ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ, ಕೆಲವು ನಕಲಿ ಮತ್ತು ದಾರಿತಪ್ಪಿಸುವ ಪೋಸ್ಟ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲೂ ಪ್ರಮುಖವಾಗಿ ಪಾಕಿಸ್ತಾನಿ ಮಾಧ್ಯಮಗಳು, ಹಾಗೂ ಅಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಕುರಿತು ವಿವಿಧ ರೀತಿಯಾದ ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಡುತ್ತಿವೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿ ಕೇಳಿದ ಹಲವು ಮಂದಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸನ್ನಿವೇಶ ಇರುವ ಹಿನ್ನೆಲೆಯಲ್ಲಿ ಈ ರೀತಿಯ ಘಟನೆಯಾಗಿದೆ ಎಂದ ಹಲವರು ಭಾವಿಸಿದ್ದಾರೆ. ಸಾಕಷ್ಟು ಮಂದಿ ಇದೇ ಕಾರಣದಿಂದ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಹುಡುಕಾಟ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಪೋಸ್ಟ್ ಕುರಿತು ವಿವಿಧ ಕೀ ವರ್ಡ್ಗಳನ್ನು ಬಳಸಿಕೊಂಡು ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಮೇ 8 ರಂದು ANI ಎಕ್ಸ್ ಪೋಸ್ಟ್ನಲ್ಲಿ ಈ ಕುರಿತು ಮಾಹಿತಿಯೊಂದು ಕಂಡು ಬಂದಿದೆ. ಅದರಲ್ಲಿ “ಪಠಾಣ್ಕೋಟ್ ಅಥವಾ ರಾಜೌರಿಯಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಹತ್ಯಾ ದಾಳಿಯ ಕುರಿತಾದ ಸುದ್ದಿ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಸೇನಾ ಮೂಲಗಳು ತಿಳಿಸಿವೆ” ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.
News reports with respect to suicide attacks by terrorists at Pathankot or Rajouri are completely false: Army officials pic.twitter.com/PpldlDUBJp
— ANI (@ANI) May 8, 2025
ದೂರದರ್ಶನ ಉತ್ತರ ಪ್ರದೇಶದ ಯೂಟ್ಯೂಬ್ ಚಾನೆಲ್ನಲ್ಲಿ ಕೂಡ ಅಪ್ಲೋಡ್ ಮಾಡಲಾದ ವೀಡಿಯೊ ಸುದ್ದಿಯಲ್ಲಿ ರಾಜೌರಿಯಲ್ಲಿ ಭಯೋತ್ಪಾದಕರು ಆತ್ಮಹತ್ಯಾ ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು ಎಂದು ವರದಿ ಮಾಡಿರುವುದು ಕಂಡು ಬಂದಿದೆ. ಪಿಐಬಿ ಫ್ಯಾಕ್ಟ್ ಚೆಕ್ನ ಎಕ್ಸ್ ಹ್ಯಾಂಡಲ್ನಲ್ಲಿ ಕೂಡ “ಜಮ್ಮು ಅಥವಾ ರಾಜೌರಿಯಲ್ಲಿ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು ಎಂದು ವರದಿ ಪ್ರಕಟಿಸಿರುವುದು ಕಂಡು ಬಂದಿದೆ.
🚨 #Fake_news is circulating about a "fidayeen" attack on an Army brigade in #Rajouri, #Jammu and #Kashmir.#PIBFactCheck:
▶️ No such #fidayeen or suicide attack has occurred on any army cantt.
⚠️ Do not fall for these false claims intended to #mislead and cause confusion. pic.twitter.com/x8Az5tigUO
— PIB Fact Check (@PIBFactCheck) May 8, 2025
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂಬುದು ಸುಳ್ಳು, ಆ ರೀತಿಯ ಯಾವುದೇ ದಾಳಿಗಳು ಭಾರತೀಯ ಸೇನೆಯ ಮೇಲೆ ಆಗಿಲ್ಲ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಹಾಗೆಯೇ ಈ ಬಗ್ಗೆ ಸರ್ಕಾರ ಕೂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ವೈರಲ್ ಪೋಸ್ಟ್ ಸಂಪೂರ್ಣವಾಗಿ ಸುಳ್ಳಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಸಂದೇಶವನ್ನು ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಜಲಂಧರ್ನ ಆದಂಪುರದಲ್ಲಿರುವ ಮಿಲಿಟರಿ ನೆಲೆಯ ಮೇಲೆ ಪಾಕ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಂಡ ಪಾಕಿಸ್ತಾನಿಗಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

