Fact Check: ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕಿಯನ್ನು ಅವಮಾನಿಸಿದ್ದಾರೆ ಎಂಬ ವೀಡಿಯೊ ಸುಳ್ಳು
ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕಿಯನ್ನು ಅವಮಾನಿಸಲಾಗಿದೆ ಎಂದು ಆರೋಪಿಸುವ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕರಿಗೆ ರಾಜೀನಾಮೆಯನ್ನು ಕೊಡಿಸಿ ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದಾರೆ” ಎಂದು ಈ ವೀಡಿಯೊವನ್ನು ಎಕ್ಸ್ (ಟ್ವಿಟರ್) ನ ಬಳಕೆದಾರರಾದ ಸುನಂದಾ ರಾಯ್ ಮತ್ತು ಅಜಯ್ ಚೌಹಾಣ್ ರವರು ತಮ್ಮ ಪುಟಗಳಲ್ಲಿ ಹಂಚಿಕೊಂಡಿದ್ದಾರೆ. ಫ್ಯಾಕ್ಟ್ ಚೆಕ್: ಬಾಂಗ್ಲಾದೇಶದ ಪತ್ರಕರ್ತರಾದ ಶೋಹನೂರ್ ರಹಮಾನ್, ರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ವೀಡಿಯೋದಲ್ಲಿರುವ ಮಹಿಳೆ ವೇಶ್ಯಾವಾಟಿಕೆ ಮತ್ತು ಮಾನವ ಕಳ್ಳಸಾಗಾಣಿಕೆಯಲ್ಲಿ ಸಿಕ್ಕಿಬಿದ್ದಿದ್ದಳು ಎಂದು ತಿಳಿಸಿದ್ದಾರೆ. ಇದಲ್ಲದೆ, ವೇಶ್ಯಾವಾಟಿಕೆ ಮತ್ತು ಮಹಿಳಾ…