Fact Check: ನೀಟ್ (ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಲಾಗಿದೆ ಎಂಬುದು ಸುಳ್ಳು
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ‘ಎಕ್ಸಾಮ್ ಜಿಹಾದ್’ ಪಿತೂರಿ ಇದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಿಬಿಐ ಬಂಧಿಸಿರುವ ಮೂವರು ಮುಸ್ಲಿಂ ವ್ಯಕ್ತಿಗಳ ಫೋಟೋಗಳನ್ನು ಹೊಂದಿರುವ ಪೋಸ್ಟ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಈ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ಇಂಟರ್ನೆಟ್‌ನಲ್ಲಿ ಹುಡುಕಾಟವನ್ನು ನಡೆಸಿದಾಗ, ಈ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಸಿಬಿಐ ಬಂಧಿಸಿರುವ ಬಗ್ಗೆ ಹಲವಾರು ಸುದ್ದಿ ವರದಿಗಳು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ನಮಗೆ ಲಭ್ಯವಾಗಿವೆ. ಪೋಟೋದಲ್ಲಿರುವ ವ್ಯಕ್ತಿಗಳಲ್ಲಿ ಒಬ್ಬರು,…