1991 ರ ಬ್ಯಾಚ್ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅವರು ಜನವರಿ 31 ರಂದು ನಿವೃತ್ತರಾದ ನಂತರ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ಬೆಂಗಳೂರು ಬಿಸಿನೆಸ್ ಕಾರಿಡಾರ್ನ ನೇತೃತ್ವವನ್ನು ವಹಿಸಲಿದ್ದಾರೆ ಎಂದು ಹೇಳಾಗುತ್ತಿದೆ. ಈ ಮಧ್ಯೆ ಎಲ್.ಕೆ. ಅತೀಕ್ ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲಾಗಿದೆ ಎಂಬ ಸುದ್ದಿಯೊಂದು ವೈರಲ್ ಆಗಿದೆ.

ಹೀಗೆ ಸುದ್ದಿ ವೈರಲ್ ಆಗಲು ಪ್ರಮುಖವಾದ ಕಾರಣ Btv ಕನ್ನಡ, ಈ ಸುದ್ದಿ ಮಾಧ್ಯಮ ಒಂದು ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ” BIG BREAKING NEWS ನಿವೃತ್ತ IAS ಅಧಿಕಾರಿ L.K. ಅತೀಕ್ ವಿಧಾನ ಪರಿಷತ್ತಿಗೆ ನಾಮಕರಣ, ರಾಜ್ಯಪಾಲರಿಗೆ ಶಫಾರಸ್ಸು” ಎಂದು ಉಲ್ಲೇಖಿಸಿ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಇದನ್ನು ಹಲವರು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಈ ವೈರಲ್ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಹುಡುಕಾಟ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು ಇದಕ್ಕಾಗಿ ಮೊದಲು ನಾವು ವಿಧಾನ ಪರಿಷತ್ಗೆ ಎಲ್.ಕೆ ಅತೀಕ್ ಅವರು ನಾಮನಿರ್ದೇಶನಗೊಂಡಿದ್ದಾರೆಯೇ ಎಂದು ಪರಿಶೀಲಿಸಲು ವಿವಿಧ ಕೀ ವರ್ಡ್ಗಳನ್ನು ಬಳಸಿ ಪರಿಶೀಲನೆ ನಡೆಸಿದೆವು. ಆದರೆ ಈ ಕುರಿತು ಯಾವುದೇ ಮಾಧ್ಯಮಗಳು ವರದಿಯನ್ನು ಪ್ರಕಟಿಸಿರುವುದು ಕಂಡು ಬಂದಿಲ್ಲ. ಒಂದು ವೇಳೆ Btv ಕನ್ನಡ ಪೋಸ್ಟರ್ ನಿಜವಾಗಿದ್ದರೆ ಇತರೇ ಮಾಧ್ಯಮಗಳು ಕೂಡ ವರದಿಯನ್ನು ಮಾಡುತ್ತಿದ್ದವು. ಹಾಗಾಗಿ ವೈರಲ್ ಪೋಸ್ಟರ್ ಸಾರ್ವಜನಿಕರ ದಾರಿ ತಪ್ಪಿಸುತ್ತಿರುವುದು ನಮಗೆ ಖಚಿತವಾಗಿದೆ.

ಹೀಗಾಗಿ ವೈರಲ್ ಪೋಸ್ಟ್ನ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ L.K ಅತೀಕ್ ಅವರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪರಿಶೀಲನೆ ನಡೆಸಿತು. ಈ ವೇಳೆ ನಮಗೆ ಎಲ್.ಕೆ ಅತೀಕ್ ಅವರು ಅಧಿಕೃತ ಎಕ್ಸ್ ( ಈ ಹಿಂದಿನ ಟ್ವಿಟರ್ ) ಖಾತೆಯಿಂದ ಪೋಸ್ಟ್ವೊಂದು ಕಂಡು ಬಂದಿದೆ. ಅದರಲ್ಲಿ ಅವರು “ಬಿಟಿವಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ. ಇದು ನಿಜವಲ್ಲ. ಅವರು ಇಂತಹ ದುಷ್ಕೃತ್ಯದಿಂದ ದೂರವಿರುತ್ತಾರೆ ಎಂದು ನಾನು ಭಾವಿಸುತ್ತೇನೆ.” ಎಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ಈ ಮೂಲಕ ಬಿಟಿವಿ ಸುಳ್ಳು ಸುದ್ದಿಯ ಪೋಸ್ಟರ್ ಅನ್ನು ಹಂಚಿಕೊಂಡಿದೆ ಎಂಬುದು ನಮಗೆ ಖಚಿತವಾಗಿದೆ.
BTV is running fake news. It is not true. I hope they will desist from this mischief. @btvnewslive pic.twitter.com/XYaTt4n0VQ
— ಎಲ್ ಕೆ ಅತೀಕ್ L K Atheeq (@lkatheeq) June 5, 2025
ಒಟ್ಟಾರೆಯಾಗಿ ಹೇಳುವುದಾದರೆ L.K. ಅತೀಕ್ ಅವರು ವಿಧಾನ ಪರಿಷತ್ಗೆ ನಾಮನಿರ್ದೇಶನಗೊಂಡಿದ್ದಾರೆ ಎಂಬ ಸುದ್ದಿ ಸುಳ್ಳು. Btv ಕನ್ನಡ ಸುಳ್ಳು ಪೋಸ್ಟರ್ ಅನ್ನು ಹಂಚಿಕೊಂಡಿರುವುದನ್ನು ಅತೀಕ್ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟ ಪಡಿಸಿದ್ದಾರೆ. ಹೀಗಾಗಿ ವೈರಲ್ ಪೋಸ್ಟರ್ ಅನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ನೆಹರು ತಮ್ಮ ಕುಟುಂಬದ ಮಹಿಳೆಯರೊಂದಿಗೆ ಇರುವ ಫೋಟೋವನ್ನು ಸುಳ್ಳು ನಿರೂಪಣೆಯೊಂದಿಗೆ ಹಂಚಿಕೆ

