Fact Check | ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ನನ್ನು ‘ಜಿಹಾದಿ’ ಎಂದು ಘೋಷಿಸಿದೆ ಎಂಬುದು ಸುಳ್ಳು
ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ ಎಕ್ಸ್‌ನಲ್ಲಿ, ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್ ಅನ್ನು ‘ಜಿಹಾದಿ’ ಎಂದು ಘೋಷಿಸಿದೆ ಎಂಬ ಸುದ್ದಿಯೊಂದು ವೈರಲ್ ಆಗಿದೆ. ಈ ಸುದ್ದಿಯು ಟಿಪ್ಪುಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಬದಲಿಗೆ ತನ್ನ ಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಬ್ರಿಟಿಷರ ವಿರುದ್ಧ ಹೋರಾಡಿದ ‘ಜಿಹಾದಿ’ ಎಂದು ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಭ್ರೊ ಕಮಲ್ ಮುಖರ್ಜಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವೈರಲ್ ಪೋಸ್ಟ್‌ನಲ್ಲಿ ಟಿಪ್ಪು ಸುಲ್ತಾನ್ ಹಿಂದೂಗಳ ಮೇಲೆ ದೌರ್ಜನ್ಯ, ಕೊಲೆ ಮತ್ತು ಮತಾಂತರಕ್ಕೆ ದೂಡಿದ ಎಂಬ ಆರೋಪಗಳನ್ನು…
