Fact Check: ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?
ಈ ಬಾರಿಯ ಕಾಂಗ್ರೆಸ್ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…