ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಹಸಿರು ಹುಲ್ಲುಗಾವಲು ಪ್ರದೇಶದಲ್ಲಿ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ ಮತ್ತು ದಟ್ಟವಾದ ಹೊಗೆ ಆವರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಕ್ಲಿಪ್ ಅನ್ನು ಹಂಚಿಕೊಳ್ಳುವವರು ಪಾಕಿಸ್ತಾನ ಸೇನೆಯು ಭಾರತೀಯ ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋವನ್ನು ಸಾಕಷ್ಟು ಮಂದಿ ಪಾಕಿಸ್ತಾನಿಗಳು ಹಂಚಿಕೊಂಡಿದ್ದು, ಭಾರತದ ದಾಳಿಗೆ ಪಾಕಿಸ್ತಾನ ಸೇನೆ ಉತ್ತರವನ್ನು ನೀಡಿದೆ ಎಂದು ಬರೆದುಕೊಂಡಿದ್ದಾರೆ. ವಿಡಿಯೋ ನೋಡಿದ ಹಲವು ಮಂದಿ ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
https://twitter.com/Move111Forward/status/1917043979499057252
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ಕೆಲವೊಂದು ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಲೋಕಮತ್ ಟೈಮ್ಸ್ನ ಎಕ್ಸ್ ಹ್ಯಾಂಡಲ್ನಲ್ಲಿಹಂಚಿಕೊಳ್ಳಲಾದ ವರದಿಯೊಂದು ಕಂಡು ಬಂದಿದೆ. ಇದರಲ್ಲಿ ನಿಫಾದ್ ಉಪ-ವಿಭಾಗದ ಶಿರಸ್ಗಾಂವ್ನಲ್ಲಿ ಅಪಘಾತಕ್ಕೀಡಾದ ವಿಮಾನವನ್ನು ಸು-30 ಎಂಕೆಐ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.
A Sukhoi fighter jet crashed in a field in the Shirajgaon area of Niphad taluka, Nashik district. Fortunately, both pilots on board managed to bail out safely using parachutes.#Sukhoi #Shirajgaon #Nashik #FighterJetCrashed #FighterJet #LokmatTimes pic.twitter.com/BK12jitKGR
— Lokmat Times (@lokmattimeseng) June 4, 2024
ವರದಿಯ ಪ್ರಕಾರ, ಭಾರತೀಯ ವಾಯುಪಡೆಯ ಸುಖೋಯ್ Su-30MKI ವಿಮಾನವು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಶಿರಸ್ಗಾಂವ್ ಬಳಿ ಪರೀಕ್ಷಾರ್ಥ ಹಾರಾಟದ ಸಮಯದಲ್ಲಿ ಪತನಗೊಂಡಿತು. ಇಬ್ಬರೂ ಪೈಲಟ್ಗಳು ಸುರಕ್ಷಿತವಾಗಿ ಹೊರಜಿಗಿದಿದ್ದು, ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಉಲ್ಲೇಖಿಸಿರುವುದು ಕೂಡ ಕಂಡು ಬಂದಿದೆ.

ಈ ಬಗ್ಗೆ ಕೆಲವೊಂದು ಕೀ ವರ್ಡ್ಗಳನ್ನು ಬಳಸಿಕೊಂಡು ಹುಡುಕಾಟವನ್ನು ನಡೆಸಿದಾಗ ನಮಗೆ ದಿ ಹಿಂದೂ ಮತ್ತು ಎನ್ಡಿಟಿವಿ ವರದಿಗಳು ಕಂಡು ಬಂದವು. ಇದರಲ್ಲಿ “ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಕೂಲಂಕುಷ ಪರೀಕ್ಷೆಯ ನಂತರ ವಿಮಾನವು ಮಹಾರಾಷ್ಟ್ರದ ಓಜರ್ನಿಂದ ಹೊರಟು ಪೈಲಟ್ಗಳು ಗುರುತಿಸಿದ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿರುವುದು ಕಂಡು ಬಂದಿದೆ. ಈ ವರದಿಗಳು ಕೂಡ 4 ಜೂನ್ 2024ರಂದು ಪ್ರಕಟಗೊಂಡಿದೆ. ಹೀಗಾಗಿ ವೈೆರಲ್ ವಿಡಿಯೋ ಒಂದು ವರ್ಷ ಹಳೆಯದ್ದು, ಮತ್ತು ಭಾರತದ್ದೇ ವಿಡಿಯೋ ಎಂಬುದು ಖಚಿತವಾಗಿದೆ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಾಗುತ್ತರುವ ಹಾಗೆ ಪಾಕಿಸ್ತಾನ ಸೇನೆಯು ಭಾರತದ ರಫೇಲ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂಬುದು ಸಂಪೂರ್ಣವಾಗಿ ಸುಳ್ಳವಾಗಿದೆ. ವೈರಲ್ ವಿಡಿಯೋ Su-30MKI ವಿಮಾನವವನ್ನು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಶಿರಸ್ಗಾಂವ್ ಬಳಿ ಪರೀಕ್ಷಾರ್ಥ ಹಾರಾಟ ನಡೆಸುವಾಗ ಪತನಗೊಂಡಿರುವುದಕ್ಕೆ ಸಂಬಂಧಿಸಿದ್ದಾಗಿದೆ. ಈ ಕಾರಣದಿಂದ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ವಿಪಕ್ಷದ ನಾಯಕರು ಮಾತನಾಡಿಲ್ಲ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

