 
        
            Fact Check | ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೆ
ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳು ಮತ್ತು ಮಠಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಒಂದು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್‌ನಲ್ಲಿ, “ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮನೆಗಳು, ಮಠಗಳು ಮತ್ತು ಮಹಿಳೆಯರ ಮೇಲೆ ದಾಳಿಗಳನ್ನು ‘ಶಾಂತಿ ದೂತರು’ ನಡೆಸುತ್ತಿದ್ದಾರೆ. ಇವರ ಜನಸಂಖ್ಯೆ ಎಲ್ಲಿ ಹೆಚ್ಚಾಗುತ್ತದೆಯೋ, ಅಲ್ಲಿ ಹಿಂದೂಗಳ ಸ್ಥಿತಿ ಇಂತಹದ್ದೇ ಆಗುತ್ತದೆ” ಎಂದು ಉಲ್ಲೇಖಿಸಲಾಗಿದೆ. ವೈರಲ್ ವಿಡಿಯೋವನ್ನು ನೋಡಿದ ಸಾಕಷ್ಟು ಮಂದಿ ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಕೂಡ…
