Fact Check | ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಚಿತ್ರ ಎಂದು ಎಡಿಟೆಡ್ ಫೋಟೋ ಹಂಚಿಕೆ
ನಟ ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ತೆಗೆದ ಚಿತ್ರ ಎಂದು ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದು ಹೆಚ್ಚು ವೈರಲ್ ಆಗುತ್ತಿದೆ. ಚಿತ್ರದಲ್ಲಿ, ಸೈಫ್ ಅಲಿ ಖಾನ್ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವುದನ್ನು ಕಾಣಬಹುದು. ಈಗಾಗಲೇ ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಿಂದ ಚಿಕಿತ್ಸೆ ಪೂರ್ಣಗೊಳಿಸಿ ತೆರಳಿದ್ದಾರೆ ಎಂದು ವರದಿಗಳು ಕಂಡು ಬಂದಿವೆ. ಇದರ ನಡುವೆ ಈ ಫೋಟೋ ಕೂಡ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿರುವ ಸೈಫ್ ಅಲಿ ಖಾನ್ ಅವರು ಹೇಗೆ ಡಿಸ್ಚಾರ್ಜ್ ಆಗಿದ್ದಾರೆ…