ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಭಾರತ ಕ್ರಿಕೆಟ್ ತಂಡದ ಇತರೆ ಆಟಗಾರರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ವಿರಾಟ್ ಕೊಹ್ಲಿ ಅವರ ಜೊತೆ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಬಸ್ನ ಒಳಗೆ ಹೋಳಿ ಹಬ್ಬವನ್ನು ಬಣ್ಣಗಳನ್ನು ಎರಚಿ, ನೃತ್ಯ ಮಾಡುವ ಮೂಲಕ ಸಂಭ್ರಮಿಸುವುದನ್ನು ಕಾಣಬಹುದಾಗಿದೆ. ಈ ವಿಡಿಯೋವನ್ನು ಹಲವರು ಇತ್ತೀಚಿನದು ಎಂದು ಹಂಚಿಕೊಳ್ಳುತ್ತಿದ್ದಾರೆ.

ವೈರಲ್ ವಿಡಿಯೋದಲ್ಲೂ ಕೂಡ ಭಾರತೀಯ ಕ್ರಿಕೆಟಿಗರು ಹೋಳಿ ಹಬ್ಬವನ್ನು ಬಸ್ನೊಳಗೆ ಸಂಭ್ರಮದಿಂದ ಆಚರಿಸುವುದನ್ನು ಕಾಣಬಹುದಾಗಿದೆ. ಹೀಗಾಗಿ ಇದು ಇತ್ತೀಚಿನ ವಿಡಿಯೋ ಎಂದು ಭಾವಿಸಿರುವ ಹಲವು ಮಂದಿ ಸಾಮಾಜಿಕ ಜಾಲತಾಣದ ಬಳಕೆದಾರರು ತಮ್ಮ ವೈಯಕ್ತಿಕ ಖಾತೆಗಳಲ್ಲಿ ವಿಡಿಯೋವನ್ನು ಹಂಚಿಕೊಂಡು ವಿವಿಧ ಬರಹಗಳನ್ನು ಬರೆದುಕೊಂಡಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
Virat Kohli and team India fully enjoying Holi. pic.twitter.com/XiognDen5G
— Mufaddal Vohra (@mufaddal_vohra) March 7, 2023
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 2023ರಲ್ಲಿ ಪ್ರಕಟವಾದ ಹಲವು ಸುದ್ದಿ ವರದಿಗಳು ಕಂಡುಬಂದಿದ್ದು, ಇದರ ಪ್ರಕಾರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕೂ ಮುನ್ನ ಇಡೀ ಭಾರತ ತಂಡ ಹೋಳಿ ಆಚರಿಸಿದೆ ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ.

7 ಮಾರ್ಚ್ 2023 ರಂದು ಇಂಡಿಯಾ ಟಿವಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದ ವರದಿಯಲ್ಲಿ ಕೂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಪಂದ್ಯವಳಿಗೂ ಮುನ್ನ ಭಾರತ ತಂಡದ ಸದಸ್ಯರು ಹೋಳಿ ಹಬ್ಬವನ್ನು ಆಚರಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಕಂಡುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಾವು ಶುಭ್ಮನ್ ಗಿಲ್ ಅವರ ಇನ್ಸ್ಟಾಗ್ರಾಂ ಖಾತೆಯನ್ನು ಪರಿಶೀಲನೆ ನಡೆಸಿದೆವು. ಈ ವೇಳೆ ನಮಗೆ 7 ಮಾರ್ಚ್ 2023 ರಂದು ಗಿಲ್ ಅವರು ಇದೇ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವುದು ಕಂಡು ಬಂದಿದೆ. ಹೀಗಾಗಿ ವೈರಲ್ ವಿಡಿಯೋ ಹಳೆಯದಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಭಾರತ ತಂಡದ ಕ್ರಿಕೆಟಿಗರು ಇತ್ತೀಚಿಗೆ ಹೋಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ 2023ರದ್ದಾಗಿದೆ. ಹಾಗಾಗಿ ಸುಳ್ಳು ಮಾಹಿತಿಯೊಂದಿಗೆ ಶೇರ್ ಆಗುತ್ತಿರುವ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಹೆಬ್ಬಾವು ದನವನ್ನು ನುಂಗಲು ಯತ್ನಿಸುವ ವಿಡಿಯೋ AI ನಿಂದ ರಚಿಸಲಾಗಿದೆ ಹೊರತು ನಿಜವಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

