ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ 16 ವರ್ಷದ ಬಾಲಕಿ ಮೊನಾಲಿಸಾ ಭೋಸ್ಲೆ ಪ್ರಯಾಗರಾಜ್ನ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡ ನಂತರ ರಾಷ್ಟ್ರೀಯ ಸದ್ದಿ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಈಕೆಯ ಕುರಿತು ವಿವಿಧ ರೀತಿಯಲ್ಲಿ ವರದಿಗಳನ್ನು ಮಾಡಲಾಗುತ್ತಿವೆ. ಇದೀಗ ಈಕೆ ಬಾಲಿವುಡ್ ಚಿತ್ರರಂಗಕ್ಕೆ ಕೂಡ ಪ್ರವೇಶವನ್ನು ಪಡೆದಿದ್ದಾಳೆ, ಇನ್ನೂ ಕೆಲವೇ ವರ್ಷಗಳಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾಳೆ ಎಂದು ಕೂಡ ಹಲವು ವರದಿಗಳು ಬರುತ್ತಿವೆ.

ಇದರ ಮಧ್ಯೆ ಇದೀಗ ಸಲ್ಮಾನ್ ಖಾನ್ ಜೊತೆಗಿನ ಮೊನಾಲಿಸಾ ಇರುವಂತೆ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ಬಳಕೆದಾರರು ಚಿತ್ರವನ್ನು ಹಂಚಿಕೊಂಡು, “ವೈರಲ್ ಹುಡುಗಿ ಮೊನಾಲಿಸಾ ಸಲ್ಮಾನ್ ಖಾನ್ ಒಟ್ಟಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನು ನಿಜವೆಂದು ಹಲವರು ಭಾವಿಸಿದ್ದಾರೆ. ಹೀಗೆ ವೈರಲ್ ಆಗುತ್ತಿರುವ ಫೋಟೋವಿನ ಹಿನ್ನೆಲೆ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಫೋಟೋಗೆ ಸಂಬಂಧಿಸಿದಂತೆ ಕೆಲವೊಂದು ಕೀ ವರ್ಡ್ಗಳನ್ನು ಬಳಸಿಕೊಂಡು ಮಾಧ್ಯಮ ವರದಿಗಳಿಗಾಗಿ ಹುಡುಕಾಟವನ್ನು ನಡೆಸಿದೆವು ಆದರೆ ವೈರಲ್ ಫೋಟೋಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಧಿಕೃತ ವರದಿಗಳು ನಮಗೆ ಕಂಡು ಬಂದಿಲ್ಲ. ಇನ್ನು ವೈರಲ್ ಫೋಟೋ ಕೂಡ ಎಡಿಟ್ ಮಾಡಿರುವ ರೀತಿ ಕಂಡು ಬಂದಿರುವುದು ಕೂಡ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತು

ಹೀಗಾಗಿ ನಾವು ವೈರಲ್ ಫೋಟೋವನ್ನು ಹೈವ್ ಮಾಡರೇಶನ್ AI ಡಿಟೆಕ್ಟರ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಶೇ. 99.7 ರಷ್ಟು AI ನಿಂದ ನಿರ್ಮಿಸಲಾಗಿದೆ ಎಂಬುದು ಖಚಿತವಾಗಿ.

ಇನ್ನು ವೈರಲ್ ಫೋಟೋವಿನ ಮೂಲ ಫೋಟೋವನ್ನು ಹುಡುಕಾಟ ನಡೆಸಲು ನಾವು ಗೂಗಲ್ ರಿವರ್ಸ್ ಇಮೇಜ್ನಲ್ಲಿ ವೈರಲ್ ಫೋಟೋವಿನ ಕೀ ಫ್ರೇಮ್ಗಳನ್ನು ಬಳಸಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 14 ಮೇ 2023 ರಂದು ನಟ ಸಲ್ಮಾನ್ ಖಾನ್ ಅವರು ತಮ್ಮ ತಾಯಿಯೊಂದಿಗೆ ತೆಗೆದುಕೊಂಡಿರುವ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವುದು ಕಂಡು ಬಂದಿದೆ. ಹಾಗಾಗಿ ವೈರಲ್ ಫೋಟೋ ಸುಳ್ಳು ಮಾಹಿತಿಯಿಂದ ಕೂಡಿದೆ ಮತ್ತು ತಿರುಚಲಾಗಿದೆ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿಯಲ್ಲಿ ನಟ ಸಲ್ಮಾನ್ ಖಾನ್ ಅವರು ಮೊನಾಲಿಸಾ ಭೋಸ್ಲೆ ಜೊತೆಗೆ ಫೋಟೋ ತೆಗೆದುಕೊಂಡಿದ್ದಾರೆ ಎಂದು ಸುಳ್ಳು ಮಾಹಿತಿಯಾಗಿದೆ. ವೈರಲ್ ಫೋಟೋವನ್ನು AI ಬಳಸಿ ತಿರುಚಲಾಗಿದೆ. ಮೂಲ ಫೋಟೋದಲ್ಲಿ ಸಲ್ಮಾನ್ ಖಾನ್ ತಮ್ಮ ತಾಯಿಯೊಂದಿಗೆ ಇರುವುದು ಕಂಡು ಬಂದಿದೆ. ಹಾಗಾಗಿ ವೈರಲ್ ಫೋಟೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಜನದಟ್ಟಣೆಯಿಂದ ತುಂಬಿ ತುಳುಕುತ್ತಿರುವ ರೈಲು ಮಹಾಕುಂಭಮೇಳದ್ದು ಎಂದು ಬಾಂಗ್ಲಾದ ವಿಡಿಯೋ ಹಂಚಿಕೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

