Fact Check | ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ ನಾಲ್ವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂಬುದು ಸುಳ್ಳು

ಆಪರೇಷನ್ ಅಖಲ್ ಎಂಬುದು ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಮಹತ್ವದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದೆ. ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ದಟ್ಟವಾದ ಅಖಲ್ ಕಾಡುಗಳಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆಗಸ್ಟ್ 4, 2025 ರ ಹೊತ್ತಿಗೆ ಅದು ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಕಾರ್ಯಾಚರಣೆಯ ಮಧ್ಯೆ ಅಂತರ್ಜಾಲದಲ್ಲಿ ಒಂದು ಹೇಳಿಕೆ ವೈರಲ್ ಆಗುತ್ತಿದೆ. X ನಲ್ಲಿ ಪಾಕಿಸ್ತಾನ ಮೂಲದ ಖಾತೆ ‘ಟ್ಯಾಕ್ಟಿಕಲ್ ಟ್ರಿಬನ್’, “4 ದಿನಗಳ ಕುಲ್ಗಮ್ ಎನ್‌ಕೌಂಟರ್ ನಡೆಯುತ್ತಿದೆ, 3…

Read More

Fact Check | ಅರುಣಾಚಲ ಪ್ರದೇಶದಲ್ಲಿ ಭೂಕುಸಿತವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್‌ ಆಗುತ್ತಿದ್ದು, ಇದು ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದ ದೃಶ್ಯ ಎಂದು ಹೇಳಲಾಗುತ್ತಿದೆ. ಈ ವೀಡಿಯೊದಲ್ಲಿ ಭೂಕುಸಿತದಿಂದ ರಸ್ತೆಯೊಂದರಲ್ಲಿ ಭಾರಿ ಪ್ರಮಾಣದ ಕೆಸರು ಮತ್ತು ಕಲ್ಲುಬಂಡೆಗಳು ಜಾರುವ ದೃಶ್ಯವಿದೆ. ಫೇಸ್‌ಬುಕ್‌ನಲ್ಲಿ ‘ಡಾಮ್‌ ವೀಡಿಯೊಸ್’ ಎಂಬ ಬಳಕೆದಾರ ಈ ವೀಡಿಯೊವನ್ನು 2 ಜೂನ್‌ 2025ರಂದು ಹಂಚಿಕೊಂಡಿದ್ದು, ಇದು ಅರುಣಾಚಲ ಪ್ರದೇಶದ ಭೂಕುಸಿತ ಎಂದು ಬರೆದುಕೊಂಡಿದ್ದಾರೆ.. ಈ ವೀಡಿಯೊ ಜನರಲ್ಲಿ ಗೊಂದಲವನ್ನು ಸೃಷ್ಟಿಸಿದ್ದು, ಈ ಪ್ರದೇಶದಲ್ಲಿ ಭೀಕರ ಪ್ರಾಕೃತಿಕ ವಿಕೋಪ ಸಂಭವಿಸಿದೆ ಎಂಬ ಭಾವನೆಯನ್ನು…

Read More

Fact Check | ಶ್ರೀ ಮಾತಾ ವೈಷ್ಣೋದೇವಿ ಯಾತ್ರಿಕರ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವೊಂದು ವೈರಲ್‌ ಆಗಿದೆ, ಶ್ರೀ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬೆಂಗಾವಲು ಪಡೆಯ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸುತ್ತಿದ್ದಾರೆ ಎಂದಯ ವೈರಲ್‌ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮೇಲಿನ ಬೆಟ್ಟದ ಇಳಿಜಾರಿನ ಕಡೆಗೆ ಕಲ್ಲುಗಳನ್ನು ಎಸೆಯುತ್ತಿರುವುದು ಕಂಡು ಬಂದಿದೆ. ಕಣಿವೆಯಲ್ಲಿ ನದಿ ಮತ್ತು ಗುಂಡಿನ ಚಕಮಕಿಯ ಶಬ್ದಗಳು ಮತ್ತು ಜನರು “ಮಾರೋ ಮಾರೋ…” ಎಂದು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಂಡು ಬಂದಿದೆ.. ವೈರಲ್‌ ಪೋಸ್ಟ್‌ನಲ್ಲಿ ಉಲ್ಲೇಖಿಸಿದ ಬರಹಗಳಿಗೂ ವಿಡಿಯೋಗೂ ಸಾಕಷ್ಟು ಸಾಮ್ಯತೆ ಇರುವುದರಿಂದ ಹಲವರು ವೈರಲ್‌…

Read More

Fact Check | ಪಾಕಿಸ್ತಾನ ವಿರುದ್ಧದ ಸಂಘರ್ಷದಲ್ಲಿ ಪ್ರಧಾನಿ ಮೋದಿ ತಮ್ಮ ಸಹಾಯ ನಿರಾಕರಿಸಿದ್ದರು ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿಲ್ಲ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ನಂತರದಲ್ಲಿ ಕದನ ವಿರಾಮ ಘೋಷಿಸಲಾಗಿದ್ದು, ಇದೀಗ ಕದನ ವಿರಾಮವು ವಿವಿಧ ರೀತಿಯ ಚರ್ಚೆಗಳಿಗೆ ಕೂಡ ಕಾರಣವಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರದ್ದು ಎನ್ನಲಾದ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಅವರು ಪಾಕಿಸ್ತಾನವನ್ನು ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಹಾಯವನ್ನು ನಿರಾಕರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಕೂಡ ಡೊನಾಲ್ಡ್ ಟ್ರಂಪ್ ಅವರು “ನಾನು…

Read More

Fact Check | ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂಬುದು ಸುಳ್ಳು

ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ, ಕೆಲವು ನಕಲಿ ಮತ್ತು ದಾರಿತಪ್ಪಿಸುವ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲೂ ಪ್ರಮುಖವಾಗಿ ಪಾಕಿಸ್ತಾನಿ ಮಾಧ್ಯಮಗಳು, ಹಾಗೂ ಅಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಕುರಿತು ವಿವಿಧ ರೀತಿಯಾದ ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಡುತ್ತಿವೆ.  ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಕೇಳಿದ ಹಲವು ಮಂದಿ ಭಾರತ ಮತ್ತು ಪಾಕಿಸ್ತಾನದ…

Read More

Fact Check | ಪಾಕಿಸ್ತಾನಿಗಳು ಹಣ ಹಿಂಪಡೆಯಲು ಬ್ಯಾಂಕ್ ಮುಂದೆ ಸಾಲಿನಲ್ಲಿ ನಿಂತಿದ್ದಾರೆ ಎಂದು ಅಫ್ಘಾನಿಸ್ತಾನದ ವಿಡಿಯೋ ಹಂಚಿಕೆ

ಭಾರತೀಯ ಸೇನೆಯಿಂದ 2025 ರ ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (POK) ಉಗ್ರಗಾಮಿ ನೆಲೆಗಳ ಮೇಲೆ ನಡೆಸಿದ ನಿಖರವಾದ ಸೈನಿಕ ಕಾರ್ಯಾಚರಣೆಗೆ ಭಾರತೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಕಾರ್ಯಾಚರಣೆಯು 22 ಏಪ್ರಿಲ್ 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿತ್ತು. ಈ ದಾಳಿಯಿಂದ ಭಯಬೀತಗೊಂಡಿರುವ ಪಾಕಿಸ್ತಾನಿಗಳು, ಇದೀಗ ಅಲ್ಲಿನ ಬ್ಯಾಂಕುಗಳಲ್ಲಿ ತಮ್ಮ ಹಣವನ್ನು ಹಿಂಪಡೆಯಲು ಸರತಿ ಸಾಲುಗಳಿನಲ್ಲಿ ನಿಂತಿದ್ದಾರೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ…

Read More

Fact Check | ಪಾಕಿಸ್ತಾನ ವಿರುದ್ಧ ಯುದ್ಧಕ್ಕೆ ತೆರಳುತ್ತಿರುವ ಭಾರತೀಯ ಸೈನಿಕರಿಗೆ ಮಹಿಳಾ ಬೈಕರ್ ಸೆಲ್ಯೂಟ್ ಮಾಡಿದ್ದಾರೆ ಎಂಬುದು ಸುಳ್ಳು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಫೋಟೋ ಮತ್ತು ವೀಡಿಯೊಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭವಾಗುತ್ತಿದೆ ಮತ್ತು ಒರ್ವ ಮಹಿಳಾ ಬೈಕರ್‌ ಯುದ್ಧಕ್ಕೆ ಹೋಗುವ ಸೈನಿಕರಿಗೆ ಸೆಲ್ಯೂಟ್ ಮಾಡಿದ್ಧಾಳೆ ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್​ಬುಕ್ ಬಳಕೆದಾರರೊಬ್ಬರು ಏಪ್ರಿಲ್ 30, 2025 ರಂದು ಈ ವೀಡಿಯೊವನ್ನು ಹಂಚಿಕೊಂಡು, ‘‘ಯುದ್ಧ ವಾತಾವರಣದಲ್ಲಿ ಸೈನ್ಯದ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಪ್ರತಿಯೊಬ್ಬ ನಿಜವಾದ…

Read More

Fact Check | ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ ಕಾರಣಕ್ಕಾಗಿ ಹಿಂದೂ ಕುಟುಂಬದ ಮೇಲೆ ಹಲ್ಲೆ ನಡೆದಿದೆ ಎಂಬುದು ಸುಳ್ಳು

ಪಹಲ್ಗಾಮ್‌ ದಾಳಿಯ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಭಾರತ ಪಾಕಿಸ್ತಾನದ ವಿರುದ್ಧ ಯುದ್ಧ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಪುಣೆಯ ಭವಾನಿ ಪೇಟ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ವಿಡಿಯೋ ಒಂದು ವೈರಲ್ ಆಗಿದ್ದು, ಇದರಲ್ಲಿ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಕುಟುಂಬವನ್ನು ಮುಸಲ್ಮಾನರು ಥಳಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. A Hindu family was attacked in…

Read More

Fact Check | ಪಹಲ್ಗಾಮ್ ದಾಳಿಯ ಬಂಧಿತ ಭಯೋತ್ಪಾದಕ RSS ನಿಂದ ಹಣ ಪಡೆದುಕೊಂಡಿದ್ದ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಇಬ್ಬರು ಅರೆಸೈನಿಕ ಸಿಬ್ಬಂದಿಯ ವಶದಲ್ಲಿರುವ ಗಡ್ಡಧಾರಿ ವ್ಯಕ್ತಿಯನ್ನು ತೋರಿಸುವ ಚಿತ್ರವೊಂದು ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಸೆರೆಹಿಡಿಯಲಾದ ‘ಕಾಶ್ಮೀರ ಭಯೋತ್ಪಾದಕ’ ಆರೆಸ್ಸೆಸ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಹಣಕಾಸು ಪಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಬರೆದುಕೊಳ್ಳಲಾಗಿದೆ. ಇನ್ನೂ ಕೆಲವರು ಆರ್‌ಎಸ್‌ಎಸ್‌ ಈ ಭಯೋತ್ಪಾದಕರ ಹಿಂದಿರುವ ಉದ್ದೇಶ, ಕೋಮುದ್ವೇಷವೇ ಕಾರಣವಾಗಿದೆ ಎಂದು ಬರೆದುಕೊಂಡಿದ್ದಾರೆ. ಕೆಲವು ಪಾಕಿಸ್ತಾನಿ ಖಾತೆಗಳಲ್ಲಿ ಕೂಡ ಈ ಫೋಟೋವನ್ನು ಹಂಚಿಕೊಂಡು ಆರ್‌ಎಸ್‌ಎಸ್‌ನಿಂದ ಭಯೋತ್ಪಾದಕರಿಗೆ ಹಣ ನೀಡಲಾಗಿದೆ…

Read More

Fact Check | ಪಾಕಿಸ್ತಾನ ಸೇನೆಯು ಭಾರತದ ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದು ಸುಳ್ಳು

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಹಸಿರು ಹುಲ್ಲುಗಾವಲು ಪ್ರದೇಶದಲ್ಲಿ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ ಮತ್ತು ದಟ್ಟವಾದ ಹೊಗೆ ಆವರಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಕ್ಲಿಪ್ ಅನ್ನು ಹಂಚಿಕೊಳ್ಳುವವರು ಪಾಕಿಸ್ತಾನ ಸೇನೆಯು ಭಾರತೀಯ ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಪಾಕಿಸ್ತಾನಿಗಳು ಹಂಚಿಕೊಂಡಿದ್ದು, ಭಾರತದ ದಾಳಿಗೆ…

Read More