Fact Check: ಶಿವಸೇನೆ ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರ ದಾವೂದ್‌ಗೆ ಕ್ಲೀನ್ ಚಿಟ್ ನೀಡಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ ಎಂಬುದು ಸುಳ್ಳು
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಕ್ಲೀನ್ ಚಿಟ್ ನೀಡುತ್ತದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖಂಡ ಸಂಜಯ್ ರಾವತ್ ಹೇಳುತ್ತಿರುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಚಂದ್ರ ಪವಾರ್) ಅನ್ನು ಒಳಗೊಂಡಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20, 2024 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು,…