Fact Check: ತುಮಕೂರಿನಲ್ಲಿ ರಥ ಸುಟ್ಟ ಆರೋಪಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಇತ್ತೀಚೆಗೆ ಭಾರತದಲ್ಲಿ ಯಾವ ದುರ್ಘಟನೆ ಸಂಭವಿಸಿದರೂ ಪೂರ್ವಾಗ್ರಹಪೀಡಿತರಾಗಿ ಅದನ್ನು ಮುಸ್ಲಿಂ ಸಮುದಾಯವನ್ನು ಹೊಣೆ ಮಾಡುವ ಚಾಳಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ಸಹ ಇದಕ್ಕೆ ಬೆಂಬಲವಿತ್ತು ಧರ್ಮ ಧರ್ಮಗಳ ನಡುವೆ ದ್ವೇಷ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತೀಚೆಗೆ, “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ.” ಎಂದು ಪ್ರತಿಪಾದಿಸಿ ಪೋಸ್ಟರ್ ಒಂದನ್ನು ಹರಿಬಿಡಲಾಗಿದೆ….

Read More

ಮುಸ್ಲಿಂ ಸಮುದಾಯದ ಕುರಿತು ಪ್ರೊಪಗಂಡದ ಸುಳ್ಳು ವಿಡಿಯೋ ಹಂಚಿಕೊಂಡ ಪೋಸ್ಟ್‌ಕಾರ್ಡ್

ಜಗತ್ತಿನ ಯಾವುದೇ ರಾಷ್ಟ್ರದಲ್ಲೇ ಆಗಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ, ಧರ್ಮಗಳ ಮೇಲೆ, ಅಲ್ಲಿನ ಬಹುಸಂಖ್ಯಾತರು ನಿರಂತರವಾಗಿ ಶೋಷಿಸುತ್ತಾರೆ. ಮತ್ತು ಅವರ ಸಂಸ್ಕೃತಿಯನ್ನು ತುಚ್ಚಿಕರಿಸಿ, ಅವರ ಕಥೆಗಳನ್ನು, ಕೊಡುಗೆಗಳನ್ನು ಮರೆವಿಗೆ ಸರಿಸಿ, ಸಾಧ್ಯವಾದಷ್ಟು ಅವರ ಮೇಲೇ ಸಲ್ಲದ ಆರೋಪಗಳನ್ನು ಹೊರಿಸಿ ನಂತರ ಅವರ ಮೇಲೆ ನೇರ ದಾಳಿ ನಡೆಸುತ್ತವೆ. ಬಹುಸಂಖ್ಯಾತ ಕ್ರಿಶ್ಚಿಯನ್ ಪ್ರಾಭಲ್ಯದ ದೇಶಗಳಲ್ಲಿ ಯಹೂದಿ ಮತ್ತು ಮುಸ್ಲಿಮರನ್ನು ನಡೆಸಿಕೊಂಡಂತೆ, ಮುಸ್ಲಿಂ ದೇಶಗಳಲ್ಲಿ ಕ್ರಿಶ್ಚಿಯನ್ ಮತ್ತು ಹಿಂದುಗಳನ್ನು ನಡೆಸಿಕೊಂಡಂತೆ, ಬಹುಸಂಖ್ಯಾತ ಹಿಂದು ಸಮಾಜದ ಭಾರತದಲ್ಲಿ ಮುಸ್ಲೀಮರನ್ನು, ಕ್ರಿಶ್ಚಿಯನ್ನರನ್ನೂ ಹೀಗೆಯೇ…

Read More