Fact Check | ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಡಬಲ್ ಮಾಡಿದೆ ಎಂಬುದು ಸುಳ್ಳು
“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪ್ರತೀ ಯೂನಿಟ್ ವಿದ್ಯುತ್ಗೆ 4.75 ರೂ ಇತ್ತು. ಆದರೆ ಅಧಿಕಾರಕ್ಕೆ ಬಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ ಬಳಿಕ ಕಾಂಗ್ರೆಸ್ ಪ್ರತಿ ಯೂನಿಟ್ ವಿದ್ಯುತ್ಗೆ 7.25 ರೂ ಹೆಚ್ಚಳ ಮಾಡಿದೆ.” ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟರ್ವೊಂದರಲ್ಲಿ ಕಾಂಗ್ರೆಸ್ ಸರ್ಕಾರ ಹಲವು ವಸ್ತುಗಳು ಮತ್ತು ವಿದ್ಯುತ್ನ ದರವನ್ನು ಕೂಡ ವ್ಯಾಪಕವಾಗಿ ಹೆಚ್ಚಳ ಮಾಡಿದೆ ಎಂದು ಹಂಚಿಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಮಂದಿ ಉಚಿತವಾಗಿ 200 ಯೂನಿಟ್ ವಿದ್ಯುತ್…