Fact Check | “ನಾನು ರೈತನ ಮಗ, ಯಾರಿಗೂ ಹೆದರುವುದಿಲ್ಲ” ಎಂದು ಜಗದೀಪ್ ಧನಕರ್ ಇತ್ತೀಚೆಗೆ ಹೇಳಿದ್ದಾರೆ ಎಂಬುದು ಸುಳ್ಳು

ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಜುಲೈ 21, 2025 ರಂದು ಅನಿರೀಕ್ಷಿತವಾಗಿ ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು . ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ , ತಮ್ಮ ವೈದ್ಯಕೀಯ ಆರೈಕೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಲು ತಾವು ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದಾರೆ. ಅವರ ಅವಧಿ ಪೂರ್ಣಗೊಳ್ಳುವ ಸುಮಾರು ಎರಡು ವರ್ಷಗಳ ಮೊದಲು ಅವರ ನಿರ್ಧಾರ ಬಂದಿದ್ದು, ವ್ಯಾಪಕ ಊಹಾಪೋಹ ಮತ್ತು ರಾಜಕೀಯ ಚರ್ಚೆಗೆ ಕಾರಣವಾಯಿತು.ಈಗ ಅಂತಹದ್ದೇ…

Read More

Fact Check | ಕೇಂದ್ರ ಸರ್ಕಾರವೇ ಒತ್ತಡ ಹೇರಿ ಉಪರಾಷ್ಟ್ರಪತಿ ಅವರಿಂದ ರಾಜೀನಾಮೆ ಪಡೆದಿದೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ

ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಒಂದು ಹೇಳಿಕೆ ವೈರಲ್ ಆಗುತ್ತಿದೆ. ಈ ಹೇಳಿಕೆಯ ಪ್ರಕಾರ, “ಆಪರೇಷನ್ ಸಿಂಧೂರ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಿದೆ. ಭಾರತಕ್ಕೆ ಜಾಗತಿಕ ಮುಜುಗರ ಮತ್ತು ದೇಶದಲ್ಲಿ ರಾಜಕೀಯ ಕಂಪನಕ್ಕೆ ಕೂಡ ಇದು ಕಾರಣವಾಗಿದೆ, ಇದರಿಂದಾಗಿ ಜಗದೀಪ್ ಧನಕರ್ ಸ್ವಪಕ್ಷದ ವಿರುದ್ಧ ಅಸಮಾಧಾನವನ್ನು ಹೊಂದಿದ್ದರು, ಹೀಗಾಗಿ ವಿಪಕ್ಷಗಳಿಗೆ ಈ ಕುರಿತು ಸಂಸತ್ತಿನಲ್ಲಿ ಹೆಚ್ಚು ಅವಧಿಗಳ ಕಾಲ ಚರ್ಚಿಸಲು ಅವಕಾಶ ನೀಡಿದ್ದರು, ಇದರಿಂದ ಅವರ ಪಕ್ಷವೇ ಧನಕರ್‌ ಅವರ ರಾಜೀನಾಮೆಗೆ ಒತ್ತಾಯಿಸಿತು”…

Read More

Fact Check | ರಾಹುಲ್ ಗಾಂಧಿ ಪುರಿ ಜಗನ್ನಾಥ ರಥಯಾತ್ರೆಯನ್ನು ನಾಟಕ ಎಂದು ಹೇಳಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಇದರಲ್ಲಿ ಪೂರಿ ಜಗನ್ನಾಥನ ರಥಯಾತ್ರೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ನಾಟಕ’ ಎಂದು ಕರೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆ ಮೂಲಕ ಸಂಸತ್ತಿನ ವಿಪಕ್ಷ ನಾಯಕನನ್ನು ಹಿಂದೂ ವಿರೋಧಿ ಎಂದು ಕರೆದಿರುವ ಹಲವರು, ರಾಹುಲ್‌ ಗಾಂಧಿ ವಿರುದ್ಧ ವ್ಯಾಪಕವಾಗಿ ಟೀಕೆ ಮಾಡುತ್ತಿದ್ದಾರೆ. ವೈರಲ್‌ ವಿಡಿಯೋವನ್ನು ಕೂಡ ಪರಿಶೀಲನೆ ನಡೆಸಿದಾಗ ಅದರಲ್ಲಿ ರಾಹುಲ್ ಗಾಂಧಿ ಅವರು “ ಊಹಿಸಿಕೊಳ್ಳಿ ಒಡಿಶಾದಲ್ಲಿ ಜಗನ್ನಾಥ ಯಾತ್ರೆ ನಡೆದಾಗ, ರಥ ಹೊರಬರುತ್ತದೆ,  ಲಕ್ಷಾಂತರ ಜನರು ಅದನ್ನು…

Read More

Fact Check | ರಾಹುಲ್‌ ಗಾಂಧಿ ಜೊತೆಗೆ ನ್ಯಾಯಾಧೀಶರು ಸೆಲ್ಫಿ ತೆಗೆದುಕೊಂಡಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸತ್ತಿನ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮಂಗಳವಾರ ಲಕ್ನೋದ ವಿಶೇಷ ಸಂಸದ-ಶಾಸಕ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗಿದ್ದರು. ಈ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆಯಲು ಆದೇಶಿಸಿತು ಆದರೆ ಜಾಮೀನು ಅರ್ಜಿಯನ್ನು ಸ್ವೀಕರಿಸಿದ ನಂತರ ಅವರನ್ನು ಬಿಡುಗಡೆ ಮಾಡಿತು. ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಯವರ ಹಾಜರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರಲ್ಲಿ ನ್ಯಾಯಾಧೀಶರು ಸ್ವತಃ ರಾಹುಲ್ ಗಾಂಧಿಯವರ ಅಭಿಮಾನಿಯಾಗಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.  ಹಲವರು ಇದನ್ನು…

Read More

Fact Check | ಗಾಂಧೀಜಿ ಸ್ಮಾರಕದಿಂದ ರಾಹುಲ್ ಗಾಂಧಿ ಹಣ ತೆಗೆದುಕೊಂಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಸಂಸದ ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗುತ್ತಿದೆ. ಹಲವರು ಇದನ್ನು ಹಂಚಿಕೊಂಡಿದ್ದು, ಮಹಾತ್ಮ ಗಾಂಧಿ ಅವರ ಸಮಾಧಿಯಿಂದ ರಾಹುಲ್ ಗಾಂಧಿ ಚಿಲ್ಲರೆ ಹಣವನ್ನು ಎತ್ತಿಕೊಂಡು ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ ಎಂದು ಹಲವರು ಬರೆದುಕೊಂಡಿದ್ದಾರೆ. ಈ ವಿಡಿಯೋ ವ್ಯಾಪಕ ಟೀಕೆಗೆ ಕೂಡ ಕಾರಣವಾಗಿದೆ. ವೈರಲ್ ವಿಡಿಯೋದಲ್ಲಿ ಕೂಡ ರಾಹುಲ್ ಗಾಂಧಿ ಸಮಾಧಿಯೊಂದರಿಂದ ಏನನ್ನೋ ಎತ್ತಿಕೊಂಡು ತಮ್ಮ ಜೇಬಿನಲ್ಲಿ ಇಟ್ಟುಕೊಳ್ಳುವುದು ಕಂಡು ಬಂದಿದೆ. ಹೀಗಾಗಿ ವಿಡಿಯೋವನ್ನು ನಿಜವೆಂದು ಭಾವಿಸಿ,…

Read More

Fact Check | ಮಿರ್ಜಾಪುರದಲ್ಲಿ ನಡೆದಿದ್ದು ಎರಡು ಮುಸ್ಲಿಂ ಕುಟುಂಬಗಳ ನಡುವಿನ ಗಲಾಟೆ ಹೊರತು ಕೋಮುಗಲಭೆಯಲ್ಲ

ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ಹಲವರು ಈ ವಿಡಿಯೋದೊಂದಿಗೆ ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯ ಮೇಲೆ ದಾಳಿ ಮಾಡಿ ಥಳಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಇಬ್ಬರು ಮುಸ್ಲಿಂ ವ್ಯಕ್ತಿಗಳು ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ತಮ್ಮ ಪೋಸ್ಟ್‌ಗಳಲ್ಲಿ ಬರೆದುಕೊಂಡಿದ್ದಾರೆ. ये बांग्लादेश के नही है भारत का ही है बांग्लादेश में तो सनातनी की हालत तो…

Read More