ಮಧ್ಯ ಪ್ರದೇಶ

Fact Check: ರೈಲ್ವೆ ನಿಲ್ದಾಣದಲ್ಲಿ ಪೋಲಿಸ್ ಪೇದೆಯೊಬ್ಬರು ವೃದ್ಧನಿಗೆ ತಳಿಸಿರುವ ವೀಡಿಯೋ ಮಧ್ಯಪ್ರದೇಶದ್ದಾಗಿದ್ದು ಉತ್ತರ ಪ್ರದೇಶದ್ದಲ್ಲ

ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದಲ್ಲಿ ಪೊಲೀಸ್ ಪೇದೆಯೊಬ್ಬರು ವೃದ್ಧೆಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ಹಳೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಪೊಲೀಸ್ ಪೇದೆಯೊಬ್ಬರು ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರಿಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. “ಉತ್ತರ ಪ್ರದೇಶವು ಜಂಗಲ್ ರಾಜ್‌ನತ್ತ ಸಾಗುತ್ತಿದೆ. ಪೊಲೀಸರು ಮುದುಕನನ್ನು ಹೇಗೆ ನಿರ್ದಯವಾಗಿ ಥಳಿಸುತ್ತಿದ್ದಾರೆ ಎಂಬುದನ್ನು ನೋಡಿ. ಅಮಾಯಕ ಮುಸ್ಲಿಮರ ಮನೆಗಳ ಮೇಲೆ ಗುಂಪು ಹತ್ಯೆ, ಬುಲ್ಡೋಜರ್ ಈಗ ಯುಪಿಯಲ್ಲಿ ಸಾಮಾನ್ಯವಾಗಿದೆ.” ಎಂಬ…

Read More

Fact Check | ಗ್ಯಾರಂಟಿ ಯೋಜನೆಯ ಹಣ ಕೇಳಿದ ಮಹಿಳೆಯನ್ನು ದಿಗ್ವಿಜಯ ಸಿಂಗ್‌ ಓಡಿಸಿದ್ದಾರೆ ಎಂಬುದು ಸುಳ್ಳು

“ಗ್ಯಾರಂಟಿ ಯೋಜನೆಯ ಹಣ ಕೇಳಲು ಬಂದ ಮಹಿಳೆಯೊಬ್ಬರನ್ನು ಕಾಂಗ್ರೆಸ್‌ ನಾಯಕ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್‌ ಅವರು ನಿಂದಿಸಿ ಕಳುಹಿಸಿದ್ದಾರೆ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. जब एक महिला कांग्रेस MP के पूर्व मुख्यमंत्री दिग्विजय सिंह के पास राहुल गांधी के गारंटी कार्ड के खटाखट…

Read More
ಬಿಜೆಪಿ

Fact Check: ಪ್ರಚಾರದ ವೇಳೆ ಬಿಜೆಪಿ ನಾಯಕರಿಗೆ ಚಪ್ಪಲಿ ಹಾರ ಹಾಕಿರುವುದು ಹಳೆಯ ವಿಡಿಯೋ

ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ಜರುಗಿದೆ. ಆದರೆ ಕಳೆದ ಕೆಲವು ವಾರಗಳಿಂದ ಅನೇಕ ಹಳೆಯ ವಿಡಿಯೋಗಳನ್ನು ಇತ್ತೀಚಿನದು ಎಂದು ಬಿಂಬಿಸಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಣಿಪುರದಲ್ಲಿ ಮತ ಕೇಳಲು ಹೋದ ಬಿಜೆಪಿ ನಾಯಕರನ್ನು ತಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನಲ್ಲಿ ನಡೆದ ಹಳೆಯ ಘಟನೆಯನ್ನು ಹಂಚಿಕೊಳ್ಳಲಾಗುತ್ತಿತ್ತು. ಈಗ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕನಿಗೆ ಜನರು ಚಪ್ಪಲಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಎಂಬ ವಿಡಿಯೋ ಒಂದು ಎಕ್ಸ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವೃದ್ಧರೊಬ್ಬರು…

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More

Fact Check | ಖಾಸಗಿ ಶಾಲೆಗಳಲ್ಲಿ ಮಕ್ಕಳು ಸಾಂಟಾ ಕ್ಲಾಸ್‌ ವೇಷ ಧರಿಸುವುದನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಕ್ರಿಸ್‌ಮಸ್ ದಿನದಂದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳನ್ನು ಸಾಂಟಾ ಕ್ಲಾಸ್‌ನ ವೇಷ ಧರಿಸುವುದಕ್ಕೆ ಅನುವು ಮಾಡಿಕೊಡುವುದನ್ನು ನಿಷೇಧಿಸಿ ಹೊಸ ಆದೇಶವನ್ನು ಹೊರಡಿಸಿದ್ದಾರೆ.” ಎಂಬ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಧ್ಯಪ್ರದೇಶದ ಸರ್ಕಾರ ಹಾಗು ಇತರೆ ರಾಜ್ಯಗಳ ರಾಜ್ಯ ಸರ್ಕಾರಗಳನ್ನು ಹೋಲಿಕೆ ಮಾಡಿ ಮಧ್ಯಪ್ರದೇಶದ  ಸಿಎಂ ಮೋಹನ್‌ ಯಾದವ್‌ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೊಗಳಲು ಆರಂಭಿಸಿದ್ದಾರೆ. ಇಷ್ಟೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಸುದ್ದಿಯ…

Read More

Fact check | ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್ ಮುಸಲ್ಮಾನರಿಗೆ ಎಚ್ಚರಿಕೆ ನೀಡಿದ್ದಾರೆ ಎಂಬುದು ಸುಳ್ಳು

“ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಮುಸ್ಲಿಮರಿಗೆ “ಅವರ ಧರ್ಮದ ಆಚರಣೆಗೆ ನಾವು ಅಡ್ಡಿ ಪಡಿಸುವುದಿಲ್ಲ. ದೇಶ ವಿರೋಧಿ ಘೋಷಣೆಗಳನ್ನ ಕೂಗಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ ಈ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Mohan Yadav, the New CM designate of Madya Pradesh makes the ground rule very clear. pic.twitter.com/57Jq0qXEl6 — Harbhajan ਹਰਭਜਨ🇮🇱 (@harbhajn121) December 13, 2023 ಈ ವಿಡಿಯೋದಲ್ಲಿ…

Read More

Fact Check | ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಕಣ್ಣೀರು ಹಾಕಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ನೇಮಕಗೊಳ್ಳದ ನಂತರ ಕಣ್ಣೀರು ಹಾಕಿ ಬೇಸರ ವ್ಯಕ್ತ ಪಡಿಸಿದ್ದಾರೆ..” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣ್ಣೀರು ಹಾಕಿ ಬೇಸರ ವ್ಯಕ್ತ ಪಡಿಸುವುದನ್ನು ಕಾಣ ಬಹುದಾಗಿದೆ. “ಮೋದಿ ಅಮಿತ್ ಶಾ ಅವರಿಂದ ಆದ ವಿಶ್ವಾಸ ದ್ರೋಹದಿಂದ ನೊಂದು ಕಣ್ಣೀರು ಹಾಕಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು…

Read More

ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿಲ್ಲ

ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ಹೀಗಾಗಲೇ ಮತ ಚಲಾವಣೆ ಪ್ರಕ್ರಿಯೆಗಳು ಮುಗಿದಿವೆ. ಎಲ್ಲರೂ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಮಧ್ಯ ಪ್ರದೇಶದ ಚುನಾವಣೆಯಲ್ಲಿ ಹಂಚಿಕೊಳ್ಳಲಾದ ಸುಳ್ಳು ಸುದ್ದಿಗಳು ನಿಧಾನವಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ಬಾಲಿವುಡ್ ನಟ ಅಶುತೋಷ್ ರಾಣ ಬಿಜೆಪಿಗೆ ಮತ ನೀಡುವಂತೆ ಜನರನ್ನು ಉತ್ತೇಜಿಸಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಅಶುತೋಷ್ ರಾಣ ಅವರು ಚುನಾವಣಾ ಮಹತ್ವ ಸಾರುವಂತಹ ಸಂದೇಶದೊಂದಿಗೆ ಜನರಿಗೆ ಮತದಾನ ಮಾಡುವಂತೆ ಮನವಿ ಮಾಡಲು ನಿರ್ಮಿಸಿದ ವಿಡಿಯೋ ಇದಾಗಿದೆ. ಆದರೆ ಅವರು…

Read More

Fact Check : ದಿಗ್ವಿಜಯ ಸಿಂಗ್ ಇತ್ತೀಚೆಗೆ ಸನಾತನ ಧರ್ಮದ ಬಗ್ಗೆ ತಮ್ಮ ನಿಲುವು ಬದಲಿಸಿದ್ದಾರೆ ಎಂಬ ವಿಡಿಯೋ ನಕಲಿ

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬಲು ಪ್ರಾರಂಭವಾಗಿವೆ. ಇದೇ ರೀತಿಯಲ್ಲಿ ಈಗ ಮಧ್ಯಪ್ರದೇಶದಲ್ಲಿ ವಿಡಿಯೋವೊಂದು ವೈರಲ್‌ ಆಗಿದೆ. ಅದರಲ್ಲಿ 2023 ರ ಮಧ್ಯಪ್ರದೇಶ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ದಿಗ್ವಿಜಯ ಸಿಂಗ್ ಅವರು ಸನಾತನ ಧರ್ಮದ ಬಗ್ಗೆ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ ಎಂಬ ವಿಡಿಯೋವನ್ನ ಹಂಚಿಕೊಳ್ಳಲಾಗುತ್ತಿದೆ.. ಈ ಕುರಿತು ಫ್ಯಾಕ್ಸ್‌ಲೀ ವೆಬ್‌ ತಂಡ ಫ್ಯಾಕ್ಟ್‌ಚೆಕ್‌ ಮಾಡಿದ್ದು ವೈರಲ್‌ ಆಗುತ್ತಿರುವ ವಿಡಿಯೋ ಮೂರು ಕ್ಲಿಪ್‌ಗಳನ್ನು ಎಡಿಟ್‌ ಮಾಡಿ ಒಂದು ವಿಡಿಯೋವಾಗಿ ಪರಿವರ್ತಿಸಲಾಗಿದೆ ಎಂಬುವುದನ್ನು…

Read More
ಜಾರ್ಖಂಡ್

ಜಾರ್ಖಂಡ್ ಪೊಲೀಸರ ಅಣಕು ಡ್ರಿಲ್ ವಿಡಿಯೋ ಸುಳ್ಳು ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ನೆನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣೆ ನಡೆದಿದೆ, ಇಡೀ ದೇಶವೇ ಡಿಸೆಂಬರ್ 3ರಂದು ಪ್ರಕಟವಾಗುವ ಪಂಚರಾಜ್ಯಗಳ ಪಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ ಈ ಬಾರಿ ಮಧ್ಯಪ್ರದೇಶದ ಚುನಾವಣಾ ಪ್ರಚಾರಕ್ಕಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳನ್ನೆ ತಮ್ಮ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸುಳ್ಳು ಸುದ್ದಿಗಳು, ಆಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, 2016 ರಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಮಂದಸೌರ್‌ನಲ್ಲಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಕೇಳಿದ ರೈತರ ಮೇಲೆ ಗುಂಡು ಹಾರಿಸಿತು ಅದರಲ್ಲಿ ಆರು…

Read More