15 ಫೆಬ್ರವರಿ 2025 ರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಐದು ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದರು ಮತ್ತು 12̧ ಮಂದಿಗೂ ಹೆಚ್ಚು ಜನರು ಗಾಯಗೊಂಡಿದ್ದರು. ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ಪ್ರಯಾಗ್ರಾಜ್ಗೆ ಹೋಗುವ ಪ್ರಯಾಣಿಕರ ಹಠಾತ್ ಹೆಚ್ಚಳದಿಂದಾಗಿ ಈ ಘಟನೆ ಸಂಭವಿಸಿದೆ. ಇದರ ನಡುವೆ ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಇದನ್ನ ದೆಹಲಿಯ ರೈಲು ನಿಲ್ದಾಣದಲ್ಲಿ ನಡೆದು ಕಾಲ್ತುಳಿತ ದುರಂತಕ್ಕೆ ಸಂಬಂಧ ಪಟ್ಟಿದ್ದು ಎಂದು ಹಲವರು ಹಂಚಿಕೊಳ್ಳುತ್ತಿದ್ದಾರೆ.
https://www.youtube.com/watch?v=6W7wxVV69XQ
ವೈರಲ್ ವಿಡಿಯೋದಲ್ಲಿ ಕೂಡ ಸಾಕಷ್ಟು ಜನ ದಟ್ಟಣೆ ಇರುವುದನ್ನ ಕಾಣಬಹುದಾಗಿದೆ. ಈ ವಿಡಿಯೋದಲ್ಲಿ ಕೆಲವೊಂದು ಕಡೆಯಲ್ಲಿ ನೂಕು ನುಗ್ಗಲು ಉಂಟಾಗುವುದು ಕೂಡ ಸ್ಪಷ್ಟವಾಗಿ ಕಂಡು ಬಂದಿದೆ. ಹೀಗಾಗಿ ಹಲವರು ವೈರಲ್ ವಿಡಿಯೋವನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ನಾವು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಕೆಲವೊಂದು ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 28 ಜನವರಿ 2025 ರಂದು ಅದೇ ವೀಡಿಯೊವನ್ನು ಒಳಗೊಂಡ ಇನ್ಸ್ಟಾಗ್ರಾಮ್ ಪೋಸ್ಟ್ವೊಂದು ಕಂಡು ಬಂದಿದೆ. “ಎಚ್ಚರವಾಗಿರಿ, ಎಚ್ಚರವಾಗಿರಿ, ಜನಸಂದಣಿಯನ್ನು ತಪ್ಪಿಸಿ” #Ayodhya, #RamJanmabhoomi, #RamMandirAyodhya, #UP, #UPTourism, #Instagram, #Reels, #Mahakumbh2025, #Prayagraj, #TheMySangam, ಮತ್ತು #TriveniSangam ನಂತಹ ಹ್ಯಾಶ್ಟ್ಯಾಗ್ಗಳೊಂದಿಗೆ ಹಂಚಿಕೊಂಡಿರುವುದು ಕಂಡು ಬಂದಿದೆ. ಇವುಗಳಲ್ಲಿ ಗಮನಿಸಿದಾಗ ವಿಡಿಯೋ ದೆಹಲಿಗೆ ಸಂಬಂಧಿಸಿದ್ದಲ್ಲ, ಆಯೋದ್ಯೆಗೆ ಸಂಬಂಧಿಸಿದ್ದು ಎಂಬುದು ಖಚಿತವಾಗಿದೆ.

ಹಾಗಾಗಿ ಈ ಬಗ್ಗೆ ಇನ್ನಷ್ಟು ಹುಡುಕಾಟವನ್ನು ನಡೆಸಲು ನಮ್ಮ ತಂಡ ಮುಂದಾಯಿತು. ಇದಕ್ಕಾಗಿ ನಾವು ಕೆಲವೊಂದು ಕೀ ವರ್ಡ್ಗಳನ್ನು ಬಳಸಿಕೊಂಡು ಗೂಗಲ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಆಗ ” ದಿ ಕ್ವಿಂಟ್ ” ಪತ್ರಕರ್ತ ಪಿಯೂಷ್ ರೈ ಅವರು 27 ಜನವರಿ 2025 ರಂದು ಹಂಚಿಕೊಂಡ ಎಕ್ಸ್ ಪೋಸ್ಟ್ ಒಂದು ಕಂಡು ಬಂದಿದೆ. ಇದರಲ್ಲಿ ಅವರು ಮಹಾ ಕುಂಭ ಮೇಳಕ್ಕೆ ಭೇಟಿ ನೀಡುವವರು ಬಾಲ ರಾಮನನ್ನು ನೋಡಲು ಆಗಮಿಸುತ್ತಿದ್ದಾರೆ ಎಂದು ಬರೆದುಕೊಂಡಿರುವುದು ಕಂಡು ಬಂದಿದೆ. ಹೀಗಾಗಿ ಈ ವಿಡಿಯೋ ಆಯೋಧ್ಯೆಗೆ ಸಂಬಂಧಿಸಿದ್ದಾಗಿದೆ ಎಂಬುದು ನಮಗೆ ಸ್ಪಷ್ಟವಾಗಿದೆ.
Massive Kumbh rush in other temple cities in UP owing to massive footfall in Prayagraj.
Visuals from Ayodhya. pic.twitter.com/kEnNXNveH6
— Piyush Rai (@Benarasiyaa) January 27, 2025
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತಳಿತದ ಸಂದರ್ಭದಲ್ಲಿ ಸೇರಿದ್ದ ಜನ ಸಮೂಹ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಆಯಧ್ಯೆಗೆ ಸಂಬಂಧಿಸಿದ್ದಾಗಿದೆ. ಹಾಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ನಟ ಅಮಿರ್ ಖಾನ್ ‘ಇಂಡಿಯಾಸ್ ಗಾಟ್ ಲ್ಯಾಟೆಂಟ್’ ಕಾರ್ಯಕ್ರಮದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

