Fact Check: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು
ಕಾಂಗ್ರೆಸ್ ನ ಲೋಕಸಭಾ ಪ್ರಣಾಳಿಕೆ 2024 ಬಿಡುಗಡೆ ಆದ ದಿನಗಳಿಂದಲೂ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಕೆಲವರು ಸುಳ್ಳುಗಳನ್ನು ಹಬ್ಬಿಸುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ “ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ. ಲವ್ ಜಿಹಾದ್ ಬೆಂಬಲಿಸಿ ಶಾಲೆಯಲ್ಲಿ ಬುರ್ಖಾವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ ಎಂದು ಸುದ್ದಿಯೊಂದನ್ನು ಹರಿಬಿಟ್ಟಿದ್ದರು. ನಂತರ ಇತ್ತೀಚೆಗೆ ರಾಜಸ್ತಾನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ” ಕಾಂಗ್ರೆಸ್ ನಿಮ್ಮ ಬಳಿ ಇರುವ…