Fact Check: 2022 ರ ಹಳೆಯ ವಿಡಿಯೋವನ್ನು ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಅಮಿತ್ ಶಾ ನೀಡಿದ ಹೇಳಿಕೆ ವಿರುದ್ಧ ಬೃಹತ್ ಪ್ರತಿಭಟನೆ ಎಂದು ಹಂಚಿಕೊಳ್ಳಲಾಗುತ್ತಿದೆ
ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಇತ್ತೀಚೆಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿವೆ. ಈ ನಡುವೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತೋರಿಸುವ 28 ಸೆಕೆಂಡುಗಳ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ ಈ ರ್ಯಾಲಿ ನಡೆದಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಅನೇಕ ಎಕ್ಸ್ ಮತ್ತು ಫೇಸ್‌ಬುಕ್ ಬಳಕೆದಾರರು ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದು, ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆಯನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ್ದಾರೆ….
