“ಜೂನ್ 12 ರ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಅಂತರರಾಷ್ಟ್ರೀಯ ಪ್ರಯಾಣಿಕರು ಭಾರತೀಯ ಪೈಲಟ್ಗಳು ಹಾರಿಸುವ ವಿಮಾನಗಳಲ್ಲಿ ಕುಳಿತುಕೊಳ್ಳಲು ನಿರಾಕರಿಸಲು ಪ್ರಾರಂಭಿಸಿದ್ದಾರೆ” ಎಂದು ಪೋಸ್ಟ್ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಭಾರತದ ವಿರೋಧಿ ರಾಷ್ಟ್ರಗಳ ಕೆಲ ಪ್ರಜೆಗಳು ಈ ಪೋಸ್ಟ್ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅಪಪ್ರಚಾರ ಮಾಡಲು ಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಈ ಪೋಸ್ಟ್ಗಳನ್ನು ಪರಿಶೀಲನೆ ಕೂಡ ನಡೆಸದೆ ಸಾಕಷ್ಟು ಮಂದಿ ನಿಜವೆಂದು ನಂಬಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವೈರಲ್ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ. ಇನ್ನೂ ಹಲವರು ಇದು ಸುಳ್ಳು ಎಂದು ಪ್ರತಿಪಾದಿಸಿದರು, ಬಹುಪಾಲು ಮಂದಿ ವೈರಲ್ ಪೋಸ್ಟ್ ಅನ್ನು ಮಾತ್ರ ಶೇರ್ ಮಾಡುತ್ತಲೇ ಇದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ಯಾವುದಾದರೂ ಅಧಿಕೃತ ವರದಿಗಳು ಪ್ರಕಟಗೊಂಡಿವೆಯೇ ಎಂದು ಪರಿಶೀಲನೆ ನಡೆಸಿದೆವು. ಆದರೆ ಈ ಕುರಿತು ನಮಗೆ ಇದುವರೆಗೂ ಯಾವುದೇ ರೀತಿಯಾದ ಅಧಿಕೃತ ವರದಿಗಳು ಕಂಡು ಬಂದಿಲ್ಲ. ಒಂದು ವೇಳೆ ವೈರಲ್ ಪೋಸ್ಟ್ ನಿಜವಾಗಿದ್ದರೆ ರಾಷ್ಟ್ರೀಯ, ಅಂತರರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮಗಳು ಕೂಡ ವರದಿಯನ್ನು ಮಾಡುತ್ತಿದ್ದವು. ಹೀಗಾಗಿ ವೈರಲ್ ಪೋಸ್ಟ್ ಕುರಿತು ಹಲವು ಅನುಮಾನಗಳು ಆರಂಭವಾದವು.

ಹೀಗಾಗಿ ಭಾರತೀಯ ನಾಗರೀಕ ವಿಮಾನಯಾನ ಇಲಾಖೆ, ಏರ್ ಇಂಡಿಯಾ ಸೇರಿದಂತೆ ಇನ್ನೂ ಹಲವು ಇಲಾಖೆಗಳಲ್ಲಿ ಈ ಬಗೆಗಿನ ಮಾಹಿತಿಗಾಗಿ ಹುಡುಕಾಟವನ್ನು ನಡೆಸಿದೆವು. ಆದರೆ ಈ ಕುರಿತು ನಮಗೆ ಯಾವುದೇ ರೀತಿಯಾದ ಮಾಹಿತಿಗಳು ಲಭ್ಯವಾಗಿಲ್ಲ. ಹೀಗಾಗಿ ನಾವು ವೈರಲ್ ಪೋಸ್ಟ್ನ ಕೆಲವೊಂದು ಕೀ ವರ್ಡ್ಗಳನ್ನೇ ಬಳಸಿಕೊಂಡು ಹುಡುಕಾಟವನ್ನು ನಡೆಸಿದೆವು. ಆದರೆ ಇದರ ಆಧಾರದ ಮೇಲೆ ಕೂಡ ನಮಗೆ ಯಾವುದೇ ರೀತಿಯಾದ ಮಾಹಿತಿಗಳು ಲಭ್ಯವಾಗಿಲ್ಲ. ಹೀಗಾಗಿ ವೈರಲ್ ಆಗಿರುವ ಪೋಸ್ಟ್ ಕೇವಲ ಸುಳ್ಳು ಸುದ್ದಿಯಿಂದ ಕೂಡಿದೆ ಎಂಬುದು ನಮಗೆ ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ರೀತಿ ಭಾರತೀಯ ಪೈಲೆಟ್ಗಳಿರುವ ವಿಮಾನಗಳನ್ನು ಅಂತರರಾಷ್ಟ್ರೀಯ ಪ್ರಯಾಣಿಕರು ನಿರಾಕರಿಸುತ್ತಿದ್ದಾರೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ಆಗುತ್ತಿರುವ ಪೋಸ್ಟ್ಗೆ ಸಂಬಂಧಿಸಿದಂತೆ ಯಾವುದೇ ವರದಿಗಳು ಕಂಡು ಬಂದಿಲ್ಲ. ಹಾಗಾಗಿ ವೈರಲ್ ಪೋಸ್ಟ್ ಅನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಅಜಯ್ ದೇವ್ಗನ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂಬುದು ಸುಳ್ಳು

