Fact Check | ತಮಿಳುನಾಡು ಸಿಎಂ ಎಂ. ಕೆ. ಸ್ಟಾಲಿನ್ ಅದಾನಿ ಕುರಿತ ಪ್ರಶ್ನೆಗೆ ಉತ್ತರಿಸದೆ ಹೆದರಿ ಓಡಿದ್ದಾರೆ ಎಂಬುದು ಸುಳ್ಳು
ಸೌರ ವಿದ್ಯುತ್ ಖರೀದಿಗಾಗಿ ತಮಿಳುನಾಡು, ಆಂಧ್ರಪ್ರದೇಶ ಸೇರದಂತೆ ಐದು ರಾಜ್ಯಗಳ ಸರ್ಕಾರಿ ಅಧಿಕಾರಿಗಳಿಗೆ ಗೌತಮ್ ಅದಾನಿ 2,200 ಕೋಟಿ ಲಂಚ ನೀಡಿದ್ದಾರೆ ಎಂದು ಅಮೆರಿಕದ ನ್ಯಾಯಾಲಯದಲ್ಲಿ ಆರೋಪಿಸಲಾಗಿದೆ. ಇದಾದ ಬಳಿಕ ಅದನಿ ಗ್ರೂಪ್‌ನಿಂದ ಲಂಚ ಪಡೆದ ಕಂಪನಿಗಳ ಪಟ್ಟಿಯಲ್ಲಿ ತಮಿಳುನಾಡು ವಿದ್ಯುತ್ ಮಂಡಳಿ ಹೆಸರು ಸಹ ಸೇರಿದ್ದು, ಈ ಬಗ್ಗೆ ತಮಿಳುನಾಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಹಲವರು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಅವರು ಅದಾನಿ ಗ್ರೂಪ್‌ನಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ….