Fact Check | ಪಾಕಿಸ್ತಾನ ವಿರುದ್ಧದ ಸಂಘರ್ಷದಲ್ಲಿ ಪ್ರಧಾನಿ ಮೋದಿ ತಮ್ಮ ಸಹಾಯ ನಿರಾಕರಿಸಿದ್ದರು ಎಂದು ಡೊನಾಲ್ಡ್ ಟ್ರಂಪ್ ಹೇಳಿಲ್ಲ
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಂತರದಲ್ಲಿ ಕದನ ವಿರಾಮ ಘೋಷಿಸಲಾಗಿದ್ದು, ಇದೀಗ ಕದನ ವಿರಾಮವು ವಿವಿಧ ರೀತಿಯ ಚರ್ಚೆಗಳಿಗೆ ಕೂಡ ಕಾರಣವಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರದ್ದು ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಅವರು ಪಾಕಿಸ್ತಾನವನ್ನು ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಹಾಯವನ್ನು ನಿರಾಕರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಡೊನಾಲ್ಡ್ ಟ್ರಂಪ್ ಅವರು “ನಾನು…
