
Fact Check | ಮೋದಿಯವರೊಂದಿಗೆ ಇರುವ ಯೋಗ ಪಟುವಿನ ಫೋಟೋವನ್ನು ʼಕುವೈತ್ ರಾಣಿʼ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ನ ರಾಣಿಯೊಂದಿಗೆ ಮಾತನಾಡಿದ್ದಾರೆ ಎಂಬ ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಫೋಟೋದಲ್ಲಿ ಕುವೈತ್‌ನ ರಾಣಿ ಹಿಜಾಬ್ ಧರಿಸದೇ ಸರಳವಾದ ಉಡುಪನ್ನು ಧರಿಸಿದ್ದಾರೆ. 2024ರ ಡಿಸೆಂಬರ್‌ನಲ್ಲಿ ಮೋದಿ ಅವರು ಕುವೈತ್‌ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ “ಕುವೈತ್ ರಾಣಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ” ಎಂಬ ಶೀರ್ಷಿಕೆಯೊಂದಿಗೆ ಈ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿರುವ ಫೋಟೋದ ಕುರಿತು ನಿಜವನ್ನು…