸಂಗಮ್ನಲ್ಲಿ ಸ್ನಾನ ಮಾಡಿದರು, ನಂತರ ಅವರು ನೇರವಾಗಿ ಸೆಕ್ಟರ್ 16 ಗೆ ತೆರಳಿದರು. ಅಲ್ಲಿ ಅವರು ಮುಲಾಯಂ ಸಿಂಗ್ ಯಾದವ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಆಶೀರ್ವಾದ ಪಡೆದರು.”

ಇನ್ನು ಅಖಿಲೇಶ್ ಯಾದವ್ ಅವರು ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ನಂತರ ತಮ್ಮ ಅಧಿಕೃತ X ಪ್ರೊಫೈಲ್ನಿಂದ ಮಹಾ ಕುಂಭ ಮೇಳದ ಪವಿತ್ರ ಪ್ರಯಾಣದ ಚಿತ್ರಗಳನ್ನು ಹಂಚಿಕೊಂಡಿರುವುದು ಕಂಡು ಬಂದಿದೆ.
महाकुंभ की पुण्य-यात्रा!
महाकुंभ 144 साल में एक बार आता है, वो भी संगम के किनारे ही मतलब जीवन में एक बार और वो भी नदियों के मिलन स्थल पर, इसीलिए इससे ये संकल्प लेना चाहिए कि हमें जो जीवन मिला है वो अलग-अलग दिशाओं से आती हुई धाराओं के मिलन से ही अपना सही अर्थ और मायने पा सकता है।… pic.twitter.com/ml4MJuNNai
— Akhilesh Yadav (@yadavakhilesh) January 27, 2025
ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅಖಿಲೇಶ್ ಯಾದವ್ ಅವರು ಇಫ್ತಾರ್ ಕೂಟದಲ್ಲಿ ಮಾತ್ರ ಭಾಗಿಯಾಗಿದ್ದಾರೆ. ಈ ಬಾರಿ ನಡೆದ ಮಹಾ ಕುಂಭಮೇಳದಲ್ಲಿ ಭಾಗಿಯಾಗಿಲ್ಲ ಎಂಬುದು ಸುಳ್ಳು. ಹಾಗಾಗಿ ವೈರಲ್ ಪೋಸ್ಟ್ ಅನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ರಾಹುಲ್ ಗಾಂಧಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲೆ ಮತ ಚಲಾಯಿಸಲು ಮಾತ್ರ ಲೋಕಸಭೆಗೆ ಬಂದರು ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

