ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಈ ಯುವತಿಯ ನೃತ್ಯ ಕೌಶಲ್ಯಕ್ಕೆ ಮತ್ತು ಹಾವಭಾವಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರೆ, ಇನ್ನೂ ಕೆಲವರು ನಕಾರಾತ್ಮಕವಾಗಿ ಮತ್ತು ಅಶ್ಲೀಲ ಪದ ಬಳಕೆಯ ಕಮೆಂಟ್ಗಳನ್ನು ಮಾಡುತ್ತಿದ್ದಾರೆ. ಮತ್ತೆ ಕೆಲವರು ತಪ್ಪು ಮಾಹಿತಿಯೊಂದಿಗೆ ಈ ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ.
https://twitter.com/da_kerala_girl/status/1876849597676474857
ಇದರಲ್ಲಿ ಹಲವರು ಈ ಯುವತಿಯನ್ನು ಐಐಟಿ ವಿದ್ಯಾರ್ಥಿನಿ ಎಂದು ಬರೆದುಕೊಂಡು “ಈಗ ಐಐಟಿ ವಿದ್ಯಾರ್ಥಿಗಳು ಏತಕ್ಕಾಗಿ ಉದ್ಯೋಗವನ್ನು ಪಡೆದುಕೊಳ್ಳುತ್ತಿಲ್ಲ ಎಂಬುದನ್ನು ಪ್ರಶ್ನಿಸಬೇಡಿ” ಎಂದು ಇದೇ ವಿಡಿಯೋವನ್ನು ಶೇರ್ ಮಾಡುತ್ತಿದ್ದಾರೆ. ಈ ಬರಹಗಳನ್ನು ಗಮನಿಸಿದ ಹಲವರು ಐಐಟಿ ವಿದ್ಯಾರ್ಥಿಗಳ ಬಗ್ಗೆ ವಿವಿಧ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಇದೇ ವಿಡಿಯೋವನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವೈರಲ್ ವಿಡಿಯೋವಿನ ಹಿನ್ನೆಲೆ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ.
What kinda dance is this ?
Just meat shaking 😔🫨🫨. https://t.co/TUjv374qW5— Current Giggles (@CurrentGiggles) January 9, 2025
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯ್ತು. ಇದಕ್ಕಾಗಿ ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೆ ಜೆನ್ ಜನನಿ ಎಂಬ Instagram ಬಳಕೆದಾರರೊಬ್ಬರ ಖಾತೆಯೊಂದು ಪತ್ತೆಯಾಗಿದೆ. ಇದರಲ್ಲಿ 27 ಸೆಪ್ಟೆಂಬರ್ 2023 ರಂದು ಇದೇ ರೀತಿಯ ವಿಡಿಯೋವನ್ನು ಹಂಚಿಕೊಂಡಿರುವುದು ಕಂಡುಬಂದಿದೆ.

ಜನನಿ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಇನ್ನಷ್ಟು ಪರಿಶೀಲನೆ ನಡೆಸಿದಾಗ ಅವರ ಖಾತೆಯಲ್ಲಿ ಸಾಕಷ್ಟು ನೃತ್ಯದ ವಿಡಿಯೋಗಳು ಕೂಡ ಕಂಡು ಬಂದಿದೆ. ಅವರು ಹಂಚಿಕೊಂಡಿರುವ ಮಾಹಿತಿಯಲ್ಲಿ ತಾವು ಬೆಂಗಳೂರಿನಲ್ಲಿ ನೆಲೆಸಿರುವ ಕಲಾವಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ. ಇವರ ಇನ್ನೂ ಕೆಲವೊಂದು ವಿಡಿಯೋಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ divinefemmeheels ಸೇರಿದಂತೆ, ಹಲವರನ್ನು ಟ್ಯಾಗ್ ಮಾಡಿ ವಿಡಿಯೋ ಮಾಡಿರುವುದು ಕಂಡುಬಂದಿದೆ. ಇದರಲ್ಲಿ ಕೆಲವರು ನೃತ್ಯ ಕಲಾವಿದರಾಗಿದ್ದು ಅವರೊಂದಿಗೆ ಸಹಭಾಗಿತ್ವದಲ್ಲಿ ಹಲವು ಕಡೆಗಳಲ್ಲಿ ನೃತ್ಯ ಮಾಡಿರುವುದು ಮತ್ತು ಆ ವಿಡಿಯೋಗಳನ್ನು ಹಂಚಿಕೊಂಡಿರುವುದು ಕಂಡುಬಂದಿದೆ.


ಇನ್ನು ಈ ಕುರಿತು ವಿಡಿಯೋ ವೈರಲ್ ಆಗುತ್ತಿದ್ದಂತೆ ಜನನಿ ತಮ್ಮ Instagram ಸ್ಟೋರಿಯಲ್ಲಿ ಐಐಟಿಯೊಂದಿಗೆ ನನಗೆ ಯಾವುದೇ ರೀತಿಯ ಸಂಬಂಧವಿಲ್ಲ. ದಯವಿಟ್ಟು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕಂಡುಬಂದರೆ ರಿಪೋರ್ಟ್ ಮಾಡಿ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಐಐಟಿ ವಿದ್ಯಾರ್ಥಿಗಳು ಫ್ರೆಶರ್ ಪಾರ್ಟಿಯಲ್ಲಿ ನೃತ್ಯ ಮಾಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಸುಳ್ಳು ನಿರೂಪಣೆಯಿಂದ ಕೂಡಿದೆ. ವೈರಲ್ ವಿಡಿಯೋ ನೃತ್ಯ ಕಲಾವಿದೆಯೊಬ್ಬರಿಗೆ ಸಂಬಂಧಿಸಿದಾಗಿದ್ದು, ಅವರೇ ವೈರಲ್ ವಿಡಿಯೋ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ಸುಳ್ಳು ನಿರೂಪಣೆಯಿಂದ ಕೂಡಿರುವ ವಿಡಿಯೋವನ್ನು ಹಂಚಿಕೊಳ್ಳಬೇಡಿ.
ಇದನ್ನೂ ಓದಿ : Fact Check: ಹಾಸ್ಯನಟ ಮುನಾವರ್ ಫಾರೂಕಿಯನ್ನು ವಕೀಲರೊಬ್ಬರು ಇತ್ತೀಚೆಗೆ ಥಳಿಸಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

