ಭಾರತ ತಂಡ 2025 ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿತು. ಇದಾದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಭೇಟಿಯಾಗಿ ಮಾತನಾಡುತ್ತಿರುವುದನ್ನು ಕಾಣಬಹುದು. ಬಳಕೆದಾರರು ಈ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳುತ್ತಿದ್ದಾರೆ.
https://twitter.com/RajsBJP/status/1898779916319052150
ವೈರಲ್ ವಿಡಿಯೋದಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಆಟಗಾರರನ್ನು ಭೇಟಿಯಾಗುತ್ತಿರುವುದನ್ನು ಕಾಣಬಹುದಾಗಿದೆ. ಈ ಕಾರಣದಿಂದ ಹಲವರು ವೈರಲ್ ವಿಡಿಯೋವನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಹೀಗೆ ವ್ಯಾಪಕವಾಗಿ ಶೇರ್ ಮಾಡಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ಮುಂದಾದೆವು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ಹಿಂದೂಸ್ತಾನ್ ವೆಬ್ಸೈಟ್ನಲ್ಲಿ ವೈರಲ್ ವೀಡಿಯೊಗೆ ಸಂಬಂಧಿಸಿದ ಸುದ್ದಿ ವರದಿಯೊಂದು ಕಂಡು ಬಂದಿದೆ.

ಈ ವರದಿಯಲ್ಲಿ 21 ನವೆಂಬರ್ 2023ರಲ್ಲಿ ಪ್ರಕಟಿಸಲಾಗಿದೆ. ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ 2023 ರ ವಿಶ್ವಕಪ್ನ ಅಂತಿಮ ಪಂದ್ಯದಲ್ಲಿ ಸೋತ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಟೀಮ್ ಇಂಡಿಯಾ ಆಟಗಾರರೊಂದಿಗೆ ವಿಶೇಷ ಸಭೆ ನಡೆಸಿದರು. ಪ್ರಧಾನಿ ಮೋದಿ ಆಟಗಾರರೊಂದಿಗೆ ಮಾತನಾಡಿ ಅವರನ್ನು ಪ್ರೋತ್ಸಾಹಿಸಿದರು ಎಂಬುದು ಕಂಡು ಬಂದಿದೆ.

ಈ ಬಗ್ಗೆ ಇನ್ನಷ್ಟು ಹುಡುಕಾಟವನ್ನು ನಡೆಸಿದಾಗ ANI ವೆಬ್ಸೈಟ್ನಲ್ಲಿಯೂ ಇದೇ ರೀತಿಯಾದ ವರದಿ ಕಂಡು ಬಂದಿದೆ. ಇದರಲ್ಲಿ ಕೂಡ ಆಸ್ಟ್ರೇಲಿಯಾ ವಿರುದ್ಧದ 2023 ರ ODI ವಿಶ್ವಕಪ್ ಫೈನಲ್ನಲ್ಲಿ ಟೀಮ್ ಇಂಡಿಯಾ ಸೋತ ನಂತರ, ಪ್ರಧಾನಿ ಮೋದಿ ಭಾರತೀಯ ತಂಡದ ಆಟಗಾರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿದರು ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಹೀಗೆ ಹಲವು ವರದಿಗಳಲ್ಲಿ ಕೂಡ ವೈರಲ್ ವಿಡಿಯೋವಿನ ಫೋಟೋ ಮತ್ತು ವಿಡಿಯೋಗಳನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಅವರು 2023 ರ ವಿಶ್ವಕಪ್ನ ಅಂತಿಮ ಪಂದ್ಯದಲ್ಲಿ ಸೋತ ನಂತರ ಭಾರತೀಯ ಆಟಗಾರರನ್ನು ಭೇಟಿಯಾಗಿದ್ದಕ್ಕೆ ಸಂಬಂಧಿಸಿದ್ದಾಗಿದೆ ಎಂಬುದು ಖಚಿತವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ರೀತಿ ಭಾರತ ತಂಡ 2025 ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ತಂಡವನ್ನು ಭೇಟಿ ಮಾಡಿದ್ದಾರೆ ಎಂಬುದು ಸುಳ್ಳು. ವೈರಲ್ ವಿಡಿಯೋ 2023 ರ ವಿಶ್ವಕಪ್ನ ಅಂತಿಮ ಪಂದ್ಯದಲ್ಲಿ ಸೋತ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾಗಿರುವುದಕ್ಕೆ ಕಂಡು ಬಂದಿದೆ. ಹೀಗಾಗಿ ಸುಳ್ಳು ನಿರೂಪಣೆಯೊಂದಿಗೆ ಕೂಡಿರುವ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ
ಇದನ್ನೂ ಓದಿ : Fact Check | ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

