
Fact Check | ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಸೋತರೂ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು
ಫೆಬ್ರವರಿ 5 ರಂದು ನಡೆದ 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಜಯ ಸಾಧಿಸಿತು. ಈ ಮೂಲಕ 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. 2015 ರಿಂದ ಅಧಿಕಾರದಲ್ಲಿದ್ದ ಆಮ್ ಆದ್ಮ ಪಕ್ಷ (ಎಎಪಿ) 22 ಸ್ಥಾನಗಳನ್ನು ಗೆದ್ದಿದೆ ಕಾಂಗ್ರೆಸ್ ಸತತ ಮೂರನೇ ಅವಧಿಗೆ ಯಾವುದೇ ಸ್ಥಾನಗಳನ್ನು ಗಳಿಸಲಿಲ್ಲ. ಹೀಗಿರುವಾಗ ಈಗ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಹೀನಾಯವಾಗಿ ಸೋತರು ಸಂಭ್ರಮಿಸಿದ್ದಾರೆ ಎಂದು…