ಮೊಹರಂ ಹಬ್ಬದ ಸಂದರ್ಭದಲ್ಲಿ, ಜುಲೈ 06, 2025 ರಂದು ದೇಶದ ವಿವಿಧ ಭಾಗಗಳಲ್ಲಿ ಮೆರವಣಿಗೆಗಳು ನಡೆದವು. ಈ ಸಂದರ್ಭದಲ್ಲಿ, ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ನಡೆದ ಮೊಹರಂ ಮೆರವಣಿಗೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ.

ಇದನ್ನು ನಿಜವೆಂದು ನಂಬಿರುವ ಹಲವರು ಕೋಮು ಬರಹಗಳನ್ನು ಬರೆದುಕೊಂಡು ಮುಸಲ್ಮಾನ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಲಾಗುತ್ತಿದೆ. ಇನ್ನೂ ಕೆಲವರು ಉತ್ತರಪ್ರದೇಶದ ಪೊಲೀಸ್ ಇಲಾಖೆ ಈ ಬಗ್ಗೆ ಯಾವುದೇ ರೀತಿಯಾದ ಕ್ರಮ ತೆಗೆದುಕೊಳ್ಳದಿರುವುದು ಅಚ್ಚರಿಯಾಗಿದೆ ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ
पाकिस्तान जिंदाबाद 🚨
जी हाँ ये पाकिस्तान जिंदाबाद क़े नारे लगाती ये भीड़ पाकिस्तान में नहीं भारत में है और भारत क़े
भी उत्तर प्रदेश में हैखून में ही गद्दारी इन BSD वाले लोगों क़े…
Hello @DeoriaPolice
क्या आप वो सुन पा रहे हैं जो मैं सुन रहा हूँ ?इन्हे ऐसा सबक सिखाएं कि… pic.twitter.com/IDKdnM7jW3
— Deepak Sharma (@SonOfBharat7) July 7, 2025
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ಸಂಬಂಧಿತ ಕೀವರ್ಡ್ಗಳನ್ನು ಬಳಸಿಕೊಂಡು ಗೂಗಲ್ ಹುಡುಕಾಟ ನಡೆಸಿದ್ದೇವೆ ಆದರೆ 2025 ರ ಮೊಹರಂ ಮೆರವಣಿಗೆಯ ಸಮಯದಲ್ಲಿ ಉತ್ತರ ಪ್ರದೇಶದಲ್ಲಿ ಡಿಯೋರಿಯಾದಲ್ಲಿ ಇಂತಹ ಘಟನೆ ನಡೆದಿದೆ ಎಂದು ಸೂಚಿಸುವ ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಕಂಡುಬಂದಿಲ್ಲ. ಹೀಗಾಗಿ ವೈರಲ್ ಪೋಸ್ಟ್ ನಮಗೆ ಹಲವು ಅನುಮಾನಗಳಿಗೆ ಕಾರಣವಾಗಿತ್ತು.

ಹೀಗಾಗಿ ಈ ಬಗ್ಗೆ ಇನ್ನಷ್ಟು ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಜುಲೈ 07, 2025 ರಂದು ಎಕ್ಸ್ ಪೋಸ್ಟ್ನಲ್ಲಿಮೊಹರಂ ಮೆರವಣಿಗೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳುವ ವೈರಲ್ ವೀಡಿಯೊ ಸುಳ್ಳು ಎಂದು ಡಿಯೋರಿಯಾ ಪೊಲೀಸರು ಸ್ಪಷ್ಟಪಡಿಸಿರುವುದು ಕಂಡು ಬಂದಿದೆ. ಸ್ಥಳೀಯ ಅಖಾಡಾ ‘ಫೈವ್ ಸ್ಟಾರ್ ಕ್ಲಬ್’ ಸದಸ್ಯರು ‘ಪಾಕಿಸ್ತಾನ ಜಿಂದಾಬಾದ್’ ಅಲ್ಲ, ‘ಫೈವ್ ಸ್ಟಾರ್ ಜಿಂದಾಬಾದ್’ ಎಂದು ಘೋಷಣೆ ಕೂಗುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಹಾಗಾಗಿ ವೈರಲ್ ಪೋಸ್ಟ್ ದಾರಿ ತಪ್ಪಿಸುವ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.
— DEORIA POLICE (@DeoriaPolice) July 7, 2025

ಒಟ್ಟಾರೆಯಾಗಿ ಹೇಳುವುದಾದರೆ ಮೊಹರಂ ಹಬ್ಬದ ಸಂದರ್ಭದಲ್ಲಿ ಉತ್ತರ ಪ್ರದೇಶದ ದಿಯೋರಿಯಾ ಜಿಲ್ಲೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂಬ ಘೊಷಣೆಯನ್ನು ಕೂಗಲಾಗಿದೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ಆಗುತ್ತಿರುವ ಪೋಸ್ಟ್ನಲ್ಲಿ ‘ಫೈವ್ ಸ್ಟಾರ್ ಜಿಂದಾಬಾದ್’ ಎಂದು ಕೂಗಿದ್ದಾರೆ ಎಂದು ಡಿಯೋರಿಯಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹರಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಹಿಂದೂ ಮಹಿಳೆಯೊಬ್ಬರು ಮೂವರು ಸಹೋದರರನ್ನು ಮದುವೆಯಾಗಿದ್ದಾರೆ ಎಂಬುದು ಸುಳ್ಳು

